ETV Bharat / state

ರಾಜ್ಯದ 6 ಶೈಕ್ಷಣಿಕ ವಲಯಗಳಲ್ಲಿ ಲಸಿಕೆ ಪಡೆದ ಕಾಲೇಜು ವಿದ್ಯಾರ್ಥಿಗಳೆಷ್ಟು ಗೊತ್ತಾ? - ಕೊರೊನಾ ಲಸಿಕೆ

ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಬಳಿಕ ಪದವಿ ಕಾಲೇಜುಗಳ ಬಾಗಿಲು ತೆರೆಯಲು ಸರ್ಕಾರ ಯೋಜಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳ ಒಟ್ಟು 4,90,799 ವಿದ್ಯಾರ್ಥಿಗಳ ಪೈಕಿ ಈವರೆಗೆ 3,13,898 ವಿದ್ಯಾರ್ಥಿಗಳು ವ್ಯಾಕ್ಸಿನ್​ ಪಡೆದಿದ್ದಾರೆ.

vaccination for six Educational sectors students
ಲಸಿಕೆ ಪಡೆದ ಕಾಲೇಜು ವಿದ್ಯಾರ್ಥಿ
author img

By

Published : Jul 8, 2021, 6:21 PM IST

ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಆರಂಭಕ್ಕೆ ಉನ್ನತ ಶಿಕ್ಷಣ ಇಲಾಖೆ ಯೋಜನೆ ರೂಪಿಸಿದ್ದು, ಇದಕ್ಕಾಗಿ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತದೆ. ರಾಜ್ಯದ ಆರು ಶೈಕ್ಷಣಿಕ ವಲಯಗಳ ಸರ್ಕಾರಿ ಹಾಗೂ ಅನುದಾನಿತ ಪದವಿ ಕಾಲೇಜುಗಳಲ್ಲಿ 4,90,799 ವಿದ್ಯಾರ್ಥಿಗಳಿದ್ದು, ಈವರೆಗೆ 3,13,898 ವಿದ್ಯಾರ್ಥಿಗಳಿಗೆ ವ್ಯಾಕ್ಸಿನ್‌ ಕೊಡಲಾಗಿದೆ.ಈ ಮೂಲಕ 63.96% ಗುರಿ ತಲುಪಲಾಗಿದೆ.

ಅದೇ ರೀತಿ ಒಟ್ಟು 29,241 ಸಿಬ್ಬಂದಿ ಇದ್ದು, ಈ ಪೈಕಿಗೆ 24,875 ಸಿಬ್ಬಂದಿಗೆ ಲಸಿಕೆ ನೀಡಲಾಗಿದ್ದು, 85.07% ಗುರಿ ಸಾಧಿಸಲಾಗಿದೆ. ವಿದ್ಯಾರ್ಥಿಗಳು, ಸಿಬ್ಬಂದಿ ಸೇರಿ 65.14% ಗುರಿ ತಲುಪಲಾಗಿದೆ.‌

ಈ ಕುರಿತು ಮಾಹಿತಿ ನೀಡಿರುವ ಡಿಸಿಎಂ ಅಶ್ವತ್ಥ ನಾರಾಯಣ, ವಿದ್ಯಾರ್ಥಿಗಳ ಲಸಿಕೀಕರಣಕ್ಕೆ ಇಂದಿನಿಂದ ಮತ್ತಷ್ಟು ಚುರುಕು ನೀಡಲಾಗಿದೆ. ಇನ್ನು ಕೆಲ ದಿನಗಳಲ್ಲೇ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಾಗುವುದು. ಖಾಸಗಿ ಕಾಲೇಜುಗಳಲ್ಲಿ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಾಗಿದೆ ಎಂಬ ಬಗ್ಗೆ ಅಂಕಿ-ಅಂಶ ಪಡೆದು, ಉಳಿದ ಎಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಬೇಕು ಎಂಬುದನ್ನು ತಿಳಿಸಲಾಗುವುದು ಎಂದರು.

ಜಿಲ್ಲಾಧಿಕಾರಿಗಳೊಂದಿಗೆ ಮಾತುಕತೆ:

ಪದವಿ ವಿದ್ಯಾರ್ಥಿಗಳಿಗೆ ಲಸಿಕೀಕರಣವನ್ನು ರಾಜ್ಯಾದ್ಯಂತ ಚುರುಕುಗೊಳಿಸಲು ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್‌ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ ಇಂದು ಎಲ್ಲ ಜಿಲ್ಲಾಧಿಕಾರಿಗಳ ಜತೆ ಮಾತುಕತೆ ನಡೆಸಿದ್ದಾರೆ. ಸರ್ಕಾರ ಈ ಬಗ್ಗೆ ವಿಶೇಷ ಒತ್ತು ನೀಡಿ ಆದ್ಯತಾ ಗುಂಪಿನಡಿಯಲ್ಲಿ ವಿದ್ಯಾರ್ಥಿಗಳು, ಬೋಧಕರು ಮತ್ತು ಬೋಧಕೇತರ ಸಿಬ್ಬಂದಿಗೆ ಲಸಿಕೆ ಕೊಡುತ್ತಿದೆ ಎಂದು ಡಾ.ಅಶ್ವತ್ಥ ನಾರಾಯಣ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.