ETV Bharat / state

ಮೈತ್ರಿ ಸರಕಾರ ಕೆಡವಲು ಬಿಜೆಪಿಯಿಂದ ಅನೈತಿಕ ರಾಜಕಾರಣ : ಸಿಎಂ ಆರೋಪ - kannadanews

ರಾಜ್ಯ ಮೈತ್ರಿ ಸರ್ಕಾರವನ್ನು ಕೆಡವಲು ಬಿಜೆಪಿ ನಡೆಸುತ್ತಿರುವ ರಾಜಕೀಯ ಚಟುವಟಿಕೆಗಳನ್ನು ಖಂಡಿಸಿ ಮಾಧ್ಯಮಗಳಿಗೆ ಸಿಎಂ ಕುಮಾರಸ್ವಾಮಿ ಹೇಳಿಕೆ ಬಿಡುಗಡೆ ಮಾಡಿದ್ದು, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಮೈತ್ರಿ ಸರಕಾರ ಕೆಡವಲು ಬಿಜೆಪಿಯಿಂದ ಅನೈತಿಕ ರಾಜಕಾರಣ
author img

By

Published : Jul 21, 2019, 11:16 PM IST

ಬೆಂಗಳೂರು : ರಾಜ್ಯದಲ್ಲಿ ಮೈತ್ರಿ ಸರಕಾರ ಅಸ್ಥಿರಗೊಳಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿರುವುದು ಅತ್ಯಂತ ನೋವಿನ ಹಾಗೂ ಜಿಗುಪ್ಸೆ ತರುವ ಸಂಗತಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಆಡಳಿತದಲ್ಲಿರುವ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರಕಾರ ಉರುಳಿಸಲು ಬಿಜೆಪಿ ನಡೆಸುತ್ತಿರುವ ರಾಜಕೀಯ ಚಟುವಟಿಕೆಗಳನ್ನು ಖಂಡಿಸಿ ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ. ಆಡಳಿತಾರೂಢ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರನ್ನು ಕರೆದೊಯ್ದು ಬಿಜೆಪಿಯು ಪ್ರಜಾಪ್ರಭುತ್ವದ ಅಣಕವಾಡಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ವಿಶೇಷ ವಿಮಾನಗಳಲ್ಲಿ ನಮ್ಮ ಶಾಸಕರೊಂದಿಗೆ ತೆರಳಿರುವುದು ಮಾಧ್ಯಮಗಳಿಂದ ಸ್ಪಷ್ಟವಾಗಿದೆ. ಅನೈತಿಕ ಹಾಗೂ ಕಾನೂನು ಬಾಹಿರ ವಿಧಾನಗಳಿಂದ ಅಧಿಕಾರಕ್ಕೆ ಬರಲು ಹಾತೊರೆಯುತ್ತಿರುವ ಬಿಜೆಪಿಯು, ಈ ಎಲ್ಲ ಬೆಳವಣಿಗೆಗಳ ನಡುವೆ, ನಾನು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದೆ. ವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕುವಂತೆ ರಾಜಭವನದ ಮೂಲಕ ಗಡುವುಗಳನ್ನೂ ನೀಡಿದೆ ಎಂದು ಆರೋಪಿಸಿದ್ದಾರೆ.

ಅಧಿಕಾರಕ್ಕೆ ಅಂಟಿಕೊಳ್ಳುವ ಉದ್ದೇಶ ನಾನು ಹೊಂದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸ ಬಯಸುತ್ತೇನೆ. ವಿಶ್ವಾಸಮತ ಕುರಿತು ಸುದೀರ್ಘ ಚರ್ಚೆಗೆ ಸಮಯ ಕೋರಿರುವುದರ ಹಿಂದೆ ನನ್ನ ಉದ್ದೇಶವಿರುವುದು ಒಂದೇ- ಬಿಜೆಪಿಯು ನೈತಿಕತೆಯ ಕುರಿತು ಮಾತನಾಡುತ್ತಲೇ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೂಲತತ್ವ, ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವುದರ ಬಗ್ಗೆ ಇಡೀ ದೇಶಕ್ಕೆ ಅರಿವಾಗಬೇಕು ಎಂದು ಹೇಳಿದ್ದಾರೆ

ಈ ಸಂದರ್ಭದಲ್ಲಿ, ನಮ್ಮಿಂದ ದೂರ ಹೋಗಿರುವ ಶಾಸಕರು ಹಿಂದಿರುಗಿ, ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ. ಬಿಜೆಪಿಯು ಪ್ರಜಾಪ್ರಭುತ್ವದ ಪಾವಿತ್ರ್ಯತೆಯನ್ನು ಹೇಗೆ ಹಾಳುಗೆಡವಿದೆ ಎಂಬುದರ ಕುರಿತು ಸದನದಲ್ಲಿ ವಿವರವಾಗಿ ಚರ್ಚಿಸೋಣ ಎಂದು ಭಿನ್ನಮತೀಯ ಶಾಸಕರಿಗೆ ಕರೆ ನೀಡಿದ್ದಾರೆ.

ಎಲ್ಲ ಶಾಸಕರು ಹಿಂದಿರುಗಿ ಬನ್ನಿ

ಬೇಸರಗೊಂಡಿರುವ ಶಾಸಕರು ಹಿಂತಿರುಗಿ ಬನ್ನಿ ಎಲ್ಲ ವಿಷಯಗಳ ಕುರಿತು ಒಟ್ಟಾಗಿ ಕುಳಿತು ಮುಕ್ತವಾಗಿ ಚರ್ಚಿಸೋಣ. ಪಕ್ಷ ತಾಯಿ ಇದ್ದಂತೆ. ಜಾತ್ಯತೀತ ತಳಹದಿಯ ನಮ್ಮ ಪಕ್ಷಗಳನ್ನು ಬಲಪಡಿಸಲು ನಿಷ್ಠೆಯಿಂದ ಶ್ರಮಿಸೋಣ ಎಂದು ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ರಾಜಕೀಯ ಪ್ರಭಾವದ ದುರ್ಬಳಕೆಯ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನೇ ಅಲುಗಾಡಿಸುತ್ತಿರುವ, ಜನತಂತ್ರದಡಿ ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳಿಂದ ಸರ್ಕಾರವನ್ನು ಪಾರು ಮಾಡಬೇಕಾಗಿದೆ ಅದಕ್ಕೆ ಆಡಳಿತ ಪಕ್ಷದ ಎಲ್ಲ ಶಾಸಕರ ಬೆಂಬಲ ಅಗತ್ಯವೆಂದು ತಿಳಿಸಿದ್ದಾರೆ.

ಅಧಿಕಾರಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಾಂವಿಧಾನಿಕವಾಗಿ ರಚಿಸಲಾದ ಸಂಸ್ಥೆಗಳನ್ನೇ ನಾಶಪಡಿಸಲು ಮುಂದಾಗಿರುವ ದುಷ್ಟ ಶಕ್ತಿಗಳಿಂದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಉಳಿಸಲು ಜೊತೆಯಾಗಿ ಹೋರಾಟ ನಡೆಸೋಣ. ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Intro: ಮೈತ್ರಿ ಸರಕಾರ ಕೆಡವಲು ಬಿಜೆಪಿಯಿಂದ ಅನೈತಿಕ ರಾಜಕಾರಣ - ಸಿಎಂ ಆರೋಪ..!

ಬೆಂಗಳೂರು
ರಾಜ್ಯದಲ್ಲಿ ಮೈತ್ರಿ ಸರಕಾರ ಅಸ್ಥಿರಗೊಳಿಸುವ ಮೂಲಕ ಬಿಜೆಪಿಯು ದೇಶದಲ್ಲಿ ಅನೈತಿಕ ರಾಜಕಾರಣಕ್ಕೆ ಹೊಸ ಭಾಷ್ಯ ಬರೆದಿರುವುದು ಅತ್ಯಂತ ನೋವಿನ ಹಾಗೂ ಜಿಗುಪ್ಸೆ ತರುವ ಸಂಗತಿ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಆಡಳಿತದಲ್ಲಿರುವ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರಕಾರ ಉರುಳಿಸಲು ಬಿಜೆಪಿ ನಡೆಸುತ್ತಿರುವ ರಾಜಕೀಯ ಚಟುವಟಿಕೆಗಳನ್ನು ಖಂಡಿಸಿ ಮಾದ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ಬಿಜೆಪಿ ವಿರುದ್ಧ ಸಿಎಂ ಹರಿಹಾಯ್ದಿದ್ದಾರೆ.

ಆಡಳಿತಾರೂಢ ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳ ಶಾಸಕರನ್ನು ಕರೆದೊಯ್ದು ಬಿಜೆಪಿಯು ಪ್ರಜಾಪ್ರಭುತ್ವದ ಅಣಕವಾಡಿದೆ. ಬಿಜೆಪಿ ಮುಖಂಡರು, ಕಾರ್ಯಕರ್ತರು ವಿಶೇಷ ವಿಮಾನಗಳಲ್ಲಿ ನಮ್ಮ ಶಾಸಕರೊಂದಿಗೆ ತೆರಳಿರುವುದು ಮಾಧ್ಯಮಗಳಿಂದ ಸ್ಪಷ್ಟವಾಗಿದೆ .
ಅನೈತಿಕ ಹಾಗೂ ಕಾನೂನು ಬಾಹಿರ ವಿಧಾನಗಳಿಂದ ಅಧಿಕಾರಕ್ಕೆ ಬರಲು ಹಾತೊರೆಯುತ್ತಿರುವ ಬಿಜೆಪಿಯು, ಈ ಎಲ್ಲ ಬೆಳವಣಿಗೆಗಳ ನಡುವೆ, ನಾನು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸುತ್ತಿದೆ. ವಿಶ್ವಾಸ ನಿಲುವಳಿಯನ್ನು ಮತಕ್ಕೆ ಹಾಕುವಂತೆ ರಾಜಭವನದ ಮೂಲಕ ಗಡುವುಗಳನ್ನೂ ನೀಡಿದೆ ಎಂದು ಆರೋಪಿಸಿದ್ದಾರೆ

ಅಧಿಕಾರಕ್ಕೆ ಅಂಟಿಕೊಳ್ಳುವ ಉದ್ದೇಶ ನಾನು ಹೊಂದಿಲ್ಲ ಎಂಬುದನ್ನು ಮತ್ತೊಮ್ಮೆ ಸ್ಪಷ್ಟಪಡಿಸಬಯಸುತ್ತೇನೆ. ವಿಶ್ವಾಸ ಮತ ಕುರಿತು ಸುದೀರ್ಘ ಚರ್ಚೆಗೆ ಸಮಯ ಕೋರಿರುವುದರ ಹಿಂದೆ ನನ್ನ ಉದ್ದೇಶವಿರುವುದು ಒಂದೇ- ಬಿಜೆಪಿಯು ನೈತಿಕತೆಯ ಕುರಿತು ಮಾತನಾಡುತ್ತಲೇ, ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಮೂಲತತ್ವ, ಆಶಯಗಳನ್ನೇ ಬುಡಮೇಲು ಮಾಡಲು ಹೊರಟಿರುವುದು ಇಡೀ ದೇಶಕ್ಕೆ ಅರಿವಾಗಬೇಕು ಎಂದು ಹೇಳಿದ್ದಾರೆ

ಈ ಸಂದರ್ಭದಲ್ಲಿ, ನಮ್ಮಿಂದ ದೂರ ಹೋಗಿರುವ ಶಾಸಕರು ಹಿಂದಿರುಗಿ, ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡುತ್ತೇನೆ. ಬಿಜೆಪಿಯು ಪ್ರಜಾಪ್ರಭುತ್ವದ ಪಾವಿತ್ರ್ಯತೆಯನ್ನು ಹೇಗೆ ಹಾಳುಗೆಡವಿದೆ ಎಂಬುದರ ಕುರಿತು ಸದನದಲ್ಲಿ ವಿವರವಾಗಿ ಚರ್ಚಿಸೋಣ ಎಂದು ಭಿನ್ನಮತೀಯ ಶಾಸಕರಿಗೆ ಕರೆ ನೀಡಿದ್ದಾರೆ.

Body:ಎಲ್ಲ ಶಾಸಕರು ಹಿಂದಿರುಗಿ ಬನ್ನಿ;

ಬೇಸರಗೊಂಡಿರುವ ಶಾಸಕರು ಹಿಂತಿರುಗಿ ಬನ್ನಿನಿ ಎಲ್ಲ ವಿಷಯಗಳ ಕುರಿತು ಒಟ್ಟಾಗಿ ಕುಳಿತು ಮುಕ್ತವಾಗಿ ಚರ್ಚಿಸೋಣ. ಪಕ್ಷ ತಾಯಿ ಇದ್ದಂತೆ. ಜಾತ್ಯತೀತ ತಳಹದಿಯ ನಮ್ಮ ಪಕ್ಷಗಳನ್ನು ಬಲಪಡಿಸಲು ನಿಷ್ಠೆಯಿಂದ ಶ್ರಮಿಸೋಣ ಎಂದು ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

ರಾಜಕೀಯ ಪ್ರಭಾವದ ದುರ್ಬಳಕೆಯ ಮೂಲಕ ಪ್ರಜಾಪ್ರಭುತ್ವದ ಬುನಾದಿಯನ್ನೇ ಅಲುಗಾಡಿಸುತ್ತಿರುವ, ಜನತಂತ್ರದಡಿ ಆಯ್ಕೆಯಾದ ಸರ್ಕಾರವನ್ನು ಉರುಳಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳಿಂದ ಸರ್ಕಾರವನ್ನು ಪಾರು ಮಾಡಬೇಕಾಗಿದೆ ಅದಕ್ಕೆ ಆಡಳಿತ ಪಕ್ಷದ ಎಲ್ಲ ಶಾಸಕರ ಬೆಂಬಲ ಅಗತ್ಯವೆಂದು ತಿಳಿಸಿದ್ದಾರೆ.

ಅಧಿಕಾರಕ್ಕಾಗಿ ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಸಾಂವಿಧಾನಿಕವಾಗಿ ರಚಿಸಲಾದ ಸಂಸ್ಥೆಗಳನ್ನೇ ನಾಶಪಡಿಸಲು ಮುಂದಾಗಿರುವ ದುಷ್ಟ ಶಕ್ತಿಗಳಿಂದ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಗಳನ್ನು ಉಳಿಸಲು ಜೊತೆಯಾಗಿ ಹೋರಾಟ ನಡೆಸೋಣ. ಎಂದು ಸಿಎಂ ಕುಮಾರಸ್ವಾಮಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.