ETV Bharat / state

ಉತ್ಪಾದನೆ- ಕೌಶಲ್ಯಗಳ ಪ್ರದರ್ಶನಕ್ಕೆ ಏರೋ ಇಂಡಿಯಾ ಉತ್ತಮ ವೇದಿಕೆ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ - ಏರೊ ಸ್ಪೇಸ್ ಇಕೋ ಸಿಸ್ಟಮ್

ದೇಶಿಯ ಉತ್ಪಾದನೆ ಹಾಗೂ ಕೌಶಲ್ಯಗಳ ಪ್ರದರ್ಶನ ಮಾಡಲು ಏರೋ ಇಂಡಿಯಾ ಉತ್ತಮ ವೇದಿಕೆ-ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ರಾಜನಾಥ್​ ಸಿಂಗ್

author img

By

Published : Feb 12, 2023, 11:03 PM IST

ಬೆಂಗಳೂರು: ನಮ್ಮ ಉತ್ಪಾದನೆ ಹಾಗೂ ಕೌಶಲ್ಯಗಳ ಪ್ರದರ್ಶನ ಮಾಡಲು ಏರೋ ಇಂಡಿಯಾ ಉತ್ತಮ ವೇದಿಕೆಯಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ನಗರದ ಯಲಹಂಕ ವಾಯುನೆಲೆಯಲ್ಲಿ ನಾಳೆಯಿಂದ 14ನೇ ಆವೃತ್ತಿಯ ಏರೋ ಇಂಡಿಯಾ ಶೋ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವರು. ಈ ಕುರಿತು ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಏರೋ ಇಂಡಿಯಾ 2023 ರ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜ್​​​ನಾಥ್ ಸಿಂಗ್​ ಮಾತನಾಡಿ, ವಿಶ್ವಗುರು ಬಸವಣ್ಣ ಮತ್ತು ನಾಡಪ್ರಭು ಕೆಂಪೇಗೌಡರನ್ನು ಸ್ಮರಿಸಿದರು. ಏರೋ ಇಂಡಿಯಾದಲ್ಲಿ 2ನೇ ಬಾರಿಗೆ ಭಾಗಿಯಾಗಿದ್ದೇನೆ. ದೇಶಿಯ ಉತ್ಪಾದನೆ ಹಾಗೂ ಕೌಶಲ್ಯಗಳ ಪ್ರದರ್ಶನ ಮಾಡಲು ಏರೋ ಇಂಡಿಯಾ ಉತ್ತಮ ವೇದಿಕೆಯಾಗಿದೆ ಎಂದರು.

ಕಳೆದ ಹಲವಾರು ತಿಂಗಳ ಪರಿಶ್ರಮ ಈಗ ಫಲ ನೀಡುತ್ತಿದೆ. ಡೈನಾಮಿಕ್ ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಇದು ಸಾಧ್ಯವಾಗಿದೆ. ಏರೋ ಇಂಡಿಯಾ ದೇಶದ ಐಟಿ ಕ್ಯಾಪಿಟಲ್‌ನಲ್ಲಿ ನಡೆಯುತ್ತಿದೆ. ಅಂತಾರಾಷ್ಟ್ರೀಯ ಮಟ್ಟದ ನಾಯಕರು ಆಗಮಿಸುತ್ತಿದ್ದಾರೆ. ನಮ್ಮ ಉತ್ಪಾದನೆ ಹಾಗೂ ಕೌಶಲ್ಯಗಳ ಪ್ರದರ್ಶನ ಮಾಡಲು ಅತ್ಯುತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.

ದೇಶಕ್ಕೆ ರಾಜ್ಯದಿಂದ ಆರ್ಥಿಕ ಬಲ: ಕರ್ನಾಟಕ, ದೇಶಕ್ಕೆ ಆರ್ಥಿಕ ಬಲ ನೀಡುವುದರಲ್ಲಿ ಮೇಲಿನ ಸ್ಥಾನದಲ್ಲಿದೆ. ಸೇನೆಗೆ ಬೇಕಾದ ಅನೇಕ ಕಂಪನಿಗಳಿಗೆ ಜಾಗ ನೀಡಿದೆ. ರಾಜ್ಯ ಐಟಿ ಉತ್ಪಾದನಾ ಕ್ಯಾಪಿಟಲ್ ಆಗಿದೆ. 100ಕ್ಕೂ ಅಧಿಕ ದೇಶಗಳು ಈ ಶೋದಲ್ಲಿ ಭಾಗಿಯಾಗುತ್ತವೆ. ಕಳೆದ ಎಲ್ಲ ವರ್ಷಗಳ ಏರೋ ಇಂಡಿಯಾ ದಾಖಲೆಗಳನ್ನು ಈ ಶೋ ಮುರಿಯಲಿದೆ. ಈ ಬಾರಿ ಇಂಡಿಯಾ ಪೆವಿಲಿಯನ್ ಇರಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಕರ್ನಾಟಕ ಪೆವಿಲಿಯನ್: ಡಿಫೆನ್ಸ್ ಮಿನಿಸ್ಟರ್‌ಗಳ ಕಾನ್ಕ್ಲೇವ್ ಇರಲಿದೆ. ಸೈಬರ್ ಸೆಕ್ಯೂರಿಟಿ, ಆಗ್ಯುಮೆಂಟೆಡ್ ರಿಯಾಲಿಟಿ ಸೇರಿದಂತೆ ಅನೇಕ ಹೊಸತನಗಳನ್ನು ಕಾಣಬಹುದಾಗಿದೆ. ಕರ್ನಾಟಕ ಪೆವಿಲಿಯನ್ ಕೂಡ ಕಾಣಬಹುದು. ರಾಜ್ಯದ ನಾಗರೀಕರ ಉದ್ಯೋಗ ಸೃಷ್ಟಿಸಲು ಇದು ಉಪಯೋಗವಾಗುತ್ತದೆ ಎಂದರು.

ಬೆಂಗಳೂರು ಏರೋಸ್ಪೇಸ್ ಕೇಂದ್ರ: ಕಾರ್ಯಕ್ರಮದಲ್ಲಿ ಸಿ ಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ರಾಜ್ಯವು ಏರೋಸ್ಪೇಸ್ ನೀತಿ ಹಾಗೂ ರಕ್ಷಣಾ ಪಾರ್ಕ್ ನ ಮೊದಲ ಹಂತ ಪೂರ್ಣಗೊಂಡಿದೆ. 2 ನೇ ಹಂತವೂ ಪ್ರಾರಂಭವಾಗುತ್ತಿದೆ. ಬೆಂಗಳೂರು ಏರೋಸ್ಪೇಸ್ ಕೇಂದ್ರವಾಗಿದೆ. ಇದು ಏರ್ ಶೊ ನಡೆಸಲು ಅತ್ಯಂತ ಸೂಕ್ತ ಸ್ಥಳ. ಭಾರತೀಯ ಏರೋಸ್ಪೇಸ್ ತಂತ್ರಜ್ಞಾನವನ್ನು ಇದರಿಂದ ಬಿಂಬಿಸಬಹುದಾಗಿದೆ. ಬೆಂಗಳೂರು ವಾಣಿಜ್ಯ ಮತ್ತು ರಕ್ಷಣಾ ಉತ್ಪಾದನೆ ಕೇಂದ್ರವಾಗಿದೆ. ಬೆಂಗಳೂರಿನಲ್ಲಿ ಸ್ವಂತ ಏರ್ ಕ್ರಾಪ್ಟ್ ತಯಾರಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಈ ಕಾರ್ಯಸಾಧನೆಗೆ ಜಾಗತಿಕವಾಗಿ ಸಾಕಷ್ಟು ಕ್ರಮ ವಹಿಸಿದ್ದು, ಈ ದೇಶದ ಭವಿಷ್ಯಕ್ಕೆ ನಾವು ಸೂಕ್ತ ಸ್ಥಳ ಮತ್ತು ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಏರೋ ಇಂಡಿಯಾ ಶೋ ಆತಿಥ್ಯ ಗೌರವ: ಏರೋ ಇಂಡಿಯಾ ಶೋ ಆತಿಥ್ಯ ವಹಿಸುವುದು ಗೌರವದ ಸಂಕೇತ. ಇದರ ಆಯೋಜಿಸುವುದು ಕರ್ನಾಟಕ ಮತ್ತು ಬೆಂಗಳೂರಿಗೆ ಅಭ್ಯಾಸವಾಗಿದೆ. ಏರೊ ಸ್ಪೇಸ್ ಇಕೋ ಸಿಸ್ಟಮ್ ಅಭಿವೃದ್ಧಿಪಡಿಸಿದ ನಮ್ಮ ಹಿರಿಯರಿಗೆ ಅಭಿನಂದಿಸಬೇಕು ಎಂದರು.

ಕಳೆದ ಏರ್​ಶೋ ಆತ್ಮವಿಶ್ವಾಸ ಹೆಚ್ಚಳ: ಪ್ರತಿ ಬಾರಿ ಆತಿಥ್ಯ ವಹಿಸಿದಾಗಲೂ ಅತ್ಯಂತ ಯಶಸ್ವಿಯಾಗಿ ರಕ್ಷಣಾ ಹಾಗೂ ಏರೋಸ್ಪೇಸ್ ಉದ್ಯಮ ಹಾಗೂ ಸಾಮರ್ಥ್ಯದ ಪ್ರದರ್ಶನ ಮಾಡಿದ್ದೇವೆ. ಕೋವಿಡ್ ಸಮಯದಲ್ಲಿಯೂ ಕಾರ್ಯಕ್ರಮಗಳು ರದ್ದಾದರೂ ನಾವು ಎರಡು ವರ್ಷಗಳ ಹಿಂದೆ ಏರ್ ಶೊ ಯಶಸ್ವಿಯಾಗಿ ಜರುಗಿತು. ಅದು ನಮ್ಮ ಆತ್ಮವಿಶ್ವಾಸವನ್ಬು ಹೆಚ್ಚಿಸಿದೆ. ಇದು ಅತ್ಯಂತ ದೊಡ್ಡ ಏರ್‌ ಶೋ ಆಗಿದ್ದು, ಅತಿ ಹೆಚ್ಚು ವಿದೇಶಿ ರಕ್ಷಣಾ ಮಂತ್ರಿಗಳು, ಏರ್ ಫೋರ್ಸ್ ಸಿಇಒಗಳು, 35000 ಚದರ್​ ಅಡಿ ವಿಸ್ತೀರ್ಣದ ಪ್ರದರ್ಶನ, 67 ವಸ್ತುಪ್ರದರ್ಶನ , 600 ರಿಂದ 809 ಗೆ ಪ್ರದರ್ಶನಗಳು, 98 ವಿದೇಶಿ ಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಒಪ್ಪಂದಗಳ ಸಂಖ್ಯೆಯೂ ಹೆಚ್ಚಾಗಲಿದೆ ಎಂದು ಹೇಳಿದರು.

ವಾಯುಪಡೆಯನ್ನು ಬಲಪಡಿಸುವುದು ನಿರಂತರ ಪ್ರಕ್ರಿಯೆ: ವಾಯುಪಡೆಯ ತಂತ್ರಜ್ಞಾನ, ಸಾಮರ್ಥ್ಯ, ಮಾನವ ಸಂಪನ್ಮೂಲ ಬಲಪಡಿಸುವುದು ನಿರಂತರ ಪ್ರಕ್ರಿಯೆಯಾಗಿದೆ. ರಾಜ್​ನಾಥ್ ಸಿಂಗ್ ಅವರ ನಾಯಕತ್ವದಲ್ಲಿ ರಕ್ಷಣಾ ಉತ್ಪಾದನೆಯಲ್ಲಿ, ತಂತ್ರಜ್ಞಾನ ಮೇಲ್ದರ್ಜೆಗೇರುವಲ್ಲಿ ಭಾರತ ಆತ್ಮನಿರ್ಭರವಾಗುತ್ತಿದೆ. ನಮ್ಮ ರಕ್ಷಣಾ ಉಪಕರಣಗಳು ಶೇ 75% ರಷ್ಟು ಆಮದು ಮಾಡಿಕೊಳ್ಳುತ್ತಿದ್ದೆವು‌. ಈಗ ರಪ್ತು ಮಾಡುತ್ತಿದ್ದೇವೆ‌. ಏರೊ ಸ್ಪೇಸ್​ಗೆ ಸಂಬಂಧಿಸಿದಂತೆ ಕರ್ನಾಟಕ ಮಹತ್ವದ ಪಾತ್ರ ವಹಿಸುತ್ತದೆ. ಕರ್ನಾಟಕದಲ್ಲಿ 1940 ರಲ್ಲಿ ಹೆಚ್​ಎಎಲ್ ಸ್ಥಾಪನೆಯಾಗಿದ್ದು, ಎನ್ ಎ ಎಲ್ , ಬಿಹೆಚ್​ಇಎಲ್, ಡಿಆರ್​​ಡಿಒ ಎಲ್ಲವೂ ಆರ್ ಆಂಡ್ ಡಿ ಸಾಮರ್ಥ್ಯವನ್ನು ಹೆಚ್ಚಿಸಿವೆ ಎಂದು ತಿಳಿಸಿದರು.

ಕರ್ನಾಟಕದಿಂದ ಶೇ 67 % ರಷ್ಟು ಏರೋಸ್ಪೇಸ್ ಉಪಕರಣ: 1960 ರಲ್ಲಿ ಬೆಂಗಳೂರಿನಲ್ಲಿ ಇಸ್ರೋ ಆರಂಭವಾಯಿತು. ಪ್ರತಿ ದಶಕದಲ್ಲಿ ಏರೊ ಸ್ಪೇಸ್ ಅಭಿವೃದ್ಧಿಯಾಗಿದೆ. ಸ್ಥಳ, ಸಾಮರ್ಥ್ಯ, ವೃದ್ಧಿಯಾಯಿತು. 1960 ಆರ್ಯಭಟ ಉಪಗ್ರಹ ಬೆಂಗಳೂರಿನಿಂದ ಉಡಾವಣೆ ಮಾಡಲಾಯಿತು. ಶೇ 67 % ರಷ್ಟು ಏರೋಸ್ಪೇಸ್ ಉಪಕರಣಗಳು ಕರ್ನಾಟಕದಿಂದ ಉತ್ಪಾದನೆಯಾಗುತ್ತದೆ ಎಂದರು.

ಅರ್ಧ ಜಗತ್ತಿನ ದೇಶಗಳು ಭಾಗಿ: ಏರೊ ಇಂಡಿಯಾ ಶೊ 2023 ಅನ್ನು ಜನರು ನೆನಪಿನಲ್ಲಿಡುತ್ತಾರೆ‌. ಹಾಗೂ ಅಲ್ಲದೇ ಇಲ್ಲಿಂದ ಒಳ್ಳೆಯ ನೆನಪುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಈ ಕಾರ್ಯಕ್ರಮ ಯಶಸ್ವಿಯಾಗುವ ವಿಶ್ವಾಸವಿದ್ದು, ಏರೋಸ್ಪೇಸ್ ಹಾಗೂ ರಕ್ಷಣಾ ಉದ್ಯಮದ ವಿಸ್ತರಣೆಗೆ ಇದು ಸಹಕಾರಿಯಾಗಲಿದೆ. ಅರ್ಧ ಜಗತ್ತಿನ ದೇಶಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಇಡೀ ವಿಶ್ವವೇ ನಮ್ಮ ಕಡೆ ನೋಡುವಂತಾಗಬೇಕು ಎಂದು ಆಶಿಸಿದರು.

ಕೇಂದ್ರ ರಕ್ಷಣಾ ಇಲಾಖೆ ರಾಜ್ಯ ಸಚಿವ ಅಜಯ್ ಭಟ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗಿರಿಧರ್, ಎ.ಸಿ.ಎಸ್ ರಮಣ ರೆಡ್ಡಿ, ನಟರಾಜನ್, ಅನುರಾಗ್ ಬಾಜಪೇಯಿ ಉಪಸ್ಥಿತರಿದ್ದರು.

ಓದಿ : ಕೊನೆಯ ತ್ರೈಮಾಸಿಕದಲ್ಲಿ ಆರ್​ಬಿಐದಿಂದ ಸಾಲ ಎತ್ತುವಳಿಗೆ ಬೊಮ್ಮಾಯಿ‌ ಸರ್ಕಾರ ಕೊಂಚ ಬ್ರೇಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.