ETV Bharat / state

KSAT Recruitment: ಟೈಪಿಸ್ಟ್​ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕಡೆಯ ದಿನ

author img

By ETV Bharat Karnataka Team

Published : Oct 30, 2023, 3:52 PM IST

ಬೆಂಗಳೂರು ಪ್ರಧಾನ ಪೀಠ ಅಥವಾ ಬೆಳಗಾವಿ ಅಥವಾ ಕಲಬುರಗಿ ಪೀಠದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ.

Typist Job notification from KSAT
Typist Job notification from KSAT

ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಿಂದ ಟೈಪಿಸ್ಟ್​​ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉಳಿಕೆ ಮೂಲ ವೃಂದದ ಹುದ್ದೆಗಳು ಇವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಬೆಂಗಳೂರು ಪ್ರಧಾನ ಪೀಠ ಅಥವಾ ಬೆಳಗಾವಿ ಅಥವಾ ಕಲಬುರಗಿ ಪೀಠದಲ್ಲಿ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ನಾಳೆಯೇ (ಅ.31) ಕಡೆಯ ದಿನವಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ಖಾಲಿ ಇರುವ ಆರು ಟೈಪಿಸ್ಟ್​​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ: ಅಭ್ಯರ್ಥಿಗಳು ಎಸ್​ಎಸ್​ಎಲ್​ಸಿ ಪೂರ್ಣಗೊಳಿಸಿರಬೇಕು. ಜೊತೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಬೆರಳಚ್ಚು ಪರೀಕ್ಷೆಯಲ್ಲಿ ಸೀನಿಯರ್​ ಗ್ರೇಡ್​​ ಉತ್ತೀರ್ಣರಾಗಿರಬೇಕು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 35 ವರ್ಷಗಳನ್ನು ಪೂರ್ಣಗೊಳಿಸಿರಬೇಕು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗುವುದು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21,400 ರಿಂದ 42,000 ರೂ. ವರೆಗೆ ಮಾಸಿಕ ವೇತನ ಸಿಗಲಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಕೆಸ್ಯಾಟ್​​ನ ಅಧಿಕೃತ ಜಾಲತಾಣದಲ್ಲಿ ಲಭ್ಯವಿರುವ ನಿಗದಿತ ಅರ್ಜಿಗಳನ್ನು ಭರ್ತಿ ಮಾಡಿ ಅವುಗಳನ್ನು ಆಫ್​ಲೈನ್​ ಮೂಲಕ ಕೆಳಗಿನ ವಿಳಾಸಕ್ಕೆ ಸಲ್ಲಿಕೆ ಮಾಡಬೇಕಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಇತರೆ ಅಭ್ಯರ್ಥಿಗಳಿಗೆ 150 ರೂ. ಶುಲ್ಕ ನಿಗದಿಸಲಾಗಿದೆ. ಅಭ್ಯರ್ಥಿಗಳು ಪೋಸ್ಟ್​​ ಆಫೀಸ್​ ಅಥವಾ ಡಿಡಿ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆ ವಿಳಾಸ: ವಿಲೇಖನಾಧಿಕಾರಿಗಳು, ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ, ಕಂದಾಯ ಭವನ, 7ನೇ ಮಹಡಿ, ಕೆಜಿ ರಸ್ತೆ, ಬೆಂಗಳೂರು 560009.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳು ಮೆರಿಟ್​ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಸಲಾಗುವುದು. ಅಭ್ಯರ್ಥಿಗಳು ಸೆಪ್ಟೆಂಬರ್​​ 26 ರಿಂದ ಅಕ್ಟೋಬರ್​ 31ರ ವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ಈ ಹುದ್ದೆ ಕುರಿತಾದ ಸಂಪೂರ್ಣ ಮಾಹಿತಿ ಮತ್ತು ನಿಗದಿತ ಅರ್ಜಿ ನಮೂನೆ ಪಡೆಯಲು ಅಭ್ಯರ್ಥಿಗಳು ksat.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: Job Alert: ಹಾವೇರಿ ಜಿಲ್ಲೆಯಲ್ಲಿ ತಾಂತ್ರಿಕ ಸಹಾಯಕರು ಸೇರಿದಂತೆ 25 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಸಂಪೂರ್ಣ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.