ETV Bharat / state

Upendra: 2ನೇ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಉಪೇಂದ್ರ; ನಾಳೆ ಅರ್ಜಿ ವಿಚಾರಣೆ ಸಾಧ್ಯತೆ - UPENDRA MOVED HIGH COURT

Actor Upendra case: ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಎಫ್​ಐಆರ್ ರದ್ದುಕೋರಿ ನಟ ಉಪೇಂದ್ರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

UPENDRA: ಎರಡನೇ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ನಟ ಉಪೇಂದ್ರ- ನಾಳೆ ಅರ್ಜಿ ವಿಚಾರಣೆ ಸಾಧ್ಯತೆ
UPENDRA MOVED HIGH COURT SEEKING CANCELLATION OF 2 FIR
author img

By

Published : Aug 16, 2023, 7:35 PM IST

ಬೆಂಗಳೂರು: ಜಾತಿ ನಿಂದನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಎಫ್​ಐಆರ್ ರದ್ದು ಕೋರಿ ನಟ ಉಪೇಂದ್ರ ಇಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ನಾಳೆ ವಿಚಾರಣೆಗೆ ಬರುವ ನಿರೀಕ್ಷೆ ಇದೆ.

ಫೇಸ್​ಬುಕ್​ ಲೈವ್​ನಲ್ಲಿ ಮಾತನಾಡುವ ಸಂದರ್ಭದಲ್ಲಿ ಗಾದೆ ಮಾತೊಂದು ಬಳಸಿದ್ದು, ಇದು ಪರಿಶಿಷ್ಟ ಜಾತಿಯ ಒಂದು ಸಮುದಾಯವನ್ನು ಕೆಟ್ಟವರು ಎಂಬುದಾಗಿ ಬಿಂಬಿಸುವಂತೆ ಬಳಸಲಾಗಿದೆ ಎನ್ನುವ ಆರೋಪದಲ್ಲಿ, ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್​ಗೆ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್​ ಚಂದನಗೌಡರ್​ ಅವರಿದ್ದ ನ್ಯಾಯಪೀಠ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಇದರ ಬೆನ್ನಲ್ಲೇ ಎರಡನೇ ಎಫ್ಐಆರ್ ರದ್ದು ಕೋರಿ ಮತ್ತೊಮ್ಮೆ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ. ರಣಧೀರ ಪಡೆಯ ಹರೀಶ್ ಎನ್ನುವವರು ಕೊಟ್ಟ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಇದನ್ನೂ ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಮೊದಲ ಎಫ್ಐಆರ್ ರದ್ದುಗೊಳಿವಂತೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ವಾದ ಮಂಡಿಸಿದ್ದ ಉಪೇಂದ್ರ ಪರ ವಕೀಲರು, ಉಪೇಂದ್ರ ಅವರು ನೀಡಿದ್ದ ಹೇಳಿಕೆಯಲ್ಲಿ ಯಾವುದೇ ಜಾತಿ, ಪಂಗಡಗಳನ್ನು ಅವಮಾನಿಸುವ ಉದ್ದೇಶವಿರಲಿಲ್ಲ. ಸಾಮಾನ್ಯ ಪದವನ್ನಾಗಿ ಬಳಕೆ ಮಾಡಿದ್ದಾರೆ. ಈ ಪದ ಬಳಕೆ ಕೆಲವರಿಗೆ ನೋವುಂಟಾಗಿದೆ ಎಂದು ತಿಳಿಯುತ್ತಿದ್ದಂತೆ ಕ್ಷಮೆ ಕೇಳಿದ್ದರು. ವಿಡಿಯೋ ಡಿಲಿಟ್ ಮಾಡಿದ್ದರು ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಅಲ್ಲದೆ, ಶಿವಮೊಗ್ಗ ಜಿಲ್ಲೆಯಲ್ಲಿ ಹೊಲಗೇರಿ ಎಂಬ ಸ್ಥಳವಿದೆ. ಹೊಲಗೇರಿ ಎಂಬ ರೀತಿಯಲ್ಲಿ ಉಪನಾಮ ಹೊಂದಿರುವವರೂ ಇದ್ದಾರೆ. ಹಾಗಾಗಿ ಹಳೆಯ ಗಾದೆಯನ್ನು ಉಲ್ಲೇಖಿಸಿರುವ ಅಂಶ ಯಾವುದೇ ಜಾತಿಯನ್ನು ನಿಂದನೆ ಮಾಡಿದಂತೆ ಎಂಬ ಅರ್ಥವಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡ (ಎಸ್‌ಸಿ,ಎಸ್‌ಟಿ) ದೌರ್ಜನ್ಯ ತಡೆ ಕಾಯ್ದೆಯಡಿ ಯಾವುದೇ ಅಪರಾಧ ಎಸಗಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು. ಅದೇ ರೀತಿ ಎರಡನೇ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿಯೂ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಇರುವ ಹೊಲಗೇರಿ ಎನ್ನುವ ಊರಿನ ಸರ್ಕಾರಿ ದಾಖಲೆಗಳ ಅಡಕಗಳನ್ನು ಸೇರಿಸಿದ್ದು, ಎಫ್ಐಆರ್ ರದ್ದು ಮಾಡಲು ಮನವಿ ಮಾಡಿದ್ದಾರೆ.

ಮೊದಲ ಎಫ್ಐಆರ್: ಉಪೇಂದ್ರ ವಿರುದ್ಧ ಸಮತಾ ಸೈನಿಕ ದಳದ ಕಾರ್ಯಕರ್ತರು ಸಮಾಜ ಕಲ್ಯಾಣ ಇಲಾಖೆಗೆ ದೂರು ನೀಡಿದ್ದು, ಈ ದೂರಿಗೆ ಸಂಬಂಧಿಸಿದಂತೆ ಇಲಾಖೆಯ ಅಧಿಕಾರಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆಯಡಿ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: Upendra: 'ನನ್ನ ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವಾಯಿತೇ? ಯಾಕೆ ಇಷ್ಟೊಂದು ದ್ವೇಷ?': ಉಪೇಂದ್ರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.