ಬೆಂಗಳೂರು: ಬೈಕ್‌ನಲ್ಲಿ ಬಂದು ಮೊಬೈಲ್ ಕದಿಯುತ್ತಿದ್ದ ಇಬ್ಬರು ಖದೀಮರನ್ನು ಕೆಂಗೇರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಲೋಕೇಶ್ ಮತ್ತು ಚೇತನ್ ಬಂಧಿತರಾಗಿದ್ದು, 1 ಲಕ್ಷ ರೂ. ಮೌಲ್ಯದ ಐದು ಮೊಬೈಲ್ ಫೋನ್ ಮತ್ತು ಎರಡು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ದೂರುದಾರರು ಜುಲೈ 3 ರ ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಮನೆಯ ಬಳಿ ಸೈಕಲ್‌ನಲ್ಲಿ ಹೋಗುತ್ತಿದ್ದರು. ಆ ಸಮಯದಲ್ಲಿ ಇಬ್ಬರು ಅಪರಿಚಿತರು ಹೊಂಡಾ ಡಿಯೋ ದ್ವಿಚಕ್ರ ವಾಹನದಲ್ಲಿ ಬಂದು, ರೆಡ್ಮಿ 9ಎ ಮೊಬೈಲ್ ಫೋನ್ ಕಿತ್ತುಕೊಂಡು ಎಸ್ಕೇಪ್ ಆಗಿದ್ದರು. ಈ ಬಗ್ಗೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದರು ಎಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ.
ಪ್ರಕರಣದ ಆರೋಪಿಗಳ ಪತ್ತೆಗಾಗಿ ಕೆಂಗೇರಿ ಪೊಲೀಸ್ ಇನ್ಸ್‌ಪೆಕ್ಟರ್ ಸಿ.ವಸಂತ್ ಹಾಗು ಸಿಬ್ಬಂದಿ, ಜುಲೈ 6 ರಂದು ಇಬ್ಬರು ಆರೋಪಿಗಳನ್ನು ಪತ್ತೆ ಮಾಡಿ ವಿಚಾರಣೆಗೆ ಒಳಪಡಿಸಿದ್ದರು. ಬಂಧಿತರಿಂದ 1,00,000 ರೂ ಬೆಲೆ ಬಾಳುವ 5 ಮೊಬೈಲ್ ಫೋನ್‌ಗಳನ್ನು ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಪತ್ತೆಯಿಂದ ಕೆಂಗೇರಿ ಪೊಲೀಸ್ ಠಾಣೆಯಲ್ಲಿ ವರದಿಯಾಗಿದ್ದ 2 ಮೊಬೈಲ್ ಸುಲಿಗೆ ಪ್ರಕರಣಗಳು ಪತ್ತೆಯಾಗಿದ್ದು, ಉಳಿದ 3 ಮೊಬೈಲ್ ಫೋನ್‌ಗಳ ವಾರಸುದಾರರ ಪತ್ತೆ ಕಾರ್ಯ ಮುಂದುವರೆದಿದೆ ಎಂದು ಮಾಹಿತಿ ನೀಡಿದ್ದಾರೆ.