ETV Bharat / state

ಉಡುಪಿ-ಕಲಬುರಗಿ ಜಿಲ್ಲಾ ನ್ಯಾಯಾಲಯಗಳಿಗೆ ಜೂನ್ 12ವರೆಗೆ ನಿರ್ಬಂಧ - ಉಡುಪಿ-ಕಲಬುರ್ಗಿ ಜಿಲ್ಲಾ ನ್ಯಾಯಾಲಯಗಳಿಗೆ ಜೂನ್ 12ವರೆಗೆ ನಿರ್ಬಂಧ

ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಲಬುರಗಿ ಮತ್ತು ಉಡುಪಿಯ ಜಿಲ್ಲಾ ನ್ಯಾಯಾಲಯಗಳನ್ನು ಜೂನ್​​ 12ರವರೆಗೆ ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ.

Udupi-Kalaburgi district courts blocked till June 12
ಉಡುಪಿ-ಕಲಬುರ್ಗಿ ಜಿಲ್ಲಾ ನ್ಯಾಯಾಲಯಗಳಿಗೆ ಜೂನ್ 12ವರೆಗೆ ನಿರ್ಬಂಧ
author img

By

Published : Jun 9, 2020, 10:45 PM IST

ಬೆಂಗಳೂರು : ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳು ಮತ್ತು ಕಲಬುರಗಿ ಜಿಲ್ಲೆಯ ಚಿತ್ತಾಪುರ, ಚಿಂಚೋಳಿ ತಾಲೂಕು ನ್ಯಾಯಾಲಯಗಳಿಗೆ ಫಿಸಿಕಲ್ ಕೋರ್ಟ್ ನಡೆಸದಂತೆ ನಿರ್ಬಂಧ ವಿಧಿಸಿದ್ದ ಹೈಕೋರ್ಟ್ ಈ ಆದೇಶವನ್ನು ಜೂನ್ 12ರವರೆಗೆ ವಿಸ್ತರಿಸಿದೆ.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಲ್ಲ ನ್ಯಾಯಾಲಯಗಳು ಮತ್ತು ಕಲಬುರಗಿ ಜಿಲ್ಲೆಯ ಚಿತ್ತಾಪುರ, ಚಿಂಚೋಳಿ ತಾಲೂಕು ನ್ಯಾಯಾಲಯಗಳು ಫಿಸಿಕಲ್ ಕೋರ್ಟ್ ನಡೆಸದಂತೆ ಹೈಕೋರ್ಟ್​​​ ಜೂನ್ 4ರಂದು ಆದೇಶಿಸಿತ್ತು. ಈ ಕೋರ್ಟ್​ಗಳಲ್ಲಿ ನೇರವಾಗಿ ಅರ್ಜಿ ಸಲ್ಲಿಸಲು, ಕೋರ್ಟ್ ಶುಲ್ಕ ಪಾವತಿಸಲು ಮತ್ತು ವಕೀಲರು ನೇರವಾಗಿ ತೆರಳಿ ವಾದ ಮಂಡಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿತ್ತು. ಇದೀಗ ಆದೇಶವನ್ನು ಜೂನ್ 12ವರೆಗೆ ವಿಸ್ತರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬಾದಾಮಿ ಕರ್ ಆದೇಶ ಹೊರಡಿಸಿದ್ದಾರೆ.

ತುರ್ತು ಪ್ರಕರಣಗಳು ಇದ್ದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ವಿಚಾರಣೆಯನ್ನು ಕೇವಲ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಲು ಕ್ರಮ ಕೈಗೊಳ್ಳಬಹುದು. ಫಿಸಿಕಲ್ ಕೋರ್ಟ್ ನಡೆಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಈ ಎರಡು ಜಿಲ್ಲೆಗಳಲ್ಲಿ ಕೊರೊನಾ ಸೋಂಕು ನಿರಂತರ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಈ ಕ್ರಮ ಕೈಗೊಂಡಿದೆ.

ನಿನ್ನೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಉಡುಪಿ ಜಿಲ್ಲೆಯಲ್ಲಿ 903 ಮತ್ತು ಕಲಬುರಗಿಯಲ್ಲಿ 631 ಕೊರೊನಾ ಸೋಂಕಿತರಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.