ETV Bharat / state

ತುಂಗಭದ್ರಾ ಡ್ಯಾಂ ಹೂಳು ತೆಗೆಯುವಂತೆ ಕೋರಿ ಮೋದಿಗೆ ಪತ್ರ ಬರೆದ ವಿ.ಎಸ್.ಉಗ್ರಪ್ಪ - tungabhadra dam slush removal

ತುಂಗಭದ್ರಾ ಜಲಾಶಯದ ಹೂಳು ತೆಗೆಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ವಿ.ಎಸ್.ಉಗ್ರಪ್ಪ ಪತ್ರ ಬರೆದು ಮನವಿ ಮಾಡಿದ್ದಾರೆ.

v s ugrappa
ವಿ.ಎಸ್.ಉಗ್ರಪ್ಪ
author img

By

Published : Aug 14, 2023, 10:08 AM IST

Updated : Aug 14, 2023, 10:20 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಮಾಜಿ ಸಂಸದ ವಿ ಎಸ್ ಉಗ್ರಪ್ಪ ತುಂಗಭದ್ರಾ ಜಲಾಶಯದಲ್ಲಿ ತುಂಬಿಕೊಂಡಿರುವ ಹೂಳನ್ನು ತೆಗೆಯುವಂತೆ ಮನವಿ ಮಾಡಿದ್ದಾರೆ. ಡ್ಯಾಂನಲ್ಲಿ ಮಣ್ಣು ತುಂಬಿದ್ದರಿಂದ ನೀರಿನ ಸಂಗ್ರಹ ಕಡಿಮೆ ಆಗುತ್ತಿದೆ. ಕೇಂದ್ರದಿಂದ ರಚನೆ ಆಗಿರುವ ತುಂಗಭದ್ರಾ ಮಂಡಳಿಯ ಸದಸ್ಯರು ಹೂಳು ತೆಗೆಯಲು ಆಸಕ್ತಿ ವಹಿಸುತ್ತಿಲ್ಲ. ಜಲಾಶಯದಲ್ಲಿ ಮಣ್ಣು ತುಂಬಿರುವುದರಿಂದ ಸಂಗ್ರಹ ಸಾಮರ್ಥ್ಯ ಕಡಿಮೆ ಆಗಿ ನೀರು ಸಮುದ್ರದ ಪಾಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಹೆಬ್ಬಾಳ ಸೇತುವೆ, ಕಪ್ಪೆ ಶಂಕರ ದೇಗುಲ ಮುಳುಗಡೆ.. ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗಭದ್ರಾ ನದಿ

ತುಂಗಾಭದ್ರಾ ಮಂಡಳಿಯಲ್ಲಿ ಆಂಧ್ರಪ್ರದೇಶ ಮತ್ತು ತೆಲಂಗಾಣ ಸದಸ್ಯರು ಹೆಚ್ಚಿದ್ದು, ಆ ರಾಜ್ಯಗಳಿಗೆ ಪೂರಕವಾದ ನಿರ್ಧಾರ ತೆಗೆದುಕೊಳ್ಳಲು ಮುಂದಾಗುತ್ತಿದ್ದಾರೆ. ರಾಜ್ಯ ಸರ್ಕಾರ ಕಳೆದ ಬಜೆಟ್ ನಲ್ಲಿ ಹೂಳು ತೆಗೆಯಲು ಹಣ ಮೀಸಲಿಟ್ಟಿದೆ. ಇದು ನ್ಯಾಷನಲ್‌ ಪ್ರಾಜೆಕ್ಟ್ ಆಗಿರುವುದರಿಂದ ಕೇಂದ್ರ ಸರ್ಕಾರ ಅಗತ್ಯ ಸಹಕಾರ ನೀಡಬೇಕು ಎಂದು ಪತ್ರದಲ್ಲಿ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ರಾಜ್ಯಾದ್ಯಂತ ವ್ಯಾಪಕ ಮಳೆ.. ತುಂಗಭದ್ರಾ ಜಲಾಶಯಕ್ಕೆ ಹರಿದು ಬಂದ 18 ಟಿಎಂಸಿ ನೀರು , ರೈತರಿಗೆ ಸಂತಸ

ಇನ್ನು ಹೂಳು ತೆಗೆಯುವುದರಿಂದ ತುಂಗಭದ್ರಾ ಅಚ್ಚುಕಟ್ಟು ಪ್ರದೇಶಕ್ಕೆ ಅನುಕೂಲವಾಗಲಿದೆ. ಕಳೆದ ಒಂಬತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರ ತುಂಗಭದ್ರಾ ಡ್ಯಾಂ ಹೂಳು ಎತ್ತುವ ವಿಚಾರದಲ್ಲಿ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನಡುವೆ, ಇದಕ್ಕೆ ಸಮಾನಾಂತರ ಜಲಾಶಯ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಆದರೆ ಇದಕ್ಕೆ ನೆರೆಯ ರಾಜ್ಯಗಳ ವಿರೋಧ ವ್ಯಕ್ತವಾಗಿದೆ. ಈ ಹಿಂದೆ ಹೂಳು ತೆಗೆಸಬೇಕೆಂದು ಒತ್ತಾಯಿಸಿ ಹೋರಾಟ ಕೂಡಾ ಮಾಡಲಾಗಿದೆ. ಆದರೆ ಹೂಳು ತೆಗೆಯುವುದು ಕಷ್ಟ ಎಂಬ ಮಾತುಗಳು ಸಹ ಇವೆ.

ಇದನ್ನೂ ಓದಿ : Tungabhadra Dam : ತುಂಗಭದ್ರಾ ಡ್ಯಾಂನಿಂದ ಕಾಲುವೆಗಳಿಗೆ ನೀರು ಬಿಡುಗಡೆ

ತುಂಗಭದ್ರಾ ಅಣೆಕಟ್ಟು : ಕೃಷ್ಣಾ ನದಿಯ ಉಪನದಿಯಾದ ತುಂಗಭದ್ರಾ ನದಿಗೆ ಅಡ್ಡಲಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಹೊಸಪೇಟೆ ಬಳಿ ಕರ್ನಾಟಕ ಮತ್ತು ಆಂಧ್ರಪ್ರದೇಶ ಸರ್ಕಾರಗಳು ಜಂಟಿಯಾಗಿ ನಿರ್ಮಿಸಿದ ಡ್ಯಾಂ ಇದಾಗಿದೆ. ಅಷ್ಟೆ ಅಲ್ಲದೇ, ರಾಜ್ಯದ ಅತಿ ದೊಡ್ಡ ಅಣೆಕಟ್ಟೆ ಎಂಬ ಹಿರಿಮೆಗೂ ಸಹ ಪಾತ್ರವಾಗಿದೆ. 2,441 ಮೀಟರ್ ಉದ್ದ ಹಾಗೂ 49.38 ಮೀಟರ್ ಎತ್ತರ ಹೊಂದಿರುವ ತುಂಗಭದ್ರಾ ಡ್ಯಾಂ ಅನ್ನು ನೀರಾವರಿ ಉದ್ದೇಶದಿಂದ ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ : ತುಂಗಭದ್ರಾ ಜಲಾಶಯ ವೀಕ್ಷಣೆಗೆ ಶುಲ್ಕ ನಿಗದಿ.. ಪ್ರವಾಸಿಗರಿಂದ ವಿರೋಧ

33 ಬಹುದೊಡ್ಡ ಗೇಟುಗಳನ್ನು ಹೊಂದಿದ್ದು, ಜಲಾಶಯದಿಂದ ಸಂಗ್ರಹಿಸಲಾದ ನೀರನ್ನು ಕಾಲುವೆಗಳ ಮೂಲಕ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಆಂದ್ರಪ್ರದೇಶದ ಕರ್ನೂಲು ಸೇರಿ ಜಿಲ್ಲೆಗಳಿಗೆ ನೀರುಣಿಸಲಾಗುತ್ತಿದೆ. ಕುಡಿಯುವ ನೀರಿನ ಪೂರೈಕೆ, ವಿದ್ಯುತ್ ಉತ್ಪಾದನೆ ಸೇರಿದಂತೆ ಹೀಗೆ ವಿವಿಧ ಉದ್ದೇಶಗಳಿಗೆ ಈ ನೀರನ್ನು ಬಳಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : ಮಳೆಯಿಂದ ತುಂಗಭದ್ರಾ ಜಲಾಶಯಕ್ಕೆ ಜೀವಕಳೆ.. ವೀಕ್ಷಣೆಗೆ ಹರಿದು ಬರುತ್ತಿದೆ ಪ್ರವಾಸಿಗರ ದಂಡು

Last Updated : Aug 14, 2023, 10:20 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.