ETV Bharat / state

ಬಡವರ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸುತ್ತಿದೆ: ನಿರ್ಮಲಾ ಸೀತಾರಾಮನ್

ಉಜ್ವಲ, ಉಜಾಲಾ, ಸ್ವನಿಧಿ, ಮುದ್ರಾ, ಜನೌಷಧಿ, ಕಿಸಾನ್ ಸಮ್ಮಾನ್‍ನಂತಹ ಯೋಜನೆಗಳ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ಸಮಸ್ಯೆಗಳನ್ನು ನಿವಾರಿಸಲು ಆದ್ಯತೆ ಕೊಟ್ಟಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

Union Finance Minister visits BJP state headquarters
ಬಡವರ ಸಮಸ್ಯೆಯನ್ನು ಕೇಂದ್ರ ಸರ್ಕಾರ ಪರಿಹರಿಸುತ್ತಿದೆ: ನಿರ್ಮಲಾ ಸೀತಾರಾಮನ್
author img

By

Published : Feb 21, 2021, 5:48 PM IST

Updated : Feb 21, 2021, 9:21 PM IST

ಬೆಂಗಳೂರು: ಬಡವರಿಗಾಗಿ ಇರುವ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಕೆಲಸವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಾಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.

ನಗರದ ಹೋಟೆಲ್ ತಾಜ್ ವೆಸ್ಟೆಂಡ್‍ನಲ್ಲಿ ಬಿಜೆಪಿ ಆರ್ಥಿಕ ಪ್ರಕೋಷ್ಠ ಏರ್ಪಡಿಸಿದ್ದ "ಆರ್ಥಿಕ ಅವಲೋಕನ, ಆತ್ಮವಿಶ್ವಾಸದ ಭಾರತಕ್ಕಾಗಿ ಆತ್ಮನಿರ್ಭರ ಬಜೆಟ್” ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಜ್ವಲ, ಉಜಾಲಾ, ಸ್ವನಿಧಿ, ಮುದ್ರಾ, ಜನೌಷಧಿ, ಕಿಸಾನ್ ಸಮ್ಮಾನ್‍ನಂತಹ ಯೋಜನೆಗಳ ಮೂಲಕ ಕೇಂದ್ರದ ಬಿಜೆಪಿ ಸರ್ಕಾರ ಬಡವರ ಸಮಸ್ಯೆಗಳನ್ನು ನಿವಾರಿಸಲು ಆದ್ಯತೆ ಕೊಟ್ಟಿದೆ ಎಂದು ವಿವರಿಸಿದರು.

ಈ ಹಿಂದೆ ಭಾರತವೆಂದರೆ ಮೂಲಸೌಕರ್ಯಗಳ ಕೊರತೆ ಇರುವ ದೇಶ ಎಂಬ ಚಿಂತನೆ ಸಹಜವಾಗಿತ್ತು. ದೀನ್ ದಯಾಳ್​​ ಉಪಾಧ್ಯಾಯರ "ಅಂತ್ಯೋದಯ" ಚಿಂತನೆಗಳೊಂದಿಗೆ ಅದನ್ನು ತೊಡೆದುಹಾಕಲು ಕೇಂದ್ರ ಸರ್ಕಾರವು ಶ್ರಮಿಸುತ್ತಿದೆ. ಲೈಸನ್ಸ್ ರಾಜ್ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದೆ. ಹಿಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದ ಸರ್ಕಾರವು ಸುಸ್ಥಿರ ಆಡಳಿತ ನೀಡಲು ಶ್ರಮಿಸಿತು. ಈಗಿನ ಜನಪರ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಉಜ್ವಲ ಯೋಜನೆಯಡಿ ಈಗಾಗಲೇ 8 ಕೋಟಿ ಬಡವರಿಗೆ ಉಚಿತ ಗ್ಯಾಸ್ ಸಿಲಿಂಡರ್ ಸಂಪರ್ಕ ನೀಡಿದ್ದು, ಈ ಬಜೆಟ್‍ನಡಿ ಮತ್ತೆ ಒಂದು ಕೋಟಿ ಅರ್ಹ ಬಡವರಿಗೆ ಉಚಿತ ಸಿಲಿಂಡರ್ ಸಂಪರ್ಕ ನೀಡಲು ಮುಂದಾಗಿದೆ ಎಂದು ವಿವರಿಸಿದರು.

1969ರಲ್ಲಿ ಬ್ಯಾಂಕ್‍ಗಳ ರಾಷ್ಟ್ರೀಕರಣ ನಡೆದರೂ ಬಡವರಿಗೆ ಅದರಿಂದ ವಿಶೇಷ ಪ್ರಯೋಜನ ಲಭಿಸಿರಲಿಲ್ಲ. ಆಧಾರ್ ಸಂಖ್ಯೆಯನ್ನು ಮೊಬೈಲ್‍ಗೆ ಸಂಪರ್ಕಿಸಿ ಜನ್​​ಧನ್ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರಿಂದ ನಿಜವಾದ ಬಡವರಿಗೆ ಈ ಯೋಜನೆಯ ಪ್ರಯೋಜನ ಲಭಿಸುತ್ತಿದೆ ಎಂದು ತಿಳಿಸಿದರು.

ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆದಾರರ ಮೇಲೆ ನಂಬಿಕೆ ಇಡುವ ಮತ್ತು "ಸಬ್ ಕಾ ಸಾಥ್ ಸಬ್ ಕಾ ವಿಕಾಸ್" ಚಿಂತನೆಯಡಿ ದೇಶದ ಅಭಿವೃದ್ಧಿಗೆ ಬದ್ಧತೆ ತೋರುವ ಸರ್ಕಾರ ನಮ್ಮದು. ಉದ್ಯೋಗ ಹೆಚ್ಚಿಸುವ ಮೂಲಸೌಕರ್ಯಕ್ಕೆ ಆದ್ಯತೆ ನೀಡಿ ಸುಸ್ಥಿರ ಪ್ರಗತಿ ನಮ್ಮದಾಗಿಸಲು ಸರ್ಕಾರ ಮುಂದಾಗಿದೆ. ಉತ್ತಮವಾಗಿ ಕಾರ್ಯ ನಿರ್ವಹಿಸದೆ ಇರುವ ಸಾರ್ವಜನಿಕ ಸಂಸ್ಥೆಗಳನ್ನು ಸಮರ್ಥವಾಗಿ ನಿರ್ವಹಿಸಲು ಮತ್ತು ದೇಶದ ಅಭಿವೃದ್ಧಿ ಸಾಧಿಸಲು ಖಾಸಗೀಕರಣ ಅನಿವಾರ್ಯ ಎಂದು ಅವರು ತಿಳಿಸಿದರು.

ಜಗನ್ನಾಥ ಭವನಕ್ಕೆ ಭೇಟಿ :

Union Finance Minister visits BJP state headquarters
ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ಕ್ಕೆ ಭೇಟಿ ನೀಡಿದರು.

ಈ ಸುದ್ದಿಯನ್ನೂ ಓದಿ: ಹೆಚ್ಚುತ್ತಿರುವ ಭಾರತದ ಬೇಡಿಕೆಗಳ ಈಡೇರಿಕೆ ಬರೀ ಸರ್ಕಾರದಿಂದ ಅಸಾಧ್ಯ ; ಖಾಸಗಿ ಪಾತ್ರ ಅನಿವಾರ್ಯ- ವಿತ್ತ ಸಚಿವೆ

ಈ ಸಂದರ್ಭದಲ್ಲಿ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಪಕ್ಷದ ರಾಜ್ಯ ಎಸ್.ಸಿ. ಮೋರ್ಚಾದ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ಕುಡಚಿ ಶಾಸಕ ಪಿ. ರಾಜೀವ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ರಾಜ್ಯ ಮಾಧ್ಯಮ ವಿಭಾಗದ ಸಂಚಾಲ ಕರುಣಾಕರ ಖಾಸಲೆ, ಪಕ್ಷದ ಪದಾಧಿಕಾರಿಗಳು ಇದ್ದರು.

Last Updated : Feb 21, 2021, 9:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.