ದೊಡ್ಡಬಳ್ಳಾಪುರ : ತಾಲೂಕಿನ ಕನ್ನಮಂಗಲ ಗೇಟ್ ಬಳಿಯ ಗೋಧಿ ಮೀಲ್ ಹಿಂಭಾಗದ ಪಾಳು ಬಿದ್ದ ಮನೆಯೊಂದರಲ್ಲಿ ಕೊಳೆತು ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಶವ ಪತ್ತೆಯಾಗಿದ್ದು, ಅನುಮಾನಕ್ಕೆ ಎಡೆ ಮಾಡಿದೆ.
ಪತ್ತೆಯಾಗಿರುವ ಮೃತದೇಹ ಸಂಪೂರ್ಣವಾಗಿ ಕೊಳೆತು ಹೋಗಿದ್ದು, ಗುರುತು ಸಿಗದ ರೀತಿಯಲ್ಲಿ ಪತ್ತೆಯಾಗಿದೆ. ಈ ಗೋಧಿ ಮಿಲ್ನಲ್ಲಿ ಉತ್ತರ ಭಾರತೀಯರು ಕೆಲಸ ಮಾಡುತ್ತಿದ್ದು, ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.
ಘಟನಾ ಸ್ಥಳಕ್ಕೆ ದೊಡ್ಡಬೆಳವಂಗಲ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.