ETV Bharat / state

ಮಾನ್ಯತೆ ಪಡೆಯದ ಪಕ್ಷ ಪ್ರಚಾರಕ್ಕೆ ಖಾಸಗಿ ವಾಹನ, ಧ್ವನಿವರ್ಧಕ ಬಳಸಬಹುದು: ಹೈಕೋರ್ಟ್

ಚುನಾವಣೆ ಪ್ರಚಾರಕ್ಕೆ ಮಾನ್ಯತೆ ಪಡೆಯದ ರಾಜಕೀಯ ಪಕ್ಷ ಖಾಸಗಿ ವಾಹನ ಮತ್ತು ಧ್ವನಿ ವರ್ಧಕ ಬಳಸಿಕೊಳ್ಳಬಹುದು ಎಂದು ಹೈಕೋರ್ಟ್ ಆದೇಶಿಸಿದೆ.

unrecognized-political-parties-can-use-private-vehicles-for-election-campaign-says-high-court
ಮಾನ್ಯತೆ ಪಡೆಯದ ಪಕ್ಷಗಳು ಚುನಾವಣಾ ಪ್ರಚಾರಕ್ಕಾಗಿ ಖಾಸಗಿ ವಾಹನ ಮತ್ತು ಧ್ವನಿವರ್ಧಕ ಬಳಸಬಹುದು: ಹೈಕೋರ್ಟ್
author img

By

Published : Apr 17, 2023, 6:11 PM IST

Updated : Apr 17, 2023, 7:40 PM IST

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮಾನ್ಯತೆ ಪಡೆಯದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾರಾ ಪ್ರಚಾರಕರಿಗೆ ಖಾಸಗಿ ವಾಹನ ಮತ್ತು ಧ್ವನಿವರ್ಧಕ ಬಳಸಿಕೊಳ್ಳಬಹುದು ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ತಿಳಿಸಿದೆ. ಮಾನ್ಯತೆ ಪಡೆದ ಪಕ್ಷವಲ್ಲ ಎಂಬ ಕಾರಣ ನೀಡಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷಕ್ಕೆ ಖಾಸಗಿ ವಾಹನ ಮತ್ತು ಧ್ವನಿ ವರ್ಧಕ ಬಳಕೆ ಮಾಡುವುದಕ್ಕೆ ಗದಗ ಮತ್ತು ಹೊಸಪೇಟೆ ಜಿಲ್ಲೆಯ ಚುನಾವಣಾಧಿಕಾರಿಗಳು (ಜಿಲ್ಲಾಧಿಕಾರಿಗಳ ಕಚೇರಿ) ನಿರಾಕರಿಸಿ ಆದೇಶಿಸಿದ್ದರು.

ಇದನ್ನು ಪ್ರಶ್ನಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಿ.ಎನ್.ದೀಪಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಚುನಾವಣಾ ಅಧಿಕಾರಿಗಳು ಹೊರಡಿಸಿರುವ ಆದೇಶ ಮೇಲ್ನೋಟಕ್ಕೆ ಸಮರ್ಥನಿಯವಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಅರ್ಜಿದಾರರ ಪಕ್ಷಕ್ಕೆ ಖಾಸಗಿ ವಾಹನ ಮತ್ತು ಧ್ವನಿವರ್ಧಕಗಳ ಬಳಕೆಗೆ ಮಧ್ಯಂತರ ಅನುಮತಿ ನೀಡಿ ಆದೇಶಿಸಿದೆ.

ಅರ್ಜಿದಾರರ ಕಚೇರಿ ಸಿಬ್ಬಂದಿಗೆ ವಾಹನ ಮತ್ತು ಧ್ವನಿವರ್ಧಕಗಳನ್ನು ಬಳಕೆ ಮಾಡಲು ಪರವಾನಗಿ ನೀಡುವಂತೆ ಚುನಾವಣಾಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಅಲ್ಲದೆ, ಕೇಂದ್ರ ಚುನಾವಣಾ ಆಯೋಗ ಸೇರಿದಂತೆ ಪ್ರತಿವಾದಿಗಳಿಗೆ ಆಕ್ಷೇಪಣೆ ಸಲ್ಲಿಸಲು ನೋಟಿಸ್ ಜಾರಿ ಮಾಡಿದೆ. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ಜನಪ್ರತಿನಿಧಿಗಳ ಕಾಯಿದೆ 1951ರ ಸೆಕ್ಷನ್ 77 ಮತ್ತು 52ರನ್ನು ಉಲ್ಲೇಖಿಸಿ ಖಾಸಗಿ ವಾಹನ ಮತ್ತು ಧ್ವನಿವರ್ಧಕಗಳ ಬಳಕೆಗೆ ಚುನಾವಣಾಧಿಕಾರಿಗಳು ನಿರ್ಬಂಧ ವಿಧಿಸಿ ಆದೇಶಿದ್ದಾರೆ.

ಆದರೆ, ಸೆಕ್ಷನ್‌ಗಳು ಮಾನ್ಯತೆ ಪಡೆದ ಮತ್ತು ಮಾನ್ಯತೆ ಪಡೆಯದ ಪಕ್ಷಗಳ ವ್ಯತ್ಯಾಸವನ್ನು ವಿವರಿಸುತ್ತದೆ. ಸೆಕ್ಷನ್ 77 ಚುನಾವಣೆಯ ಬಳಿಕ ವೆಚ್ಚಕ್ಕೆ ಸಂಬಂಧಿಸಿದಂತೆ ತಿಳಿಸಲಿದೆ. ಸೆಕ್ಷನ್ 52 ಚುನಾವಣೆಗೂ ಮುನ್ನ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿ ಮೃತಪಟ್ಟರೆ ಯಾವ ಕ್ರಮ ಕೈಗೊಳ್ಳಬೇಕು ಎಂಬುದನ್ನು ವಿವರಿಸುತ್ತದೆ. ಈ ಎರಡೂ ಸೆಕ್ಷನ್‌ಗಳಲ್ಲಿ ಖಾಸಗಿ ವಾಹನ ಮತ್ತು ಧ್ವನಿವರ್ಧಕಗಳ ಬಳಕೆಗೆ ಸಂಬಂಧಿಸಿದಂತೆ ಉಲ್ಲೇಖಿಸಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಚುನಾವಣಾ ನೀತಿ ಸಂಹಿತೆ ಷರತ್ತುಗಳ ನಿಯಮ 20ರಲ್ಲಿ ಸ್ಟಾರ್ ಪ್ರಚಾರಕರು ಮತ್ತು ಚುನಾವಣಾ ಪ್ರಚಾರಕ್ಕೆ ಬಳಕೆ ಮಾಡುವ ವಾಹನಗಳಿಗೆ ಅನುಮತಿ ನೀಡುವುದಾಗಿದೆ. ಹೀಗಾಗಿ ಚುನಾವಣಾಧಿಕಾರಿಗಳ ಹೊರಡಿಸಿರುವ ಆದೇಶವನ್ನು ರದ್ದು ಮಾಡಬೇಕು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಪ್ರಕರಣದ ಹಿನ್ನೆಲೆ: ಚುನಾವಣಾ ಪ್ರಚಾರಕ್ಕಾಗಿ ಖಾಸಗಿ ವಾಹನ ಮತ್ತು ಧ್ವನಿವರ್ಧಕಗಳನ್ನು ಬಳಕೆ ಮಾಡಿಕೊಳ್ಳುವುದಕ್ಕಾಗಿ ಅನುಮತಿ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಗಳು ಗದಗ ಮತ್ತು ವಿಜಯನಗರ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು. ಮನವಿಯನ್ನು ಪರಿಶೀಲಿಸಿದ್ದ ಅಧಿಕಾರಿಗಳು, ರಾಷ್ಟ್ರೀಯ ಸಮಿತಿ ಪಕ್ಷ ಈವರೆಗೂ ಮಾನ್ಯತೆ ಪಡೆದಿಲ್ಲ ಎಂಬ ಕಾರಣ ನೀಡಿ ಅನುಮತಿ ನೀಡುವುದಕ್ಕೆ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಇದನ್ನೂ ಓದಿ: ಕೊಡವರಿಗೆ ಪ್ರತ್ಯೇಕ ಸ್ಥಾನಮಾನ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್​ ನೋಟಿಸ್

ಹೈಕೋರ್ಟ್ ಅನುಮತಿ ನೀಡಿದೆ.

Last Updated : Apr 17, 2023, 7:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.