ETV Bharat / state

Unlock 3.O: ರಾಜ್ಯದಲ್ಲಿ ಸಹಜ ಸ್ಥಿತಿಯತ್ತ ಜನಜೀವನ.. ಯಾವುದಕ್ಕೆಲ್ಲ ಅವಕಾಶ? - ಮಾಲ್ ಓಪನ್

ಇಂದಿನಿಂದ ರಾಜ್ಯದಲ್ಲಿ ಅನ್​ಲಾಕ್​ 3.0 ಜಾರಿಯಾಗಲಿದ್ದು, ಧಾರ್ಮಿಕ ಕೇಂದ್ರಗಳು, ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮೂರನೇ ಹಂತದ ಅನ್​ಲಾಕ್​ನಲ್ಲಿ ಯಾವುದೆಕ್ಕಲ್ಲ ಅವಕಾಶ ನೀಡಲಾಗಿದೆ ಎಂಬುದರ ಮಾಹಿತಿ ಇಲ್ಲಿದೆ.

Unlock 3.0 in Karnataka
ಕರ್ನಾಟಕ ಅನ್​ಲಾಕ್​
author img

By

Published : Jul 5, 2021, 7:26 AM IST

Updated : Jul 5, 2021, 8:16 AM IST

ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಜನಜೀವನ ಬಹುತೇಕ ಸಹಜ ಸ್ಥಿತಿಗೆ ಮರಳಲಿದೆ. ಸತತ ಎರಡೂವರೆ ತಿಂಗಳ ಕೋವಿಡ್​ ಲಾಕ್​ಡೌನ್​ ಬಳಿಕ ಮೂರನೇ ಹಂತದ ಅನ್​ಲಾಕ್ ಜಾರಿಯಾಗಿದೆ.

ಮೂರನೇ ಹಂತದ ಅನ್​ಲಾಕ್​ನಲ್ಲಿ ವೀಕೆಂಡ್ ಕರ್ಫ್ಯೂ ರದ್ದುಗೊಳಿಸಲಾಗಿದೆ. ನೈಟ್ ಕರ್ಫ್ಯೂ ಸಡಿಲಿಕೆ ಮಾಡಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ ನೈಟ್ ಕರ್ಫ್ಯೂ ಇರಲಿದೆ. ಎಲ್ಲಾ ಧಾರ್ಮಿಕ ಕೇಂದ್ರಗಳು ತೆರೆಯಲಿದ್ದು, ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ ಇರಲಿದೆ. ಇತರೆ ಸೇವೆಗಳಿಗೆ ನಿರ್ಬಂಧ ಮುಂದುವರಿಯಲಿದೆ. ಇಂದು ಬೆಳಗ್ಗೆ 5 ಗಂಟೆಯಿಂದ ಜುಲೈ 19 ರ ಬೆಳಗ್ಗೆ 5 ಗಂಟೆಯವರೆಗೆ ಅನ್​ಲಾಕ್​ 3.0 ಜಾರಿಯಲ್ಲಿ ಇರಲಿದೆ.

ಜಿಲ್ಲೆಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಜಿಲ್ಲಾಡಳಿತಗಳು ಕ್ರಮ ಕೈಗೊಳ್ಳಬೇಕು. ಹೆಚ್ಚಿನ ನಿರ್ಬಂಧಗಳನ್ನು ವಿಧಿಸುವುದಾದರೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ತೀರ್ಮಾನ ತೆಗೆದುಕೊಳ್ಳಲು ಸರ್ಕಾರ ಸೂಚಿಸಿದೆ.

ಅನ್​ಲಾಕ್​ 3.0 ಮಾರ್ಗಸೂಚಿಗಳು ಹೀಗಿವೆ

  • ಸರ್ಕಾರಿ, ಖಾಸಗಿ ಕಚೇರಿಗಳು, ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು.
  • ಮಾಲ್​ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.
  • ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆಗಳು ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಬಹುದು.
  • ದೇವಸ್ಥಾನಗಳಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶ.
  • ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಲ್ಲಿ 100 ಜನ ಭಾಗವಹಿಸಬಹುದು.
  • ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ.
  • ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸಕ್ಕೆ ಅನುಮತಿ.
  • ಅಂತ್ಯ ಸಂಸ್ಕಾರದಲ್ಲಿ 20 ಜನ ಭಾಗವಹಿಸಲು ಸಮ್ಮತಿ.
  • ಕೋವಿಡ್ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9 ಗಂಟೆಯಿಂದ ರಿಂದ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ.
  • ವಾರಾಂತ್ಯದ ಕರ್ಫ್ಯೂ ಇರುವುದರಿಲ್ಲ.
  • ಸಾಮಾಜಿಕ, ಧಾರ್ಮಿಕ, ಮತ್ತು ರಾಜಕೀಯ ಸಭೆ ಸಮಾರಂಭಗಳು, ಪ್ರತಿಭಟನೆಗಳು ಹಾಗೂ ಇತರೆ ಸಮಾರಂಭಗಳಿಗೆ ಅವಕಾಶವಿಲ್ಲ.
  • ಶೈಕ್ಷಣಿಕ ಸಂಸ್ಥೆಗಳನ್ನು ತೆರೆಯುವ ಬಗ್ಗೆ ಪ್ರತ್ಯೇಕವಾಗಿ ತೀರ್ಮಾನ.
  • ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶವಿಲ್ಲ, ಬಾರ್​​ ತೆರೆಯಬಹುದು.

Last Updated : Jul 5, 2021, 8:16 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.