ETV Bharat / state

ಅಪ್ರಾಪ್ತನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ, ಕೊಲೆ: ಆರೋಪಿಗೆ ಮರಣದಂಡನೆ - ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವಂತೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ.

ಅಪ್ರಾಪ್ತನ ಮೇಲೆ ಅಸ್ವಭಾವಿಕ ಲೈಂಗಿಕ ಕ್ರಿಯೆ, ಕೊಲೆ: ಆರೋಪಿಗೆ ಮರಣದಂಡನೆ
unnatural-sex-on-minor-and-murder-court-sentences-accused-to-death-penalty
author img

By

Published : Nov 18, 2022, 3:35 PM IST

ಬೆಂಗಳೂರು: ಅಪ್ರಾಪ್ತ ಬಾಲಕನೊಬ್ಬನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿ ಕೊಲೆ ಮಾಡಿದ್ದ ಅಪರಾಧಿಗೆ ನಗರದ 1ನೇ ತ್ವರಿತಗತಿಯ ನ್ಯಾಯಾಲಯ ಮರಣ ದಂಡನೆ ಶಿಕ್ಷೆ ವಿಧಿಸಿ ಮಹತ್ವದ ಆದೇಶ ನೀಡಿದೆ.

ಯಶವಂತಪುರದ ತ್ರಿವೇಣಿ ರಸ್ತೆಯಲ್ಲಿರುವ ಕರೀಮಣಿ ಕೊಳಚೆ ಪ್ರದೇಶದ ನಿವಾಸಿ ಮೂರ್ತಿ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಐಪಿಸಿ 302 (ಕೊಲೆ)ಅಡಿ ಅಪರಾಧಕ್ಕೆ ಮರಣ ದಂಡನೆ, 377 (ಅನೈಸರ್ಗಿಕ ಲೈಂಗಿಕ ಕ್ರಿಯೆ) ಗೆ ಜೀವಾವಧಿ ಶಿಕ್ಷೆ ಮತ್ತು 50 ಸಾವಿರ ರೂ ದಂಡ ವಿಧಿಸಿ ನ್ಯಾಯಾಧೀಶರಾದ ಕೆ.ಎನ್. ರೂಪ ಆದೇಶ ನೀಡಿದ್ದಾರೆ. ಜೊತೆಗೆ, ಘಟನೆಯಲ್ಲಿ ಸಾವನ್ನಪ್ಪಿದ ಬಾಲಕನ ನೊಂದ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ನೀಡುವಂತೆ ಬೆಂಗಳೂರು ನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚಿಸಿದ್ದಾರೆ.

ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳ ತಡೆ ಕಾಯಿದೆ ಜಾರಿಗೆ ಬಂದು 10 ವರ್ಷ ಕಳೆಯುತ್ತಿದೆ. ಆದರೂ ಈ ಕೃತ್ಯಗಳು ಕಡಿಮೆಯಾಗಿಲ್ಲ. ದಿನ ಕಳೆದಂತೆ ಹೆಚ್ಚಾಗುತ್ತಿವೆ. ದೇಶದ ಭವಿಷ್ಯವಾಗಿರುವ ಮಕ್ಕಳ ಮೇಲೆ ಕ್ರೂರತನ ತೋರುವ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸದಿದ್ದಲ್ಲಿ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗಲಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಪ್ರಕರಣದಲ್ಲಿ ಆರೋಪಿ ಮೂರ್ತಿ ಮತ್ತು ಮೃತ ಬಾಲಕನ ತಂದೆ ಪರಿಚಿತರಾಗಿದ್ದರು. 2015ರ ಸೆಪ್ಟಂಬರ್ 12 ರ ತುರ್ತು ಕೆಲಸದ ಹಿನ್ನೆಲೆಯಲ್ಲಿ ಮಧ್ಯಾಹ್ನ ಬಾಲಕನನ್ನು ಸ್ವಲ್ಪ ನೋಡಿಕೊಳ್ಳುವಂತೆ ತಿಳಿಸಿದ್ದರು.

ಇದೇ ಸಮಯವನ್ನು ದುರ್ಬಳಕೆ ಮಾಡಿಕೊಂಡಿದ್ದ ಆರೋಪಿ ಮಗುವನ್ನು ಯಶವಂತಪುರದ ಬಳಿಯ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದನು. ಈ ಸಂದರ್ಭದಲ್ಲಿ ಮಗು ಕಿರುಚಿತ್ತು. ಮಗುವಿನ ಕೂಗಾಟದಿಂದ ಜನ ಸೇರುತ್ತಾರೆ ಎಂದು ಬೆದರಿದ ಆತ ಕಲ್ಲಿನಿಂದ ಜಜ್ಜಿ ಬಾಲಕನನ್ನು ನಿರ್ದಯವಾಗಿ ಕೊಲೆ ಮಾಡಿದ್ದ.

ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್​ ಠಾಣಾ ಇನ್‌ಸ್ಪೆಕ್ಟರ್ ಮಹಾನಂದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಪ್ರಾಸಿಕ್ಯೂಷನ್ ಪರ ವಕೀಲರಾದ ಪಿ.ಕೃಷ್ಣವೇಣಿ 8 ಜನ ಸಾಕ್ಷಿಗಳೊಂದಿಗೆ ವಾದ ಮಂಡಿಸಿದ್ದರು. ಈ ವಾದವನ್ನು ಪುರಸ್ಕರಿಸಿದ ನ್ಯಾಯಾಧೀಶರು ದೋಷಿಗೆ ಮರಣದಂಡಣೆ ಶಿಕ್ಷೆ ವಿಧಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಮಲ ತಂದೆಯಿಂದ ಅತ್ಯಾಚಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.