ಬೆಂಗಳೂರು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ ಸಂಬಂಧ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಿಲ್ಲಾಧಿಕಾರಿಯಿಂದ ಕ್ಷಣಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೇನೆ. ಶಾಸಕರಾದ ಬೋಪಯ್ಯ, ಸುನೀಲ್ ಸ್ಥಳಕ್ಕೆ ತೆರಳುತ್ತಿದ್ದು, ರಕ್ಷಣಾ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ ಎಂದಿದ್ದಾರೆ.
ಬ್ರಹ್ಮಗಿರಿ ಬೆಟ್ಟದಲ್ಲಿ ಇರುವುದು ಬೇಡ ಎಂದು ಅರ್ಚಕ ನಾರಾಯಣಾಚಾರ್ ಅವರಿಗೆ ಜಿಲ್ಲಾಧಿಕಾರಿ ಸಲಹೆ ನೀಡಿದ್ದರು. ಇವರ ಜೊತೆ 5 ಜನ ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದರು.
ಈಗಾಗಲೇ ಹೆಚ್ಚುವರಿ ಹಣ ಬಿಡುಗಡೆಗೆ ಸಿಎಂ ಸೂಚಿಸಿದ್ದಾರೆ. ಹಿಂದಿನ ಕಹಿ ಘಟನೆ ಮರುಕಳಿಸದಂತೆ ಜಿಲ್ಲಾಡಳಿತ ಕ್ರಮಕೈಗೊಂಡಿದೆ. ನಾನು ಇಂದು ಕೊಡಗಿಗೆ ತರಳಿಲಿದ್ದೇನೆ ಎಂದಿದ್ದಾರೆ.
ಒಟ್ಟು 8 ಎಕರೆ ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದ್ದು, ಆ ಪ್ರದೇಶದಲ್ಲಿ ಮನೆಗಳು ಇದ್ದವೆಂದು ಹೇಳುವ ಯಾವುದೇ ಕುರುಹುಗಳು ಕಾಣಿಸುತ್ತಿಲ್ಲ. ಬೆಳಗ್ಗೆ 7 ಗಂಟೆಗೆ ತೋಟದ ರೈಟರ್ ಒಬ್ಬರು ಅಲ್ಲಿಗೆ ಹೋದಂತಹ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಚರಣೆ ಮುಂದುವರಿದಿದೆ.