ಬೆಂಗಳೂರು: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೂತನ ಸಚಿವ ವಿ.ಸೋಮಣ್ಣ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
17 ಶಾಸಕರನ್ನು ಸಂಪುಟಕ್ಕೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನೂ ಯಾರಿಗೂ ಖಾತೆಗಳ ಹಂಚಿಕೆ ಮಾಡಿಲ್ಲ, ಜಿಲ್ಲಾ ಉಸ್ತುವಾರಿ ಜವಾಬ್ದಾರಿಯನ್ನು ನೀಡಿಲ್ಲ, ಹೈಕಮಾಂಡ್ ಜೊತೆ ಚರ್ಚಿಸಿ ನಂತರವಷ್ಟೇ ಖಾತೆಗಳ ಹಂಚಿಕೆಗೆ ಸಿಎಂ ನಿರ್ಧಾರ ಮಾಡಿದ್ದಾರೆ.
ಆದರೆ ನಾಡಹಬ್ಬ ದಸರಾ ಸಮೀಪಿಸುತ್ತಿರುವ ಕಾರಣ ಸಿದ್ದತಾ ಕಾರ್ಯಗಳನ್ನು ನೋಡಿಕೊಳ್ಳುವ ಸಲುವಾಗಿ ಮೈಸೂರು ಜಿಲ್ಲೆಗೆ ಸೀಮಿತವಾಗಿ ಇಂದು ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿದ್ದು ಅವರ ನೇತೃತ್ವದಲ್ಲಿ ಈ ಬಾರಿಯ ದಸರಾ ಉತ್ಸವ ನಡೆಯಲಿದೆ.