ETV Bharat / state

ರಾಜಕೀಯ ನಿಂತ ನೀರಲ್ಲ, ಗೊಂದಲವನ್ನು ವರಿಷ್ಟರು ಬಗೆಹರಿಸಬೇಕು: ಮಾಜಿ ಸಚಿವ ಸೋಮಣ್ಣ - new year celebration

ನನ್ನ ಈ ಪರಿಸ್ಥಿತಿ ಕಾರಣರಾದವರ ಹತ್ತಿರ ವರಿಷ್ಟರು ಚರ್ಚೆ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ವಿ ಸೋಮಣ್ಣ ಹೇಳಿಕೊಂಡಿದ್ದಾರೆ.

V Somanna
V Somanna
author img

By ETV Bharat Karnataka Team

Published : Dec 31, 2023, 10:47 PM IST

ಬೆಂಗಳೂರು: ರಾಜಕೀಯ ನಿಂತ ನೀರಲ್ಲ, ದೊಡ್ಡವರ ಮಾತು ಕೇಳಿ ನೋವು ಮಾಡಿಕೊಂಡೆ. ನನ್ನ ಈ ಪರಿಸ್ಥಿತಿಗೆ ಕಾರಣರಾದವರ ಹತ್ತಿರ ವರಿಷ್ಟರು ಚರ್ಚೆ ಮಾಡಿ ಸಮಸ್ಯೆಯನ್ನು ಬಗೆಹರಿಸಬೇಕು ಮತ್ತು ಕಾಂಗ್ರೆಸ್ ಪಕ್ಷದಿಂದ ನನಗೆ ಯಾವುದೇ ತೊಂದರೆಯಾಗಿಲ್ಲ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದರು.

ವಿ.ಸೋಮಣ್ಣ ಪ್ರತಿಷ್ಠಾನ ವತಿಯಿಂದ ವಿಜಯನಗರದಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಮತ್ತು ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಸಮಾರಂಭದಲ್ಲಿ ಮಾತಾಡಿದ ಅವರು, ಕಾಂಗ್ರೆಸ್ ಪಕ್ಷದ ನಾಯಕರನ್ನು ಭೇಟಿ ಮಾಡಿಲ್ಲ ಮತ್ತು ನಾನು ಲೋಕಸಭೆಗೆ ಟಿಕೇಟು ಕೇಳಿಲ್ಲ. ಕ್ಷೇತ್ರದಲ್ಲಿ ಬಡವರಿಗೆ, ಸಾಮಾನ್ಯರಿಗೆ ಸ್ಪಂದಿಸಿದ್ದೇನೆ. ನಾನು ಮಾಡಿದ ತಪ್ಪಿಗೆ ಕಾರ್ಯಕರ್ತರು ನೋವು ಆನುಭವಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ರಾಜಕೀಯದಲ್ಲಿ ಅನಾನುಕೂಲತೆ ಆಗುವುದು ಸಹಜ, ನಾವು ಮಾಡಿರುವ ಅಭಿವೃದ್ಧಿ ಕೆಲಸ ಶಾಶ್ವತವಾಗಿ ಜನರ ಮನಸ್ಸಿನಲ್ಲಿ ನಿಂತಿದೆ. ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಶಿವಕುಮಾರ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ 45 ವರ್ಷಗಳಿಂದ ಸಾಮಾಜಿಕ ಜೀವನದಲ್ಲಿ ದುಡಿಯುತ್ತಿದ್ದೇನೆ. ಮುಂದೆ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಭವ್ಯ ಭಾರತ ನಿರ್ಮಾಣವಾಗಲಿದೆ. 140 ಕೋಟಿ ಭಾರತೀಯರನ್ನು ಒಟ್ಟಾಗಿ ತೆಗೆದುಕೊಂಡು ಹೋಗಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ. ರಾಮಜನ್ಮ ಭೂಮಿ ಆಗಬಾರದು ಎಂದು ಹೋರಾಟ ಮಾಡಿದ್ದ ವ್ಯಕ್ತಿಯೇ ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

ಕುವೆಂಪು ಚಿರಸ್ಥಾಯಿ: ಯುಗದ ಕವಿ, ಜಗದ ಕವಿ, ಮನುಜ ಮತ ವಿಶ್ವಪಥ' ಸಂದೇಶ ಸಾರಿದ ಶ್ರೇಷ್ಠ ವಿಶ್ವಮಾನವ ಕುವೆಂಪು ಆಗಿದ್ದಾರೆ. ಸೂರ್ಯ ಚಂದ್ರ ಇರುವರಿಗೂ ಕುವೆಂಪು ಹೆಸರು ಚಿರಸ್ಥಾಯಿಯಾಗಿ ಉಳಿಯಲಿದೆ. ಕುವೆಂಪು ಅವರ ದೂರದೃಷ್ಟಿ ಚಿಂತನೆಯನ್ನು ಇಡೀ ವಿಶ್ವವೇ ಮೆಚ್ಚಿಕೊಂಡಿದೆ ಎಂದು ಹೇಳಿದರು.

V Somanna released the new year calendar
ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಮಾಜಿ ಸಚಿವ ಸೋಮಣ್ಣ

ಹೊಸ ವರ್ಷದ ಶುಭಾಶಯ: ನಾಡಿನ ಜನರಿಗೆ ಹೊಸ ವರ್ಷದ ಶುಭಾಶಯ ಕೋರುತ್ತೇನೆ. ಹಿಂದಿನ ತಪ್ಪು ಮರೆತು, ಜೀವನದಲ್ಲಿ ಹೊಸ ಚಿಂತನೆಯಲ್ಲಿ ಸಾಗೋಣ. ಬದ್ಧತೆ, ನಡುವಳಿಕೆ ಜೀವನದಲ್ಲಿ ಬಹಳ ಮುಖ್ಯ. ಜೀವನದಲ್ಲಿ ಬದ್ಧತೆಯಿಂದ ನಡೆದುಕೊಂಡಾಗ ನೋವು ಆಗುವುದು ಸಹಜ. ಅದರೆ ಅದರ ಮಾರ್ಗ ಬಿಡಬಾರದು ಎಂದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಶಿವನಗೌಡ ನಾಯಕ್, ವಿಧಾನಪರಿಷತ್ ಸದಸ್ಯ ಅ.ದೇವೇಗೌಡ, ವಿ.ಸೋಮಣ್ಣ ಪ್ರತಿಷ್ಠಾನದ ಅಧ್ಯಕ್ಷೆ ಶೈಲಜ ಸೋಮಣ್ಣ ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಹೊಸ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಸೋಮಣ್ಣ ಪ್ರತಿಷ್ಠಾನದ ಕೋಶಾಧ್ಯಕ್ಷ ಡಾ. ನವೀನ್ ಸೋಮಣ್ಣ, ಕನ್ನಡ ಪರ ಹೋರಾಟಗಾರ ಪಾಲನೇತ್ರ, ಮಂಡಲ ಬಿಜೆಪಿ ಅಧ್ಯಕ್ಷ ವಿಶ್ವನಾಥಗೌಡ, ಮಾಜಿ ಮಹಾನಗರ ಪಾಲಿಕೆ ಸದಸ್ಯರುಗಳಾದ ದಾಸೇಗೌಡ ರೂಪಲಿಂಗೇಶ್ವರ್, ಬಿಜೆಪಿ ಪ್ರಮುಖರು, ಕಾರ್ಯಕರ್ತರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: 2023: ಸವಾಲುಗಳ ಮಧ್ಯೆ ಪಂಚ ಗ್ಯಾರಂಟಿ ಜಾರಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.