ETV Bharat / state

ತುಮಕೂರು ನಗರ ಪಾಲಿಕೆ ಪೌರ ಕಾರ್ಮಿಕರ ಖಾಯಂ ಆದೇಶಕ್ಕೆ ತಡೆ - etv bharat kannada

250 ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವಂತೆ ಹೈಕೋರ್ಟ್‌ನ ಏಕ ಸದಸ್ಯಪೀಠ ನೀಡಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ.

Etv Bharattwo-judge-bench-stayed-the-order-retain-civic-workers
ತುಮಕೂರು ನಗರ ಪಾಲಿಕೆ ಪೌರ ಕಾರ್ಮಿಕ ಕಾಯಂ ಗೊಳಿಸುವಂತೆ ನೀಡಿದ್ದ ಆದೇಶಕ್ಕೆ ದ್ವಿಸದಸ್ಯ ಪೀಠದಿಂದ ತಡೆಯಾಜ್ಞೆ
author img

By

Published : Jun 5, 2023, 10:39 PM IST

Updated : Jun 8, 2023, 12:43 PM IST

ಬೆಂಗಳೂರು: ತುಮಕೂರು ನಗರ ಪಾಲಿಕೆಯಲ್ಲಿ ದಿನಗೂಲಿ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 250 ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವಂತೆ ಹೈಕೋರ್ಟ್‌ನ ಏಕ ಸದಸ್ಯಪೀಠ ನೀಡಿದ್ದ ಆದೇಶಕ್ಕೆ, ವಿಭಾಗೀಯ ಪೀಠ ತಡೆಯಾಜ್ಞೆ ನೀಡಿ ಆದೇಶಿಸಿದೆ. ತುಮಕೂರು ನಗರ ಪಾಲಿಕೆ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರಿದ್ದ ವಿಭಾಗೀಯಪೀಠ ಈ ಆದೇಶ ನೀಡಿದೆ.

ವಿಚಾರಣೆ ಸಂದರ್ಭದಲ್ಲಿ ತುಮಕೂರು ಪಾಲಿಕೆ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ, ತುಮಕೂರು ಪೌರ ಕಾರ್ಮಿಕರ ಸಂಘ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ನೀಡಿದೆ. ಅಲ್ಲದೆ, ಏಕ ಸದಸ್ಯಪೀಠ ತನ್ನ ತೀರ್ಪಿನಲ್ಲಿ ಉಲ್ಲೇಖಿಸಿರುವಂತೆ ತುಮಕೂರಿನಲ್ಲಿ 3.55 ಲಕ್ಷ ಜನರಿದ್ದು, 507 ಪೌರ ಕಾರ್ಮಿಕರ ಅಗತ್ಯವಿದೆ. ಆದರೆ, ಸರ್ಕಾರ 254 ಹುದ್ದೆಗಳಿಗೆ ಮಂಜೂರು ಮಾಡಿದ್ದರೆ, ಕೇವಲ 112 ಪೌರಕಾರ್ಮಿಕರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗಾಗಿ ಈ ಮೇಲ್ಮನವಿ ಇತ್ಯರ್ಥಕ್ಕೆ ರಾಜ್ಯ ಸರ್ಕಾರ ಈ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಬೇಕು ಎಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು. ಅಲ್ಲದೆ, ಇದೇ ಸಂದರ್ಭದಲ್ಲಿ ಮುಂದಿನ ಆದೇಶದವರೆಗೆ ಏಕಸದಸ್ಯಪೀಠದ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಏಕ ಸದಸ್ಯಪೀಠದ ಆದೇಶವೇನು?: ತುಮಕೂರು ನಗರ ಪಾಲಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕ ಸದಸ್ಯಪೀಠ. ಕಳೆದ ಡಿಸೆಂಬರ್​ನಲ್ಲಿ ಮುಂದಿನ ಮೂರು ತಿಂಗಳಲ್ಲಿ ತುಮಕೂರು ನಗರ ಪಾಲಿಕೆಯು (ಹಿಂದಿನ ನಗರಸಭೆ)ಯ 250 ಪೌರ ಕಾರ್ಮಿಕರ ಸೇವೆಯನ್ನು ಅವರು ಕೆಲಸಕ್ಕೆ ಸೇರಿದ ದಿನಾಂಕದಿಂದ ಪೂರ್ವಾನ್ವಯವಾಗುವಂತೆ ಕಾಯಂಗೊಳಿಸಬೇಕು. ಅವರ ಕೆಲಸಕ್ಕೆ ಸಮಾನ ವೇತನ ಹಾಗೂ ಹಿಂಬಾಕಿ ಪಾವತಿಸಬೇಕು ಎಂದು ಹೈಕೋರ್ಟ್ ಆದೇಶಿಸಿತ್ತು. ಆ ಮೂಲಕ ಕಳೆದ 20 ವರ್ಷಗಳಿಂದ ನಡೆಯುತ್ತಿದ್ದ ಕಾನೂನು ಸಮರಕ್ಕೆ ಅಂತ್ಯ ಹಾಡಿದೆ.

ಪ್ರಕರಣದ ಹಿನ್ನೆಲೆ ಏನು?: 2002ರ ವೇಳೆಗೆ ತುಮಕೂರು ನಗರಸಭೆಯಲ್ಲಿ 250 ಪೌರ ಕಾರ್ಮಿಕರು ದಿನಕೂಲಿ ಆಧಾರದಲ್ಲಿ ದುಡಿಯುತ್ತಿದ್ದರು. ಸೇವೆ ಕಾಯಂಗೊಳಿಸಲು ಕೋರಿ ನಗರಸಭೆ ಪೌರ ಕಾರ್ಮಿಕರ ಸಂಘ ಸಲ್ಲಿಸಿದ್ದ ಮನವಿಯನ್ನು ಸರ್ಕಾರ 2002ರ ನವೆಂಬರ್‌ನಲ್ಲಿ ಕೈಗಾರಿಕಾ ನ್ಯಾಯಾಧಿಕರಣಕ್ಕೆ ಶಿಫಾರಸು ಮಾಡಿತ್ತು. ಮೊದಲಿಗೆ ಪೌರಕಾರ್ಮಿಕರು ಸೇವೆ ಕಾಯಂಗೆ ಅರ್ಹರಲ್ಲ ಎಂದು ನ್ಯಾಯಾಧಿಕರಣ 2006ರ ಜು.4ರಂದು ಆದೇಶಿಸಿತ್ತು. ಆ ಆದೇಶ ಪ್ರಶ್ನಿಸಿ ಪೌರಕಾರ್ಮಿಕರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ಏಕ ಸದಸ್ಯಪೀಠ 2009ರಲ್ಲಿ ವಜಾಗೊಳಿಸಿತ್ತು. ಆದರೆ, ಸಂಘದ ಮೇಲ್ಮನವಿಯನ್ನು ಪರಿಗಣಿಸಿದ್ದ ವಿಭಾಗೀಯ ಪೀಠ, ಪ್ರಕರಣವನ್ನು ಮತ್ತೆ ಪರಿಶೀಲಿಸುವಂತೆ ನ್ಯಾಯಾಧಿಕರಣಕ್ಕೆ ನಿರ್ದೇಶಿಸಿತ್ತು.

ಮತ್ತೆ ಹೊಸದಾಗಿ ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ, 2012ರ ಸೆ. 26ರಂದು ದಿನಗೂಲಿ ನೌಕರರ ಸೇವೆ ಕಾಯಂಗೊಳಿಸದೆ ಕೆಲಸ ಮಾಡಿಸಿಕೊಳ್ಳುತ್ತಿರುವುದು, ಸಮಾನ ಕೆಲಸಕ್ಕೆ ಸಮಾನ ವೇತನ ಪಾವತಿಸದಿರುವುದು, ಪೌರ ಕಾರ್ಮಿಕರಿಗೆ ಪ್ರತಿ ವರ್ಷ ಸಮವಸ್ತ್ರ, ಪಾದರಕ್ಷೆ, ಸುರಕ್ಷಿತ ಕವಚ ನೀಡದಿರುವುದು ನ್ಯಾಯಸಮ್ಮತವಲ್ಲ. ಆದ್ದರಿಂದ ಅವರನ್ನು ನೌಕರಿಗೆ ಸೇರಿದ ದಿನದಿಂದ ಪೂರ್ವಾನ್ವಯವಾಗುವಂತೆ ಕಾಯಂಗೊಳಿಸಬೇಕು ಎಂದು ಆದೇಶ ನೀಡಿತ್ತು. ಅದರ ವಿರುದ್ಧ ಪಾಲಿಕೆ ಮೇಲ್ಮನವಿ ಸಲ್ಲಿಸಿದೆ.

ಇದನ್ನೂ ಓದಿ : ರೂಪಾ ಮೌದ್ಗಿಲ್​ ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

Last Updated : Jun 8, 2023, 12:43 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.