ETV Bharat / state

362 ಗೆಜೆಟೆಡ್ ಅಧಿಕಾರಿಗಳ ನೇಮಕ ಸಿಂಧುಗೊಳಿಸುವ ಕಾಯ್ದೆ ಜಾರಿ ಮಾಡಿ ಅಧಿಸೂಚನೆ

2011ರ 362 ಗೆಜೆಟೆಡ್ ಅಧಿಕಾರಿಗಳ ನೇಮಕಾತಿ ಸಿಂಧುಗೊಳಿಸುವ ಕಾಯ್ದೆ ಜಾರಿ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.

2011s Gazetted Officers issue, Validation Act implement notification, Karnataka budget session 2022, 2011ರ ಗೆಜೆಟೆಡ್ ಅಧಿಕಾರಿಗಳ ನೇಮಕಾತಿ ವಿವಾದ, ಸಿಂಧುಗೊಳಿಸುವ ಕಾಯ್ದೆ ಜಾರಿ ಅಧಿಸೂಚನೆ, ಕರ್ನಾಟಕ ಬಜೆಟ್​ ಅಧಿವೇಶನ 2022,
ಗೆಜೆಟೆಡ್ ಅಧಿಕಾರಿಗಳ ನೇಮಕಾತಿ
author img

By

Published : Mar 15, 2022, 8:11 AM IST

ಬೆಂಗಳೂರು: 2011ರ 362 ಗೆಜೆಟೆಡ್ ಅಧಿಕಾರಿಗಳ ನೇಮಕವನ್ನು ಊರ್ಜಿತಗೊಳಿಸುವ ಕಾಯ್ದೆ ಜಾರಿಗೊಳಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಜಂಟಿ ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದ ವಿಧೇಯಕ್ಕೆ ರಾಜ್ಯಪಾಲರ ಅಂಕಿತ ಸಿಕ್ಕಿದ್ದು, ಇದೀಗ ಸರ್ಕಾರ ಕಾಯ್ದೆ ಜಾರಿಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಸರ್ಕಾರದ ಅಧಿಸೂಚನೆ ಹೊರಡಿಸುವ ಮೂಲಕ ಕರ್ನಾಟಕ ನಾಗರಿಕ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ) ಕಾಯ್ದೆ 2022ಗೆ ಜಾರಿಗೊಳಿಸಲಾಗಿದೆ. 2011 ನವೆಂಬರ್ 3 ರಂದು ಕರ್ನಾಟಕ ಲೋಕಸೇವಾ ಆಯೋಗ 362 ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿತ್ತು. ಆದರೆ, ಈ ನೇಮಕಾತಿ ಪ್ರಕ್ರಿಯೆಯಲ್ಲಿ ಕೆಲವು ಅಭ್ಯರ್ಥಿಗಳು ಕೆಪಿಎಸ್​ಸಿ ಸದಸ್ಯರಿಗೆ ಲಂಚ ನೀಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಸಿಐಡಿ ತನಿಖೆ ನಡೆಸಿತ್ತು. ಅಲ್ಲಿಂದೀಚೆಗೆ ಈ ಪ್ರಕರಣ ಸುಪ್ರೀಂ ಕೋರ್ಟ್, ಹೈ ಕೋರ್ಟ್​ನಲ್ಲಿ ವಿಚಾರಣೆಗೊಳಗಾಗಿತ್ತು.

ಓದಿ: ಉಭಯ ದೇಶಗಳ ನಡುವೆ ಮಾತುಕತೆ ಮಧ್ಯೆಯೇ ಉಕ್ರೇನ್‌ ಮೇಲೆ ರಷ್ಯಾ ದಾಳಿ.. ನಾಗರಿಕರ ನರಳಾಟ, ನ್ಯಾಟೋ ಕೆರಳಿಸಿದ ರಷ್ಯಾ!

ಕರ್ನಾಟಕ ಲೋಕಸೇವಾ ಆಯೋಗ ಮಾಡಲಾದ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್​​​ಗಳ ಆಯ್ಕೆ ಕಾನೂನಿನ ಅನುಸಾರವಾಗಿ ಸಿಂಧುವಾಗಲಿದೆ. 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್​​​ ನೇಮಕಾತಿ ಪ್ರಕ್ರಿಯೆಯನ್ನು ಹಿಂಪಡೆದು ರಾಜ್ಯ ಸರ್ಕಾರವು 15.10.2013 ಮತ್ತು 14.8.2014ರಂದು ಹೊರಡಿಸಿದ ಎಲ್ಲ ಆದೇಶಗಳು ರದ್ದುಗೊಳ್ಳಲಿದೆ.

ರಾಜ್ಯ ಸರ್ಕಾರ ಕರ್ನಾಟಕ ಲೋಕಸೇವಾ ಆಯೋಗದ ಆಯ್ಕೆ ಪಟ್ಟಿಯನುಸಾರ 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರುಗಳಿಗೆ ನೇಮಕಾತಿ ಆದೇಶಗಳನ್ನು ಹೊರಡಿಸಲು ಕೂಡಲೇ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಅಧಿಸೂಚನೆಯ ಮೂಲಕ ಸರ್ಕಾರ ತಿಳಿಸಿದೆ.

ಇದೀಗ 2011ನೇ ಸಾಲಿನ ಗೆಜೆಟೆಡ್ ಪ್ರೋಬೆಷನರುಗಳ ಜೇಷ್ಠತೆಯು ಈ ಕಾಯ್ದೆಯ ಉಪಬಂಧಗಳಿಗನುಸಾರವಾಗಿ ಸಂಬಂಧಪಟ್ಟ ಹುದ್ದೆಗೆ ಅವರು ವರದಿ ಮಾಡಿಕೊಂಡ ದಿನಾಂಕದಿಂದ ಜಾರಿಗೆ ಬರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.