ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ಏಪ್ರಿಲ್ 22ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ಸರ್ಕಾರಿ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿಯೇ ಹಾಜರಾಗಬೇಕು ಹಾಗೂ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಆಯಾ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.
ಮಾರ್ಚ್ 15ರಂದು ಉನ್ನತ ನ್ಯಾಯಾಲಯವು ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿಗಳನ್ನು ವಿಚಾರಣೆ ನಡೆಸಿ, ನೀಡಿದ ತೀರ್ಪು ಸರ್ಕಾರದ ಆದೇಶವನ್ನು ಸಿಂಧುಗೊಳಿಸಿದೆ. ಹೀಗಾಗಿ, ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ದ್ವಿತೀಯ ಪಿಯುಸಿ ಮುಖ್ಯ ಪರೀಕ್ಷೆಗೆ ಪ್ರವೇಶ ಪತ್ರದೊಂದಿಗೆ ಹಾಜರಾಗಬೇಕು ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: 2022ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ