ಬೆಂಗಳೂರು: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿಯೇ ಬೆಂಗಳೂರಿಗೆ ಆಗಮಿಸುತ್ತಿದ್ದು, ನಾಳೆ ಇಡೀ ದಿನ ಬಿಡುವಿಲ್ಲದೇ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ನಾಯಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.
ಬೆಳಗ್ಗೆ 10 ಗಂಟೆಗೆ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ ಬಸವ ಜಯಂತಿಗೆ ಚಾಲನೆ ನೀಡಲಿದ್ದು, 10.30ಕ್ಕೆ ನೃಪತುಂಗ ರಸ್ತೆಯಲ್ಲಿ ನೃಪತುಂಗ ವಿಶ್ವವಿದ್ಯಾಲಯಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಹಾಗೂ ಬಳ್ಳಾರಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ವರ್ಚುಯಲ್ ಮೂಲಕ ಚಾಲನೆ ನೀಡಲಿದ್ದಾರೆ. ಅಪರಾಹ್ನ 12 ಗಂಟೆಗೆ ಯಲಹಂಕದ ಎನ್ಎಟಿಜಿಆರ್‌ಡಿ ಡಿಆರ್‌ಸಿ ಕೇಂದ್ರದ ಉದ್ಘಾಟನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ರೇಸ್ ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್ಗೆ ಭೇಟಿ ನೀಡಲಿದ್ದು ಸಿಎಂ ಜೊತೆ ಭೋಜನ ಕೂಟದಲ್ಲಿ ಭಾಗಿಯಾಗಲಿದ್ದಾರೆ. ಸಂಜೆ 4 ಗಂಟೆಗೆ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಸಲಿದ್ದಾರೆ. ಸಂಜೆ 5.30ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಖೇಲೋ ಇಂಡಿಯಾ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿರುವ ಅಮಿತ್ ಶಾ ಸಂಜೆ 8.15ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ನವದೆಹಲಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ: ನಾಳೆ ಬಿಜೆಪಿ ಕಚೇರಿಗೆ ಅಮಿತ್ ಶಾ ಭೇಟಿ: ಮಲ್ಲೇಶ್ವರಂ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ನಿಷೇಧ