ETV Bharat / state

ಹೆಣ್ಣೂರು ಠಾಣೆ ಇನ್ಸ್​​ಪೆಕ್ಟರ್​​​​​​ ವಸಂತ್ ಕುಮಾರ್ ವಿರುದ್ಧ ಕಮಿಷನರ್​ಗೆ ದೂರು ನೀಡಿದ ಮಹಿಳೆಯರು - ಹೆಣ್ಣೂರು ಪೊಲೀಸ್ ಇನ್ಸ್​​ಪೆಕ್ಟರ್​​​​​​ ವಸಂತ್ ಕುಮಾರ್

ಏಪ್ರಿಲ್ 26ರಂದು ನಿವೇಶನದ ವಿಚಾರಕ್ಕೆ ದುಷ್ಕರ್ಮಿಗಳು ಗಲಾಟೆ ಮಾಡಿದ್ದರು. 40ಕ್ಕೂ ಹೆಚ್ಚು ಜನ ಮನೆಗೆ ನುಗ್ಗಿ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸಂಬಂಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಇಬ್ಬರು ಮಹಿಳೆಯರು ಹೆಣ್ಣೂರು ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಪೊಲೀಸ್​ ಆಯುಕ್ತರಿಗೆ ದೂರು ನೀಡಿದ್ದಾರೆ.

Two women gave complaint against hennur police inspector vasanth kumar
ಇನ್ಸ್​​ಪೆಕ್ಟರ್​​​​​​ ವಸಂತ್ ಕುಮಾರ್ ವಿರುದ್ಧ ಇಬ್ಬರು ಮಹಿಳೆಯರು ದೂರು
author img

By

Published : Jan 22, 2022, 8:27 PM IST

Updated : Jan 22, 2022, 9:03 PM IST

ಬೆಂಗಳೂರು: ಇತ್ತೀಚಿಗೆ ದೂರುದಾರ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಗಂಭೀರ ಆರೋಪ‌ಕ್ಕೆ ಸಿಲುಕಿರುವ ಹೆಣ್ಣೂರು ಪೊಲೀಸ್ ಠಾಣಾ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ನಗರದ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ.

ಇನ್ಸ್​​ಪೆಕ್ಟರ್​​​​​​ ವಸಂತ್ ಕುಮಾರ್ ವಿರುದ್ಧ ಕಮಿಷನರ್​ಗೆ ದೂರು ನೀಡಿದ ಮಹಿಳೆಯರು

ತಮ್ಮ ಮೇಲೆ ದುಷ್ಕರ್ಮಿಗಳು ಗಂಭೀರ ಹಲ್ಲೆ ನಡೆಸಿದರೂ ಯಾವುದೇ ಕ್ರಮ ಕೈಗೊಳ್ಳದೆ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿ ನಗರದ ಕಮ್ಮನಹಳ್ಳಿಯ ಎರಡನೇ ಬ್ಲಾಕ್ ನಿವಾಸಿಗಳಿಬ್ಬರು ದೂರು ಸಲ್ಲಿಸಿದ್ದರು. ಹಲ್ಲೆ ನಡೆಸಿದ ದುಷ್ಕರ್ಮಿಗಳ ಪರ ನಿಂತಿರುವ ಹೆಣ್ಣೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವಸಂತ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳವಂತೆ ಮನವಿ ಮಾಡಿದ್ದಾರೆ.

ಕಳೆದ ವರ್ಷದ ಏ. 26 ರಂದು ಸ್ಥಳೀಯ ಬಿಜೆಪಿ ನಾಯಕ ಕೃಷ್ಣ ಆನಂದ್, ಸರಿತಾ ಬಾಯಿ, ಪುಪ್ಪಾ, ಮಹೇಂದ್ರ, ಲತಾ ಎಂಬುವವರು ಸೇರಿದಂತೆ 40 ಮಂದಿ ನಿವೇಶನ ಕುರಿತ ವಿಚಾರವಾಗಿ ಉದ್ದೇಶಪೂರ್ವಕವಾಗಿ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಚಿನ್ನಾಭರಣ, ನಗದು ಹಾಗೂ ವಸ್ತುಗಳನ್ನು ದೋಚಿ ಪರಾರಿಯಾಗಿದ್ದರು ಎನ್ನಲಾಗ್ತಿದೆ. ಈ ಸಂಬಂಧ ಹೆಣ್ಣೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮವನ್ನು ಪೊಲೀಸರು ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೋಗಿಯಿಂದ ₹6 ಸಾವಿರ ಲಂಚ ಪಡೆಯುತ್ತಿದ್ದ ಸರ್ಕಾರಿ ವೈದ್ಯ ಎಸಿಬಿ ಬಲೆಗೆ

ಹಲ್ಲೆ ನಡೆಸಿದ ಆರೋಪಿಗಳೊಂದಿಗೆ ಇನ್ಸ್​​ಪೆಕ್ಟರ್ ವಸಂತ್ ಕುಮಾರ್ ಜೊತೆಗೂಡಿ ಇದುವರೆಗೂ ಎಫ್‌ಐಆರ್ ಸಹ ದಾಖಲು ಮಾಡಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ನ್ಯಾಯಾಲಯದ ಆದೇಶದ ತೆಗೆದುಕೊಂಡು ಬನ್ನಿ ಎಂದು ಗದರಿಸಿ ಕಳುಹಿಸಿದರು ಎಂದು ಸಂತ್ರಸ್ತೆ ಹೇಳಿದ್ದಾರೆ.

ಸಣ್ಣ ಖಾಲಿ ನಿವೇಶನಯೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಕಾನೂನು ಹೋರಾಟ ನಡೆಸಲಾಗುತ್ತಿದೆ. ಆದರೆ ಕೆಲ ರಿಯಲ್ ಎಸ್ಟೇಟ್ ಏಜೆಂಟ್‌ಗಳೊಂದಿಗೆ ಪೊಲೀಸರೇ ಶಾಮೀಲಾಗಿ ಕಾನೂನು ವ್ಯವಸ್ಥೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಕ್ರಮ ಕೈಗೊಂಡು ತಮಗೆ ಪೊಲೀಸ್ ರಕ್ಷಣೆ ನೀಡಬೇಕೆಂದು ಮನವಿ ಮಾಡಿದ್ದಾರೆ.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

Last Updated : Jan 22, 2022, 9:03 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.