ETV Bharat / state

ಪಿಯು ಉಪನ್ಯಾಸಕರು, ಸಿಬ್ಬಂದಿ ಹಾಜರಿ ಕಡ್ಡಾಯ : ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ - ಪಿಯು ಉಪನ್ಯಾಸಕರ-ಸಿಬ್ಬಂದಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ

ಉಪನ್ಯಾಸಕರು ಹಾಗೂ ಸಿಬ್ಬಂದಿ ರಜಾದಿನ ಹೊರತುಪಡಿಸಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಡ್ಡಾಯವಾಗಿ ಹಾಜರಿರಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

Undergraduate Education Department Circular
ಪದವಿಪೂರ್ವ ಶಿಕ್ಷಣ ಇಲಾಖೆ
author img

By

Published : Dec 16, 2020, 9:19 AM IST

ಬೆಂಗಳೂರು : ಪದವಿಪೂರ್ವ ಕಾಲೇಜುಗಳು ಆರಂಭವಾಗಿಲ್ಲದಿದ್ದರೂ, ವಿದ್ಯಾರ್ಥಿಗಳಿಗೆ ಆನ್​ಲೈನ್ ತರಗತಿಗಳನ್ನು ನಡೆಸಲು ಉಪನ್ಯಾಸಕರು ಕಡ್ಡಾಯವಾಗಿ ಕಾಲೇಜುಗಳಲ್ಲಿ ಹಾಜರಿರಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಉಪನ್ಯಾಸಕರು ಹಾಗೂ ಸಿಬ್ಬಂದಿ ರಜಾದಿನ ಹೊರತುಪಡಿಸಿ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಕಡ್ಡಾಯವಾಗಿ ಹಾಜರಿರಬೇಕೆಂದು ಎಂದು ತಿಳಿಸಿದೆ. ಫ್ರೀ ರೆಕಾರ್ಡ್ ಯೂ ಟ್ಯೂಬ್ ತರಗತಿಗಳನ್ನು ಇನ್ನೂ ಪರಿಣಾಮಕಾರಿಯಾಗಿ ಬಳಸಿಕೊಂಡು ವಿದ್ಯಾರ್ಥಿಗಳನ್ನು ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವ ಸಂಪೂರ್ಣ ಜವಾಬ್ದಾರಿ ಉಪನ್ಯಾಸಕರದ್ದು. ಈ ನಿರ್ದೇಶನವನ್ನು ಪಾಲಿಸದ ಬಗ್ಗೆ ದೂರು ಬಂದರೆ ಸಂಬಂಧಿಸಿದ ಕಾಲೇಜುಗಳ ಪ್ರಾಂಶುಪಾಲರನ್ನು ಮತ್ತು ಆಯಾ ಜಿಲ್ಲಾ ಉಪನಿರ್ದೇಶಕರನ್ನು ಹೊಣೆ ಮಾಡಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಅಲ್ಲದೆ ಜಿಲ್ಲಾ ಉಪನಿರ್ದೇಶಕರು ನಿತ್ಯ ಕನಿಷ್ಠ ಎರಡು ಕಾಲೇಜುಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಕೇಂದ್ರ ಕಚೇರಿಗೆ ವರದಿ ನೀಡಬೇಕೆಂದು ತಿಳಿಸಿದ್ದಾರೆ. ಹಾಗೂ ಉಪನ್ಯಾಸಕರು-ಸಿಬ್ಬಂದಿಯ ಗೈರು ಹಾಜರಿಯನ್ನು ಸಾಂಧರ್ಭಿಕ ರಜೆ (ಸಿಎಲ್) ಅಥವಾ ಗಳಿಕೆ ರಜೆ (ಇಎಲ್) ಎಂದು ನಮೂದಿಸಬೇಕೆಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಓದಿ :ನೆರೆ ಸಂಬಂಧ ಸಲ್ಲಿಕೆಯಾಗಿರುವ ಪ್ರಸ್ತಾವನೆ ಮಾರ್ಪಾಡು ಮಾಡಿ; ಕೇಂದ್ರ ತಂಡ ಸೂಚನೆ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.