ಬೆಂಗಳೂರು: ಕಾರು ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಗೇನಹಳ್ಳಿ ಗೇಟ್ ಬಳಿ ನಡೆದಿದೆ.
ಸಂಚಾರಿ ಪೊಲೀಸ್ ಠಾಣೆಯ ನಾಗೇನಹಳ್ಳಿ ಗೇಟ್ ಬಳಿ ವ್ಯಕ್ತಿ ರಸ್ತೆ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಪಾದಚಾರಿ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯ ಕುರಿತಾದ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ ವ್ಯಕ್ತಿಯ ಕೈ ಮೇಲೆ ತಮಿಳು ಭಾಷೆಯಲ್ಲಿ ಏನೋ ಬರೆದ ಗುರುತುಗಳಿವೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಸಂಚಾರಿ ಪೊಲೀಸರು, ಕಾರು ಚಾಲಕನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.