ಬೆಂಗಳೂರು : ಕಳ್ಳತನ ಮಾಡಿದ ದ್ವಿಚಕ್ರ ವಾಹನಗಳ ಮೂಲಕ ತೆರಳಿ ಮೊಬೈಲ್ ಕಳವು ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಉಪ್ಪಾರಪೇಟೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ವಿಜಯ್ (21) ಮತ್ತು ಪ್ರವೀಣ್ (24) ಬಂಧಿತ ಆರೋಪಿಗಳು. ಇವರು ಸೋಮವಾರ ನಗರದ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳವು ಮಾಡಿದ್ದರು. ಬಳಿಕ ಅದೇ ಬೈಕ್ನಲ್ಲಿ ಮೆಜೆಸ್ಟಿಕ್ ಸುತ್ತಮುತ್ತ ಮೊಬೈಲ್‌ನಲ್ಲಿ ಮಾತನಾಡಿಕೊಂಡು ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರಿಂದ ಮೊಬೈಲ್ ಕಸಿದು ಪರಾರಿಯಾಗಿದ್ದರು.
ಓದಿ : ಓರ್ವ ಯುವತಿಗೋಸ್ಕರ ಇಬ್ಬರು ಆತ್ಮಹತ್ಯೆ, ಆಸ್ಪತ್ರೆ ಸೇರಿದ ಮತ್ತಿಬ್ಬರು... ಏನಿದು ಲವ್ ಕಹಾನಿ?
ಈ ಸಂಬಂಧ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆ ಕಾರ್ಯಪ್ರವೃತ್ತರಾದ ಉಪ್ಪಾರಪೇಟೆ ಪೊಲೀಸರು, ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 1.95 ಲಕ್ಷ ರೂಪಾಯಿ ಮೌಲ್ಯದ ಮೂರು ದ್ವಿಚಕ್ರ ವಾಹನಗಳು ಮತ್ತು ನಾಲ್ಕು ಮೊಬೈಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.