ETV Bharat / state

ದೇವೆಗೌಡರಿಗೆ ಆಹ್ವಾನಿಸದಿದ್ದಕ್ಕೆ ಜೆಡಿಎಸ್‍ ಆಕ್ರೋಶ: ನಾಡಪ್ರಭು ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲಎಂದು ಗರಂ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಯ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಅಂದು ಆಹ್ವಾನಿಸಿದ್ದ ಬಿಜೆಪಿ ಸರಕಾರ, ಪ್ರತಿಮೆ ಲೋಕಾರ್ಪಣೆಗೆ ಮಾಜಿ ಪ್ರಧಾನಿ ದೇವೆಗೌಡರಿಗೆ ಆಹ್ವಾನ ಮಾಡಲಿಲ್ಲ ಯಾಕೆ? ಎಂದು ಜೆಡಿಎಸ್‍ ಟ್ವೀಟ್ ಮಾಡಿ ಪ್ರಶ್ನಿಸಿದೆ.

JDS party picture
ಜೆಡಿಎಸ್ ಪಕ್ಷದ ಚಿತ್ರ
author img

By

Published : Nov 11, 2022, 5:20 PM IST

ಬೆಂಗಳೂರು : ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಹೆಚ್.ಡಿ.ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಸರಕಾರವು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್‍ ಆಕ್ರೋಶ ವ್ಯಕ್ತಪಡಿಸಿದೆ.

ದೇವೆಗೌಡರನ್ನುಆಹ್ವಾನಿಸದಿದ್ದಕ್ಕೆ ಆಕ್ಷೇಪ:ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಅದೇ ಪ್ರಧಾನಿಗಳಿಗೆ ಆಹ್ವಾನ ಮಾಡಲಿಲ್ಲ, ಯಾಕೆ? ಎಂದು ಜೆಡಿಎಸ್‍ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ.

ಕನ್ನಡಿಗರಿಗೆ ಅಪಮಾನ: ರಾಜ್ಯ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ.

ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಿರುವುದು ಸತ್ಯ ಎಂದು ಕಿಡಿಕಾರಿದೆ.

ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ:ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಟೀಕಿಸಿದೆ.

ಕೆಂಪೇಗೌಡರು ಕೇಂದ್ರದ ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಟ್ವೀಟ್ ಮೂಲಕ ಜೆಡಿಎಸ್‍ ಆಕ್ರೋಶ ವ್ಯಕ್ತಪಡಿಸಿದೆ.

ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುತ್ತೇವೆ: ಸಿಎಂ ಬೊಮ್ಮಾಯಿ ಸಂಕಲ್ಪ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.