ETV Bharat / state

ಅನುದಾನ ರಹಿತ ಶಾಲೆಗಳು ಶುಲ್ಕ ಏರಿಸದಂತೆ ಸರ್ಕಾರದ ಆದೇಶ‌

2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಏರಿಸುವಂತಿಲ್ಲ. ಒಂದು ವೇಳೆ ಶಾಲಾ ಆಡಳಿತ ಮಂಡಳಿಯವರು 2019-20ನೇ ಶೈಕ್ಷಣಿಕ ಸಾಲಿಗಿಂತ ಹೆಚ್ಚಿನ ಬೋಧನಾ ಶುಲ್ಕವನ್ನು ಮಕ್ಕಳು/ಪೋಷಕರಿಂದ ಸಂಗ್ರಹಿಸಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-124[ಎ]ರ ಅಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಈ ಮೂಲಕ ಸೂಚಿಸಿದೆ.

Unaided schools cannot raise school fees this year: Govt order
ಅನುದಾನ ರಹಿತ ಶಾಲೆಗಳು ಈ ವರ್ಷ ಶಾಲಾ ಶುಲ್ಕ ಏರಿಸುವಂತಿಲ್ಲ: ಸರ್ಕಾರ ಆದೇಶ‌
author img

By

Published : Jun 19, 2020, 7:31 PM IST

ಬೆಂಗಳೂರು: 2020-21ನೇ ಸಾಲಿನಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳು ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಏರಿಸುವಂತಿಲ್ಲ ಎಂದು ಸರ್ಕಾರ ಆದೇಶ ಹೊರಡಿಸಿದೆ.

Unaided schools cannot raise school fees this year: Govt order
ಅನುದಾನ ರಹಿತ ಶಾಲೆಗಳು ಈ ವರ್ಷ ಶಾಲಾ ಶುಲ್ಕ ಏರಿಸುವಂತಿಲ್ಲ: ಸರ್ಕಾರ ಆದೇಶ‌

ಲಾಕ್​ಡೌನ್​ ಹಿನ್ನೆಲೆ ಕೈಗಾರಿಕೆಗಳು ಹಾಗೂ ಆರ್ಥಿಕ ಚಟುವಟಿಕೆಗಳು ಸ್ತಬ್ಧವಾಗಿದ್ದು, ಸಾರ್ವಜನಿಕರು ಸಂಕಷ್ಟಕ್ಕೀಡಾಗಿದ್ದಾರೆ.‌ ಈ ಹಿನ್ನೆಲೆ ಅನುದಾನ ರಹಿತ ಶಾಲೆಗಳ ಪೋಷಕರು ಈ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಹೆಚ್ಚಿಸದಂತೆ ಶಾಲಾ ಸಂಸ್ಥೆಗಳಿಗೆ ನಿರ್ದೇಶನ ನೀಡುವಂತೆ ಸರ್ಕಾರಕ್ಕೆ ಸಾಕಷ್ಟು ಮನವಿಗಳನ್ನು ಸಲ್ಲಿಸಿದ್ದಾರೆ.‌ ಈ ಹಿನ್ನೆಲೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸದ್ಯ ಸಾರ್ವಜನಿಕರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವುದನ್ನು ಪರಿಗಣಿಸಿ ಕರ್ನಾಟಕ ಶಿಕ್ಷಣ ಕಾಯ್ದೆ-1983, ಸೆಕ್ಷನ್-133, ಉಪ ನಿಯಮ-(2)ರ ಅಡಿಯಲ್ಲಿ, ಎಲ್ಲಾ ಖಾಸಗಿ ಅನುದಾನ ರಹಿತ ಶಾಲೆಗಳು 2020-21ನೇ ಶೈಕ್ಷಣಿಕ ಸಾಲಿನಲ್ಲಿ ಯಾವುದೇ ಬೋಧನಾ ಶುಲ್ಕವನ್ನು ಹೆಚ್ಚಿಸಬಾರದೆಂದು ಸೂಚಿಸಿದೆ. ಒಂದು ವೇಳೆ ಶಾಲಾ ಆಡಳಿತ ಮಂಡಳಿಯವರು 2019-20ನೇ ಶೈಕ್ಷಣಿಕ ಸಾಲಿಗಿಂತ ಹೆಚ್ಚಿನ ಬೋಧನಾ ಶುಲ್ಕವನ್ನು ಮಕ್ಕಳು/ಪೋಷಕರಿಂದ ಸಂಗ್ರಹಿಸಿದಲ್ಲಿ ಕರ್ನಾಟಕ ಶಿಕ್ಷಣ ಕಾಯ್ದೆ-124[ಎ]ರ ಅಡಿಯಲ್ಲಿ ಕ್ರಮ ಜರುಗಿಸಲಾಗುವುದೆಂದು ಈ ಮೂಲಕ ಸೂಚಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.