ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಚಿಕ್ಕಜಾಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಸೈಯದ್ ವಸೀಂ, ರೋಷನ್ ಉಲ್ಲಾಬೇಗ್ ಬಂಧಿತ ಆರೋಪಿಗಳು. ಆರೋಪಿಗಳು ಇದೇ ತಿಂಗಳ 14 ರಂದು ಸುಮಾರು 4-20ರ ಸಮಯದಲ್ಲಿ ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯ ಏರ್ಪೋರ್ಟ್ಗೆ ಕೆಲಸಕ್ಕೆ ಹೋಗಲು ನಿಂತಿದ್ದ, ಶ್ರೀ ಶಿವಾಜಿ ಅಪ್ಪಾರಾಯಿ ರಾಯಪ್ಪ ಎಂಬುವರಿಗೆ ಇವರಿಬ್ಬರು ದ್ವಿಚಕ್ರ ವಾಹನದಲ್ಲಿ ಬಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ, ಸುಲಿಗೆ ಮಾಡಿದ್ರು. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತಂಡವನ್ನು ರಚಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನು ಆರೋಪಿಗಳ ವಿರುದ್ಧ ಬಾಗಲೂರು ಪೊಲೀಸ್ ಠಾಣೆ, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣಗಳು ಕೂಡ ಇವೆ. ಬಂಧಿತ ಆರೋಪಿಗಳಿಂದ ಚಿನ್ನದ ಮಾಂಗಲ್ಯ ಸರ, ಒಂದು ಸ್ಯಾಮ್‌ಸಂಗ್ ಮೊಬೈಲ್ ಫೋನ್, ನಗದು, ಕೃತ್ಯಕ್ಕೆ ಬಳಸಿದ ಮಚ್ಚು , ಒಂದು ಚಾಕು ವಶಪಡಿಸಿಕೊಂಡಿದ್ದಾರೆ. ಇನ್ನು ಆರೋಪಿಗಳು ಬೇರೆ ಬೇರೆ ಕೃತ್ಯಗಳಲ್ಲಿ ಭಾಗಿಯಾಗಿರುವ ಹಿನ್ನೆಲೆ ತನಿಖೆ ಮುಂದುವರೆದಿದೆ.