ETV Bharat / state

ಈ ಬಾರಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡುವಂತೆ ಪ್ರಿಯಾಂಕಾ ಗಾಂಧಿಗೆ ಮನವಿ: ಉಮಾಶ್ರೀ - ರಾಜ್ಯಾದ್ಯಂತ ಹೆಚ್ಚಿನ ಅವಕಾಶ ನೀಡುವಂತೆ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಹಿಳೆಯರಿಗೆ ಅವಕಾಶ ಸಿಕ್ಕಿತ್ತು ಮತ್ತು ಗೆಲುವು ಸಾಧಿಸಿದ್ದರು. ಈ ಬಾರಿಯು ರಾಜ್ಯಾದ್ಯಂತ ಹೆಚ್ಚಿನ ಅವಕಾಶ ನೀಡುವಂತೆ ಮನವಿ ಮಾಡುತ್ತೇವೆ.

ಈ ಬಾರಿ ಮಹಿಳೆಯರಿಗೆ ಹೆಚ್ಚು ಟಿಕೆಟ್ ನೀಡುವಂತೆ ಪ್ರಿಯಾಂಕಾ ಗಾಂಧಿಗೆ ಮನವಿ: ಉಮಾಶ್ರೀ
umashree-says-we-will-appeal-to-priyanka-gandhi-for-give-more-ticket-to-women-congress-leaders
author img

By

Published : Jan 12, 2023, 3:06 PM IST

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಮಹಿಳೆಯರಿಗೆ ಸ್ಪರ್ಧೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಲ್ಲಿ ಮನವಿ ಮಾಡುತ್ತೇವೆ ಎಂದು 'ನಾ ನಾಯಕಿ' ಸಮಿತಿ ಅಧ್ಯಕ್ಷೆ ಹಾಗೂ ಮಾಜಿ ಸಚಿವೆ ಉಮಾಶ್ರೀ ತಿಳಿಸಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ವಿಧಾನಸಭೆ ಚುನಾವಣೆಗೆ 109 ಮಹಿಳೆಯರು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಇವರಲ್ಲಿ ಹೆಚ್ಚಿನವರಿಗೆ ಟಿಕೆಟ್ ಸಿಗಲಿದೆ ಎಂಬ ವಿಶ್ವಾಸ ಇದೆ. ಜ.16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕ ಗಾಂಧಿ ಅರಮನೆ ಮೈದಾನದಲ್ಲಿ 'ನಾ ನಾಯಕಿ' ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಆ ಸಂದರ್ಭದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ನೀಡುವಂತೆ ಒಕ್ಕೊರಲಿನಲ್ಲಿ ಅವರಿಗೆ ಮನವಿಯನ್ನು ಮಾಡಲಿದ್ದೇವೆ.

ಅಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ಆಗಲಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಮಹಿಳೆಯರಿಗೆ ಅವಕಾಶ ಸಿಕ್ಕಿತ್ತು ಮತ್ತು ಗೆಲುವು ಸಾಧಿಸಿದ್ದರು. ಈ ಬಾರಿಯು ರಾಜ್ಯಾದ್ಯಂತ ಹೆಚ್ಚಿನ ಅವಕಾಶ ನೀಡುವಂತೆ ಮನವಿ ಮಾಡುತ್ತೇವೆ. ಅವಕಾಶ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.

'ನಾ ನಾಯಕಿ' ಕಾರ್ಯಕ್ರಮದಲ್ಲಿ ಮನವಿ: ಇದೀಗ ಒಂದು ಉತ್ತಮ ಅವಕಾಶ ಒದಗಿ ಬಂದಿದೆ. ರಾಜ್ಯ ಹಾಗೂ ರಾಷ್ಟ್ರೀಯ ಕಾಂಗ್ರೆಸ್ ನಾಯಕರ ಸಹಕಾರ ಲಭಿಸಿದೆ. ಸಮಾರಂಭದಲ್ಲಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಯ ಮುಖಂಡರು ಟಿಕೆಟ್ ಆಕಾಂಕ್ಷಿಗಳು ಶಾಸಕರು ಮಾಜಿ ಶಾಸಕರು ಆದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಗಳು, ಉಪಾಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಮಹಿಳಾ ವಿಭಾಗದ ಸದಸ್ಯರು ಹಾಗೂ ನಾಯಕಿಯರು ಪಾಲ್ಗೊಳ್ಳುತ್ತಿದ್ದಾರೆ. ಒಂದು ಸೂಕ್ತ ಹಾಗೂ ಉತ್ತಮ ವೇದಿಕೆಯಲ್ಲಿ ನಾವು ನಮ್ಮ ಮನವಿಯನ್ನು ರಾಷ್ಟ್ರೀಯ ನಾಯಕಿಗೆ ಸಲ್ಲಿಕೆ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಪ್ರಿಯಾಂಕಾ ಗಾಂಧಿಗೆ ಅದ್ಧೂರಿ ಸ್ವಾಗತ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷ ಡಾ ಪುಷ್ಪಾ ಅಮರನಾಥ್ ಮಾತನಾಡಿ, ಕಾಂಗ್ರೆಸ್ ಪಕ್ಷ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ಕೊಟ್ಟಿದೆ. ಅದೇ ರೀತಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡುವ ಕಾರ್ಯಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನು ನಾವು ಸ್ವಾಗತಿಸುತ್ತಿದ್ದು, ಈ ನಿಟ್ಟಿನಲ್ಲಿ ಮಹಿಳಾ ಕಾಂಗ್ರೆಸ್ ವತಿಯಿಂದ ನಾವು ಪ್ರತ್ಯೇಕ ವೆಬ್ ಸೈಟ್ ಆರಂಭಿಸಿದ್ದೇವೆ. ಈಗಾಗಲೇ ರಾಜ್ಯದ ಎಲ್ಲ ಭಾಗದ ಮಹಿಳೆಯರನ್ನು ತಲುಪಬೇಕು ಹಾಗೂ ಅವರಿಗೆ ಅನುಕೂಲವಾಗುವ ಪ್ರಣಾಳಿಕೆ ಸಿದ್ಧಪಡಿಸಲು ಕೆಪಿಸಿಸಿ ಅಧ್ಯಕ್ಷರು ತೀರ್ಮಾನಿಸಿ ಕ್ರಮಕ್ಕೆ ಸೂಚಿಸಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಾವು ಪ್ರಿಯಾಂಕ ಗಾಂಧಿಯವರ ಸ್ವಾಗತಕ್ಕೆ ಫ್ಲೆಕ್ಸ್ ಗಳನ್ನ ಅಳವಡಿಸಲು ಸೂಚಿಸಿದ್ದೇವೆ. ಇದಕ್ಕೆ ವಿಶೇಷವಾಗಿ ವಿನ್ಯಾಸಗೊಳಿಸಿದ ಮಾದರಿಯನ್ನು ಪ್ರತಿ ಗ್ರಾಮ ಪಂಚಾಯಿತಿಗೆ ಕಳಿಸಿದ್ದು ಸ್ವಾಗತ ಕೋರುವವರ ಭಾವಚಿತ್ರ ಹಾಗೂ ಪ್ರಿಯಾಂಕಾ ಗಾಂಧಿ ಅವರಿಗೆ ಸ್ವಾಗತ ಕೋರುವ ಫಲಕ ಅಳವಡಿಕೆ ಆಗಲಿದೆ.

ವಿಶೇಷವಾಗಿ ಪ್ರಿಯಾಂಕ ಗಾಂಧಿ ಅವರ ಸ್ವಾಗತಿಸಲು ನಾವು ತೀರ್ಮಾನಿಸಿದ್ದೇವೆ. ಕಾರ್ಯಕ್ರಮದ ಮಹಿಳಾ ಪ್ರಣಾಳಿಕೆ ಸಿದ್ಧಪಡಿಸಲು ನಾವು ಆರಂಭಿಸಿರುವ ವೆಬ್ಸೈಟ್ ಗೆ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸಲಹೆ ಸೂಚನೆಗಳನ್ನು ಕಳುಹಿಸಬಹುದು. ವೆಬ್ಸೈಟ್ ಜೊತೆ ಪ್ರತ್ಯೇಕ ಇ-ಮೇಲ್ ವಿಳಾಸವನ್ನು ಸಹ ಆರಂಭಿಸಿದ್ದೇವೆ. ಮಹಿಳೆಯರಿಗಾಗಿ ನಾವು ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಕಾಂಗ್ರೆಸ್ ಪಕ್ಷ ಮಹಿಳೆಯರ ಪಕ್ಷವಾಗಿದೆ. ಮಹಿಳೆಯರಿಗೆ ಕಾಂಗ್ರೆಸ್ ಪಕ್ಷ ನೀಡಿದ ಮೀಸಲಾತಿಯ ಹಿನ್ನೆಲೆಯಲ್ಲಿ ಇಂದು ನಾವು ಸಾಕಷ್ಟು ಮಂದಿ ಅನುಕೂಲ ಪಡೆದಿದ್ದೇವೆ. ಕಾಂಗ್ರೆಸ್ ಪಕ್ಷದಿಂದ ಮಹಿಳೆಯರಿಗೆ ಲಭಿಸಿರುವ ಕೊಡುಗೆಗಳನ್ನು ನಾವು ವಿವರಿಸುವ ಕಾರ್ಯವನ್ನು ಮಾಡಲಿದ್ದೇವೆ. ಮಹಿಳಾ ಮೀಸಲಾತಿ ವಿರೋಧಿಸಿದವರು ವಿಚಾರವನ್ನು ಸಹ ನಾವು ನಾ ನಾಯಕಿ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಲಿದ್ದೇವೆ ಎಂದರು.

ಇದನ್ನೂ ಓದಿ: ಮೋದಿ ಯಾವ ಮುಖ ಹೊತ್ತು ಯುವಜನೋತ್ಸವ ಉದ್ಘಾಟನೆಗೆ ಬರ್ತಿದ್ದಾರೆ?: ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.