ETV Bharat / state

ಬೆಂಗಳೂರು: ಜನೌಷಧಿ ಕೇಂದ್ರಕ್ಕೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ.. ಜನರೊಂದಿಗೆ ಸಂವಾದ

ನಿರ್ಮಲಾ ಸೀತಾರಾಮನ್ ಅವರು ಜನೌಷಧಿ ಕೇಂದ್ರದ ಜನಪ್ರಿಯತೆಯನ್ನು ಜನರಿಗೆ ವಿವರಿಸಿದರು.

ಕೇಂದ್ರ ಹಣಕಾಸು ಸಚಿವೆ  ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
author img

By ETV Bharat Karnataka Team

Published : Nov 30, 2023, 10:20 PM IST

ಬೆಂಗಳೂರು : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ಸಂಜೆ ಯಶವಂತಪುರ ಸುಬೇದಾರ್ ಛತ್ರಂ ರಸ್ತೆಯಲ್ಲಿರುವ “ಪ್ರಧಾನಮಂತ್ರಿಗಳ ಜನೌಷಧ ಕೇಂದ್ರ”ಕ್ಕೆ ಭೇಟಿ ನೀಡಿ ಜನರ ಜೊತೆ ಸಂವಾದ ನಡೆಸಿದರು.

ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಜಾರ್ಖಂಡ್‍ನ ದಿಯೋಘರ್​​ನ ಏಮ್ಸ್​​​ನಲ್ಲಿ 10 ಸಾವಿರನೇ ಜನೌಷಧಿ ಕೇಂದ್ರವನ್ನು ಜನತೆಗೆ ಸಮರ್ಪಿಸಿದ್ದಾರೆ. ಮಧ್ಯಮ ವರ್ಗ ಮತ್ತು ಬಡಜನರಲ್ಲಿ ಜನೌಷಧಿ ಕೇಂದ್ರಗಳ ಜನಪ್ರಿಯತೆ ಹೆಚ್ಚುತ್ತಿದೆ ಎಂದು ತಿಳಿಸಿದರು.

ಜನೌಷಧಿ ಕೇಂದ್ರದಲ್ಲಿ ನಿರ್ಮಲಾ ಸೀತಾರಾಮನ್ ಜನರೊಂದಿಗೆ ಸಂವಾದ

ಕೆಲವು ಔಷಧಿಗಳು ಶೇ 70ರಷ್ಟು ಕಡಿಮೆ ದರಕ್ಕೆ ಲಭಿಸುತ್ತವೆ. ಕಳೆದ 9 ವರ್ಷಗಳಲ್ಲಿ, ದೇಶಾದ್ಯಂತ ಜನೌಷಧಿ ಕೇಂದ್ರಗಳ ಸಂಖ್ಯೆಯಲ್ಲಿ ಗಮನಾರ್ಹ ಹೆಚ್ಚಳವಾಗಿದೆ. ಪ್ರಧಾನಿಯವರು ವಿಕಸಿತ ಭಾರತ್ ಸಂಕಲ್ಪ ಯಾತ್ರಾದ ವೇಳೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದನ್ನೂ ಅವರು ಗಮನಕ್ಕೆ ತಂದರು.

ದೇಶಾದ್ಯಂತ ಇರುವ ಜನೌಷಧಿ ಕೇಂದ್ರಗಳಲ್ಲಿ 1,800 ಕ್ಕೂ ಹೆಚ್ಚು ಔಷಧಗಳು, 285 ಶಸ್ತ್ರಚಿಕಿತ್ಸಾ ಉಪಕರಣಗಳು ಮತ್ತು ಔಷಧಿ ಕ್ಷೇತ್ರಕ್ಕೆ ಪೂರಕ ವಸ್ತುಗಳು ಲಭ್ಯವಿವೆ. ಆರೋಗ್ಯ ಸೇವೆಯನ್ನು ಕೈಗೆಟಕುವ ದರದಲ್ಲಿ ಮತ್ತು ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಉದ್ದೇಶವಾಗಿದೆ. ಕೈಗೆಟಕುವ ದರದಲ್ಲಿ ಔಷಧಿಗಳನ್ನು ಲಭ್ಯವಾಗುವಂತೆ ಮಾಡಲು ಜನೌಷಧಿ ಕೇಂದ್ರಗಳ ಸ್ಥಾಪನೆ ಈ ದಿಸೆಯಲ್ಲಿನ ಪ್ರಮುಖ ಉಪಕ್ರಮಗಳಲ್ಲಿ ಒಂದು ಎಂದು ಹಣಕಾಸು ಸಚಿವರು ಜನರಿಗೆ ತಿಳಿಸಿದರು.

ಸಾಮಾನ್ಯ ಕಾಯಿಲೆಗಳಾದ ಜ್ವರ, ಕೆಮ್ಮು ಮತ್ತು ನೆಗಡಿ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ಕಾಯಿಲೆಗಳಿಗೆ ಔಷಧಿಗಳು ಇಲ್ಲಿ ಲಭಿಸುತ್ತವೆ. ಕ್ಯಾನ್ಸರ್ ಮತ್ತು ಹೃದ್ರೋಗದಂಥ ಮಾರಣಾಂತಿಕ ಕಾಯಿಲೆಗಳಿಗೆ ಔಷಧಿಗಳು ಜನೌಷಧಿ ಕೇಂದ್ರಗಳಲ್ಲಿ ಕಡಿಮೆ ದರದಲ್ಲಿ ಲಭ್ಯವಿವೆ. ಬ್ರಾಂಡೆಡ್ ಔಷಧಿಗಳ ಮಾರುಕಟ್ಟೆ ದರಗಳಿಗೆ ಹೋಲಿಸಿದರೆ ಇಲ್ಲಿನ ದರ ಅತ್ಯಂತ ಕಡಿಮೆ ಎಂದು ಮಾಹಿತಿ ನೀಡಿದರು. ಈ ವೇಳೆ, ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

10,000 ಜನೌಷಧ ಕೇಂದ್ರಗಳನ್ನು ತೆರೆಯುವ ಗುರಿ : ಜನವರಿ 31 2023ರವರೆಗೆ, ದೇಶದ 743 ಜಿಲ್ಲೆಗಳಲ್ಲಿ ಜನರಿಕ್ ಔಷಧಗಳ ಲಭ್ಯತೆಯೊಂದಿಗೆ 9,082 ಜನೌಷಧ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಸುಮಾರು 1,759 ಔಷಧಗಳು ಮತ್ತು 280 ಶಸ್ತ್ರಚಿಕಿತ್ಸಾ ಉಪಕರಣಗಳನ್ನು ಅತ್ಯಂತ ಕೈಗೆಟಕುವ ದರದಲ್ಲಿ ಒದಗಿಸಲಾಗುತ್ತಿದೆ. ಅವುಗಳ ಜೊತೆಗೆ ಪ್ರೋಟೀನ್​​ ಪೌಡರ್‌ಗಳು, ಮಾಲ್ಟ್ ಆಧಾರಿತ ಆಹಾರ ಪೂರಕಗಳು, ಪ್ರೋಟೀನ್, ಇಮ್ಯುನಿಟಿ ಔಷಧಗಳು, ಸ್ಯಾನಿಟೈಸರ್‌ಗಳು, ಮಾಸ್ಕ್‌ಗಳು, ಗ್ಲುಕೋಮೀಟರ್‌ಗಳು, ಆಕ್ಸಿಮೀಟರ್‌ಗಳು ಇತ್ಯಾದಿ ಮತ್ತು ನ್ಯೂಟ್ರಾಸ್ಯುಟಿಕಲ್ ಉತ್ಪನ್ನಗಳನ್ನು ಸಹ ಈ ಕೇಂದ್ರಗಳಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಭಾರತ ಸರ್ಕಾರವು ಡಿಸೆಂಬರ್ 2023ರ ಅಂತ್ಯದ ವೇಳೆಗೆ 10,000 ಜನೌಷಧ ಕೇಂದ್ರಗಳನ್ನು ತೆರೆಯುವ ಗುರಿಯನ್ನು ಹೊಂದಿದೆ.

ಇದನ್ನೂ ಓದಿ : ನಿಮ್ಹಾನ್ಸ್​​ನಲ್ಲಿ ಮಗು ಸಾವು ಘಟನೆ ಸಂಬಂಧ ವರದಿ ಕೇಳಿದ್ದು, ಬಳಿಕ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.