ETV Bharat / state

ಬೈಕ್​ಗೆ ಟಿಪ್ಪರ್ ಡಿಕ್ಕಿಯಾಗಿ ತಾಯಿ-ಮಗು ಸಾವು: ಹೆಲ್ಮೆಟ್​ನಿಂದ ಉಳಿಯಿತು ಚಾಲಕನ ಪ್ರಾಣ - marathahalli bike tipper accident

ಕೆ.ಆರ್.ಪುರದಿಂದ ತಮಿಳುನಾಡಿಗೆ ತೆರಳುತ್ತಿದ್ದ ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

two-killed-in-road-accident-in bengaluru
ಬೈಕ್​ಗೆ ಟಿಪ್ಪರ್ ಡಿಕ್ಕಿಯಾಗಿ ತಾಯಿ-ಮಗು ಸಾವು
author img

By

Published : Oct 25, 2021, 12:23 PM IST

ಬೆಂಗಳೂರು: ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಹಾಗೂ ಮಗು ಸ್ಥಳದಲ್ಲೇ ಸಾವಿಗೀಡಾಗಿದ್ದು, ಬೈಕ್​ ಚಾಲನೆ ಮಾಡುತ್ತಿದ್ದ ವ್ಯಕ್ತಿಯು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಒಲ್ಡ್ ಏರ್​​ಪೋರ್ಟ್ ಸಂಚಾರ ಠಾಣೆ ವ್ಯಾಪ್ತಿಯ ಮಾರತ್ತಹಳ್ಳಿ ಹೊರ ವರ್ತುಲ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ಘಟನೆ ಸಂಭವಿಸಿದೆ.

ತಮಿಳುನಾಡು ಮೂಲದ ಶಿವಕುಮಾರ್​​ ಎಂಬುವರು ಕೆ.ಆರ್.ಪುರದಿಂದ ಪತ್ನಿ ಶ್ರೀದೇವಿ ಹಾಗೂ ಮಗು ದೀಕ್ಷಿತ್​ನೊಂದಿಗೆ ತಮಿಳುನಾಡಿನ ಧರ್ಮಪುರಿಗೆ ಬೈಕ್​ನಲ್ಲಿ ತೆರಳುತ್ತಿದ್ದರು. ಈ ವೇಳೆ ಮಾರತ್ತಹಳ್ಳಿ ಹೊರ ವರ್ತುಲ ರಸ್ತೆ ಬಳಿ ಹಿಂಬದಿಯಿಂದ ಬೈಕ್​ಗೆ ಟಿಪ್ಪರ್ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಶ್ರೀದೇವಿ (21) ಹಾಗೂ ದೀಕ್ಷಿತ್ ಸ್ಥಳದಲ್ಲೇ ಅಸುನೀಗಿದ್ದಾರೆ. ಟಿಪ್ಪರ್​ ಚಾಲಕನ ಅತಿ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ.

two-killed-in-road-accident-in bengaluru
ತಾಯಿ-ಮಗು

ಹೆಲ್ಮೆಟ್ ಧರಿಸಿದ್ದರಿಂದ ಬೈಕ್​ ಚಾಲಕ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಆಧರಿಸಿ ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಮೃತದೇಹಗಳನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದಾರೆ. ಟಿಪ್ಪರ್ ಚಾಲಕನನ್ನು ಪೊಲೀಸರು ವಶಕ್ಕೆ‌ ಪಡೆದುಕೊಂಡಿದ್ದು, ನಿರ್ಲಕ್ಷ್ಯ ಹಾಗೂ ವೇಗದ ಚಾಲನೆಯಡಿ ಒಲ್ಡ್ ಏರ್​​ಪೋರ್ಟ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಗಳ ಮದ್ವೆಗಾಗಿ ಕೂಲಿ ಕೆಲಸಕ್ಕೆ ತೆರಳಿದ ಪೋಷಕರು; ಟ್ರ್ಯಾಕ್ಟರ್ ಪಲ್ಟಿಯಾಗಿ ಪುತ್ರಿ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.