ಲಕ್ನೋ/ಬೆಂಗಳೂರು: ಉತ್ತರಪ್ರದೇಶದ ಚುನಾವಣಾ ಅಖಾಡಕ್ಕೆ ಇಳಿದಿರುವ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.
ಸಂಘಟನೆಯಲ್ಲಿ ಮುಂಚೂಣಿಯಲ್ಲಿರುವ ಶೋಭಾ ಕರಂದ್ಲಾಜೆ ಅವರನ್ನು ಉತ್ತರಪ್ರದೇಶದ ಚುನಾವಣಾ ಪ್ರಚಾರದ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಹಾಗಾಗಿ, ಕೆಲದಿನಗಳಿಂದ ಉತ್ತರಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ.
ಇಂದು ಉತ್ತರಪ್ರದೇಶದ ಅಯೋಧ್ಯೆ ಗ್ರಾಮಾಂತರ ಜಿಲ್ಲೆಯ ಮಿಲ್ಕಿಪುರ ಕ್ಷೇತ್ರದಲ್ಲಿ ಪ್ರಚಾರ ಮಾಡಿದರು. ಅಯೋಧ್ಯೆ ಗ್ರಾಮಾಂತರ ಜಿಲ್ಲೆಯ ಹಲವು ಹಳ್ಳಿಗಳಿಗೆ ತೆರಳಿ ಬೆಳಗ್ಗೆಯಿಂದಲೂ ಶೋಭಾ ಕರಂದ್ಲಾಜೆ ಅವರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.
ಇದನ್ನೂ ಓದಿ: ಅಮೆರಿಕಾಕ್ಕಿಂತಲೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇವೆ: ಅಶ್ವತ್ಥ ನಾರಾಯಣ್
ಸಣ್ಣ ಸಣ್ಣ ಹಳ್ಳಿಗಳಿಗೂ ತೆರಳುತ್ತಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಗೆ ಮತ ಹಾಕಿ ಎಂದು ಮತದಾರರಿಗೆ ಮನವಿ ಮಾಡಿದರು. ಜೊತೆಗೆ ಗ್ರಾಮಗಳಲ್ಲಿ ಮುಖಂಡರನ್ನು ಸೇರಿಸಿ ಸಭೆಗಳನ್ನೂ ಸಹ ನಡೆಸುತ್ತಿದ್ದಾರೆ.