ETV Bharat / state

ಯುಪಿ ಪೊಲೀಸರ ನೋಟಿಸ್ ಪ್ರಶ್ನಿಸಿ ಟ್ವಿಟರ್ ಎಂಡಿ ಅರ್ಜಿ: ಜು.13ಕ್ಕೆ ಹೊರಬೀಳಲಿದೆ ಹೈಕೋರ್ಟ್ ಆದೇಶ

ಗಾಜಿಯಾಬಾದ್​ನ ಲೋನಿ ಬಾರ್ಡರ್ ಠಾಣೆ ಪೊಲೀಸರು ನೀಡಿರುವ ನೋಟಿಸ್ ರದ್ದು ಕೋರಿ ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿ ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾ. ಜಿ. ನರೇಂದರ್ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

author img

By

Published : Jul 9, 2021, 5:56 PM IST

ಯುಪಿ ಪೊಲೀಸರ ನೋಟಿಸ್ ಪ್ರಶ್ನಿಸಿ ಟ್ವಿಟರ್ ಎಂಡಿ ಅರ್ಜಿ

ಬೆಂಗಳೂರು: ವಿವಾದಿತ ವಿಡಿಯೋ ಪೋಸ್ಟ್ ಕುರಿತಂತೆ ಟ್ಟಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿ ನೋಟಿಸ್ ಜಾರಿಗೊಳಿಸಿರುವ ಉತ್ತರ ಪ್ರದೇಶ ಪೊಲೀಸರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್, ಜುಲೈ 13ರಂದು ಉಕ್ತಲೇಖನ (ಡಿಕ್ಟೇಷನ್) ನೀಡುವುದಾಗಿ ತಿಳಿಸಿದೆ.

ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಗಾಜಿಯಾಬಾದ್​ನ ಲೋನಿ ಬಾರ್ಡರ್ ಠಾಣೆ ಪೊಲೀಸರು ನೀಡಿರುವ ನೋಟಿಸ್ ರದ್ದು ಕೋರಿ ಟ್ವಿಟರ್ ಎಂಡಿ ಮನೀಶ್ ಮಹೇಶ್ವರಿ ಸಲ್ಲಿಸಿರುವ ಅರ್ಜಿಯನ್ನು ಇಂದು ನ್ಯಾ. ಜಿ. ನರೇಂದರ್ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಯುಪಿ ಪೊಲೀಸರ ಪರ ವಾದ ಮಂಡಿಸಿದ ವಕೀಲ ಪಿ. ಪ್ರಸನ್ನ ಕುಮಾರ್ ಅವರು, ನೋಟಿಸ್ ನೀಡಿರುವ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.

ಇದೇ ವೇಳೆ ಅರ್ಜಿದಾರ ಮನೀಶ್ ಮಹೇಶ್ವರಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿವಿ ನಾಗೇಶ್, ಪೊಲೀಸರು ಆನ್ ಲೈನ್ ಬದಲು ಖುದ್ದು ಠಾಣೆಗೆ ಹಾಜರಾಗಿ ಹೇಳಿಕೆ ನೀಡಬೇಕೆನ್ನುತ್ತಿರುವ ಕ್ರಮಕ್ಕೆ ಆಕ್ಷೇಪಿಸಿದರು. ಸುದೀರ್ಘ ವಾದ- ಪ್ರತಿವಾದ ಆಲಿಸಿದ ಪೀಠ, ಜುಲೈ 13ರಂದು ಆದೇಶದ ಉಕ್ತಲೇಖನ ನೀಡುವುದಾಗಿ ತಿಳಿಸಿ, ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಗಾಜಿಯಾಬಾದ್​ನಲ್ಲಿ ತಾಯಿತ ಮಾರುವ ಮುಸ್ಲಿಂ ವೃದ್ಧನೋರ್ವನಿಗೆ ಆರು ಜನರ ಗುಂಪು ಥಳಿಸಿ ಆತನ ಗಡ್ಡ ಕತ್ತರಿಸಿ, ಬಲವಂತವಾಗಿ ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಎಂದು ಹೇಳಿಸಿದ್ದರೆನ್ನಲಾದ ವಿಡಿಯೋವೊಂದನ್ನು ಟ್ವಿಟ್ಟರ್​ನಲ್ಲಿ ಹಾಕಲಾಗಿತ್ತು. ಈ ಸಂಬಂಧ ಗಾಜಿಯಾಬಾದ್ನ​​ ಲೋನಿ ಬಾರ್ಡರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಗಲಭೆಗೆ ಪ್ರಚೋದಿಸಿದ್ದಾರೆ. ಗುಂಪುಗಳ ನಡುವೆ ದ್ವೇಷ ಉತ್ತೇಜಿಸಿದ್ದಾರೆ, ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶ ಹೊಂದಿದ್ದಾರೆ. ಕಿಡಿಗೇಡಿತನ ಹಾಗೂ ಕ್ರಿಮಿನಲ್ ಪಿತೂರಿ ಮಾಡಿದ್ದಾರೆ ಎಂಬ ಆರೋಪಗಳಡಿಯಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್​ಗಳಾದ 153, 153 ಎ, 295 ಎ, 505, 120 ಬಿ ಮತ್ತು 34 ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.

ಜೊತೆಗೆ ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಮನೀಶ್ ಮಹೇಶ್ವರಿ ಅವರಿಗೆ ಸಿಆರ್ ಪಿಸಿ ಸೆಕ್ಷನ್ 41(ಎ) ಅಡಿ ನೋಟಿಸ್ ಜಾರಿ ಮಾಡಿದ್ದರು. ಇದನ್ನು ಪ್ರಶ್ನಿಸಿ ಮನೀಶ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.