ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳಾದ ನವೀದ್ ಪಾಷಾ, ಸಾಯೆದ್ ರೋಷನ್ ಎನ್ನುವವರನ್ನು ಬಂಧಿಸಿದ ಪೊಲೀಸರು ಸುಮಾರು 7 ಲಕ್ಷ ರೂ. ಮೌಲ್ಯದ 13 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ನಗರದ 13 ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿತ್ತು ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ ತಿಳಿಸಿದ್ದಾರೆ.
ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ 5 ಪ್ರಕರಣಗಳು, ಸುಬ್ರಮಣ್ಯಪುರ ಪೊಲೀಸ್ ಠಾಣೆ, ಪುಟ್ಟೇನಹಳ್ಳಿ, ಕೋಣನಕುಂಟೆ, ಜೆ.ಪಿ ನಗರ, ಬನಶಂಕರಿ, ಹನುಮಂತನಗರ, ಸಿ.ಕೆ ಅಚ್ಚುಕಟ್ಟು, ಹಾಗು ಆರ್.ಆರ್ ನಗರ ಪೊಲೀಸ್ ಠಾಣೆಗಳಲ್ಲಿ ತಲಾ ಒಂದೊಂದು ಪ್ರಕರಣ ಭೇದಿಸಿದಂತಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕುಡಿದು ಕಾರು ಚಲಾಯಿಸಿದ್ದೇ ತಪ್ಪು; ಕಾರಲ್ಲಿ ಚಿನ್ನವಿರುವುದಾಗಿ ಹೇಳಿ ಪೊಲೀಸರನ್ನೇ ಯಾಮಾರಿಸಿದ!