ETV Bharat / state

ರಸಗೊಬ್ಬರ ಕೊರತೆ ನಿವಾರಣೆಗೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ : ಸಿಎಂ ಬೊಮ್ಮಾಯಿ

ಈವರೆಗೆ ಶೇ.81ರಷ್ಟು ಮೊದಲ ಡೋಸ್ ಹಾಗೂ ಶೇ. 37ರಷ್ಟು ಎರಡನೇ ಡೋಸ್ ನೀಡಲಾಗಿದೆ. 51 ಲಕ್ಷ ಡೋಸ್ ದಾಸ್ತಾನು ಲಭ್ಯವಿದೆ. ಎರಡನೇ ಡೋಸ್ ನೀಡಲು ಒತ್ತು ನೀಡಲಾಗುವುದು ಎಂದರು. ಡಿಸೆಂಬರ್ ಅಂತ್ಯದೊಳಗೆ ಮೊದಲ ಡೋಸ್ ಶೇಕಡಾ ಹಾಗೂ ಎರಡನೇ ಡೋಸ್ ಕನಿಷ್ಠ ಶೇ.70 ಕೊಡಬೇಕೆಂಬ ಗುರಿ ಇದೆ ಎಂದು ಇದೇ ವೇಳೆ ಹೇಳಿದರು..

author img

By

Published : Oct 8, 2021, 7:48 PM IST

Union Minister has promised to alleviate the fertilizer shortage: CM Bommai
ಸಿಎಂ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ರಸಗೊಬ್ಬರ ಕೊರತೆ ನಿವಾರಣೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್‌ಸುಖ್ ಮಾಂಡವೀಯ ಭರವಸೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ನವದೆಹಲಿಯಲ್ಲಿ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಮನ್‌ಸುಖ್ ಮಾಂಡವೀಯ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ನಂತರ ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿಗಳು, ರಬಿ ಹಂಗಾಮಿಗೆ ಸುಮಾರು 32 ಸಾವಿರ ಮೆಟ್ರಿಕ್ ಟನ್ ಡಿಎಪಿ ಹಾಗೂ ಸುಮಾರು 10 ಸಾವಿರ ಮೆಟ್ರಿಕ್ ಟನ್ ಎಂಒಪಿ ಕೊರತೆ ಇದೆ. ಇದನ್ನು ಒದಗಿಸುವಂತೆ ಮನವಿ ಮಾಡಲಾಯಿತು. ಇದನ್ನು ಒಂದು ವಾರದೊಳಗೆ ಒದಗಿಸುವುದಾಗಿ ಕೇಂದ್ರ ಸಚಿವರು ತಿಳಿಸಿದ್ದಾರೆ ಎಂದರು.

ರಾಜ್ಯದ ಲಸಿಕೆ ಅಭಿಯಾನದ ಕುರಿತು ಕೇಂದ್ರ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ 1.48 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಈ ಕುರಿತು ಅವರು ಸಂತೋಷ ವ್ಯಕ್ತಪಡಿಸಿದರು.

ಈವರೆಗೆ ಶೇ.81ರಷ್ಟು ಮೊದಲ ಡೋಸ್ ಹಾಗೂ ಶೇ. 37ರಷ್ಟು ಎರಡನೇ ಡೋಸ್ ನೀಡಲಾಗಿದೆ. 51 ಲಕ್ಷ ಡೋಸ್ ದಾಸ್ತಾನು ಲಭ್ಯವಿದೆ. ಎರಡನೇ ಡೋಸ್ ನೀಡಲು ಒತ್ತು ನೀಡಲಾಗುವುದು ಎಂದರು. ಡಿಸೆಂಬರ್ ಅಂತ್ಯದೊಳಗೆ ಮೊದಲ ಡೋಸ್ ಶೇಕಡಾ ಹಾಗೂ ಎರಡನೇ ಡೋಸ್ ಕನಿಷ್ಠ ಶೇ.70 ಕೊಡಬೇಕೆಂಬ ಗುರಿ ಇದೆ ಎಂದು ಇದೇ ವೇಳೆ ಹೇಳಿದರು.

ನಿಮ್ಹಾನ್ಸ್ ಘಟಿಕೋತ್ಸವಕ್ಕಾಗಿ ಸೋಮವಾರ ಸಚಿವರು ಬೆಂಗಳೂರಿಗೆ ಆಗಮಿಸಲಿದ್ದು, ರಾಜ್ಯದ ಆರೋಗ್ಯ ಸೇವಾ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸಿ, ಕ್ರಮವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.