ಬೆಂಗಳೂರು: ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಉಗಾಂಡ ಮೂಲದ ವ್ಯಕ್ತಿಯನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಅಕ್ರಮವಾಗಿ ಗಾಂಜಾ ಶೇಖರಣೆ ಮಾಡಿರುವುದನ್ನು ಖಚಿತಪಡಿಸಿಕೊಂಡು ಪೊಲೀಸರು ದಾಳಿ ನಡೆಸಿದ್ದಾರೆ.
ಮಂಗೊಲ ಜೋನ್ ಬಂಧಿತ ಆರೋಪಿಯಾಗಿದ್ದು, ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿಗೆಹಳ್ಳಿಯ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ. ಪೊಲೀಸರ ದಾಳಿ ವೇಳೆ ಮನೆಯಲ್ಲಿ 24 ಕೆ.ಜಿ ಗಾಂಜಾ ಲಭ್ಯವಾಗಿದ್ದು ಲ್ಯಾಪ್‌ಟಾಪ್, ಮೊಬೈಲ್ ಹಾಗೂ ಬೈಕ್ ವಶಪಡಿಸಿಕೊಳ್ಳಲಾಗಿದೆ.
ಆರೋಪಿಯ ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ಅಕ್ರಮವಾಗಿ ವಾಸ ಮಾಡುತ್ತಾ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿಚಾರ ತನಿಖೆಯಲ್ಲಿ ತಿಳಿದು ಬಂದಿದೆ.