ETV Bharat / state

ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ಕೇಂದ್ರ ಸಚಿವ ಸದಾನಂದ ಗೌಡ

ನಂದಿನಿ ಲೇಔಟ್​ನಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಹಾಗೂ ಕುಡಿಯುವ ನೀರಿನ ಪ್ಲಾಂಟ್​ ಅನ್ನು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಉದ್ಘಾಟಿಸಿದ್ದಾರೆ.

author img

By

Published : Aug 31, 2020, 3:04 PM IST

Sadananda Gowda inaugurating the new commercial complex in bengaluru
ನೂತನ ವಾಣಿಜ್ಯ ಸಂಕೀರ್ಣ ಉದ್ಘಾಟಿಸಿದ ಕೇಂದ್ರ ಸಚಿವ ಸದಾನಂದ ಗೌಡ

ಬೆಂಗಳೂರು: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 43, ನಂದಿನಿ ಲೇಔಟ್​ನಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಹಾಗೂ ಕುಡಿಯುವ ನೀರಿನ ಪ್ಲಾಂಟ್​ ಅನ್ನು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ಉದ್ಘಾಟನೆ ಮಾಡಿದ್ದಾರೆ.

ಸ್ಥಳೀಯ ಶಾಸಕರು ಹಾಗೂ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ಕೂಡ ಉಪಸ್ಥಿತರಿದ್ದರು‌. ಇದೇ ವೇಳೆ ಮಾತನಾಡಿದ ಸದಾನಂದ ಗೌಡ, ಮಹಾಮಾರಿ ಕೊರೊನಾ ರೋಗದ ಮಧ್ಯೆಯೂ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ನಡೆಯುತ್ತಿವೆ. ಅದಕ್ಕೆ ನಿದರ್ಶನ ಎಂಬಂತೆ ಇಂದು ನಂದಿನಿ ಲೇಔಟ್​ನಲ್ಲಿ ಬಿಬಿಎಂಪಿ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಾಣಿಜ್ಯ ಸಂಕೀರ್ಣ ಕಟ್ಟಡ ನಿರ್ಮಾಣವಾಗಿದೆ. ಒಂದೇ ಸೂರಿನಡಿ ಎಲ್ಲಾ ಕಚೆರಿ ಒಳಗೊಂಡ ಈ ಕಟ್ಟಡ ಸಾರ್ವಜನಿಕರಿಗೆ ಇಂದು ಲೋಕಾರ್ಪಣೆ ಮಾಡಿದ್ದು ತುಂಬಾ ಖುಷಿಯಾಗಿದೆ ಎಂದರು. ಹಾಗೆಯೇ ಆಹಾರ ಸಚಿವ ಕೆ. ಗೋಪಾಲಯ್ಯ ಮತ್ತು ಪಾಲಿಕೆ ಸದಸ್ಯ ಕೆ.ವಿ. ರಾಜೇಂದ್ರ ಕುಮಾರ್ ಅವರ ಜನಮುಖಿ ಕಾರ್ಯಗಳಿಗೆ ಅಭಿನಂದನೆ ಸಲ್ಲಿಸಿದರು.

ನಂತರ ಮಾತನಾಡಿದ ಆಹಾರ ಸಚಿವ ಕೆ.ಗೋಪಾಲಯ್ಯ, ನಮ್ಮ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ಎಲ್ಲ ವಾರ್ಡ್​ಗಳಲ್ಲಿಯೂ ಒಂದೇ ಕಡೆ ಎಲ್ಲ ಸೌಲಭ್ಯ ದೊರಕಲು ಶ್ರಮಿಸುತ್ತಿದ್ದು, ನಂದಿನಿ ಬಡಾವಣೆಯಲ್ಲಿ ಮುಂದಿನ ದಿನಗಳಲ್ಲಿ ಈಜು ಕೊಳ ನಿರ್ಮಾಣ ಸೇರಿದಂತೆ ಬಾಕಿ ಇರುವ ಎಲ್ಲ ಕೆಲಸಗಳನ್ನ ಶೀಘ್ರದಲ್ಲಿ ಮಾಡಿ ಮುಗಿಸಲಾಗುವುದು. ಕ್ಷೇತ್ರದ ಜನರಿಗೆ ಮಾತು ನೀಡಿದಂತೆ ಎಲ್ಲ ಕೆಲಸ ಮಾಡಲು ಬದ್ಧನಾಗಿದ್ದೇನೆ ಎಂದರು.

ಪಾಲಿಕೆ ಸದಸ್ಯ ರಾಜೇಂದ್ರ ಕುಮಾರ್ ಮಾತನಾಡಿ, ನಮ್ಮ ಅಧಿಕಾರಾವಧಿಯಲ್ಲಿ ಕೇಂದ್ರ ಸಚಿವ ಸದಾನಂದ ಗೌಡರು ಹಾಗೂ ಆಹಾರ ಸಚಿವರಾದ ಕೆ. ಗೋಪಾಲಯ್ಯ ಅವರ ನಿರಂತರ ಪ್ರೋತ್ಸಾಹದಿಂದ ಇಂದು ಈ ವಾಣಿಜ್ಯ ಸಂಕೀರ್ಣ ತಲೆಯೆತ್ತಿ ನಿಂತಿದೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.