ETV Bharat / state

ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರಿಂದ ಮತ್ತಿಬ್ಬರ ಬಂಧನ

ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದ ಕೋವಿಡ್ ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇದುವರೆಗೆ 12 ಜನರ ಬಂಧನವಾಗಿದೆ.

Bed blocking case
ಸಿಸಿಬಿ ಪೊಲೀಸರಿಂದ ಮತ್ತಿಬ್ಬರ ಬಂಧನಸಿಸಿಬಿ ಪೊಲೀಸರಿಂದ ಮತ್ತಿಬ್ಬರ ಬಂಧನ
author img

By

Published : May 27, 2021, 1:14 PM IST

ಬೆಂಗಳೂರು: ಕೋವಿಡ್ ಬೆಡ್ ಬ್ಲಾಕಿಂಗ್​ ಪ್ರಕರಣ ಬಗೆದಷ್ಟು ಆಳವಾಗಿದ್ದು, ದಿನೇ ದಿನೆ ಬಂಧಿತರ ‌ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಎರಡು ದಿನಗಳ ಹಿಂದೆಯಷ್ಟೇ ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತನ ಬಂಧನವಾಗಿತ್ತು. ಇದರ ಬೆನ್ನಲ್ಲೇ ಅವ್ಯವಹಾರದಲ್ಲಿ ಭಾಗಿಯಾಗಿದ್ದ ಇನ್ನಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವರುಣ್ ಹಾಗೂ ಯಶವಂತ ಕುಮಾರ್ ಬಂಧಿತ ಆರೋಪಿಗಳು. ಈ ಪೈಕಿ ವರುಣ್ ಬಿಬಿಎಂಪಿ ದಕ್ಷಿಣ ವಲಯ ಕೊವಿಡ್ ವಾರ್ ರೂಂ ಹೆಲ್ಪ್ ಲೈನ್​ನಲ್ಲಿ ಕೆಲಸ ಮಾಡುತ್ತಿದ್ದ. ಕೊರೊನಾ ಪ್ರಕರಣಗಳು ಹೆಚ್ಚಾದ ಕಾರಣ ನಗರದ ಆಸ್ಪತ್ರೆಗಳಲ್ಲಿ ಬೆಡ್ ಅಭಾವ ಸೃಷ್ಟಿಯಾಗತೊಡಗಿತ್ತು. ಈ ಪರಿಸ್ಥಿತಿಯ ದುರ್ಬಳಕೆ ಮಾಡಿಕೊಂಡ ವರುಣ್, ಬೆಡ್ ಅಗತ್ಯವಿದ್ದವರ ಮೊಬೈಲ್ ನಂಬರ್ ಸಂಗ್ರಹಿಸಿ ಸ್ನೇಹಿತ ಯಶವಂತ ಕುಮಾರ್ ಮೂಲಕ ಕರೆ ಮಾಡಿಸುತ್ತಿದ್ದ‌‌. ಐಸಿಯುನಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್ ಸೌಲಭ್ಯವಿರುವ ಬೆಡ್ ಕೊಡಿಸುವುದಾಗಿ ಭರವಸೆ ನೀಡಿ ಹಣಕ್ಕೆ ಡಿಮ್ಯಾಂಡ್ ಮಾಡುತ್ತಿದ್ದ. ಬಳಿಕ ಬ್ಯಾಂಕ್ ಅಕೌಂಟ್ ನಂಬರ್ ನೀಡಿ ರೋಗಿಯ ಕುಟುಂಬಸ್ಥರಿಂದ ಹಣ ಹಾಕಿಸಿಕೊಳ್ಳುತ್ತಿದ್ದ. ಹಣ ಪಡೆದು ಸರ್ಕಾರಿ ಕೋಟಾದಡಿ ಬೆಡ್ ಬ್ಲಾಕ್‌ ಮಾಡಿಸುತ್ತಿದ್ದ. ಇದುವರೆಗೆ ಎಷ್ಟು ಮಂದಿಯಿಂದ ಆರೋಪಿಗಳು ಹಣ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಇದುವರೆಗೆ 12 ಜನರ ಬಂಧನವಾಗಿದೆ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್

ಓದಿ : ಬೆಡ್ ಬ್ಲಾಕಿಂಗ್​ ಧಂದೆ: ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ಒತ್ತಾಯಿಸಿ ಕಮಿಷನರ್​ಗೆ ದೂರು

ಪ್ರಕರಣದ ಹಿನ್ನೆಲೆ: ಮೇ 2ರಂದು ಬಿಬಿಎಂಪಿ ದಕ್ಷಿಣ ವಲಯ ಕೋವಿಡ್ ವಾರ್ ರೂಂಲ್ಲಿ ಬೆಡ್​ ಬ್ಲಾಕಿಂಗ್ ದಂಧೆ ನಡೆಯುತ್ತಿರುವುದನ್ನು ಸಂಸದ ತೇಜಸ್ವಿ ಸೂರ್ಯ ಬಯಲಿಗೆಳೆದಿದ್ದರು. ಇದಾದ ಮರುದಿನ ಮೇ 3ರಂದು ಪ್ರಕರಣಕ್ಕೆ ಸಂಬಂಧಟ್ಟಂತೆ ವಾರ್​ ರೂಂ ಸಿಬ್ಬಂದಿ ನೇತ್ರಾವತಿ ಮತ್ತು ರೋಹಿತ್ ಎಂಬುವರನ್ನು ಜಯನಗರ ಪೊಲೀಸರು ಬಂಧಿಸಿದ್ದರು. ಪ್ರಕರಣ ಗಂಭೀರತೆ ಅರಿತು ನಗರ‌ ಪೊಲೀಸ್ ಆಯುಕ್ತ ಕಮಲ್ ಪಂತ್ ಸಿಸಿಬಿಗೆ ಹಸ್ತಾಂತರಿಸಿದ್ದರು.‌ ತನಿಖೆ ಕೈಗೊಂಡ ಸಿಸಿಬಿ ಪೊಲೀಸರು ಇಬ್ಬರು ವೈದ್ಯರು ಸೇರಿದಂತೆ 12 ಮಂದಿ ಆರೋಪಿಗಳನ್ನು ಇದುವರೆಗೆ ಬಂಧಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.