ETV Bharat / state

ಕಮಲಾ ಹಂಪನಾ, ಓಬಳಪ್ಪ, ಡಾ.ಜಿ ರಂಗಪ್ಪಗೆ ವಾಲ್ಮೀಕಿ ಪ್ರಶಸ್ತಿ - Chief Minister B.S. Yeddyurappa

ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಪ್ರತಿಷ್ಠಿತ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮೂವರು ಗಣ್ಯರ ಹೆಸರನ್ನು ಅಂತಿಮಗೊಳಿಸಲಾಗಿದೆ. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿಧಾನಸೌಧದಲ್ಲಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾದ ಗಣ್ಯರ ಹೆಸರುಗಳನ್ನು ಪ್ರಕಟಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮಾಹಿತಿ ನೀಡಿದರು
author img

By

Published : Oct 11, 2019, 8:03 PM IST

ಬೆಂಗಳೂರು: ಪರಿಶಿಷ್ಟ ಜನಾಂಗದ ಶ್ರೇಯಾಭಿವೃದ್ದಿಗಾಗಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ ಕಮಲಾ ಹಂಪನಾ, ಓಬಳಪ್ಪ ಹಾಗು ಡಾ ಜಿ.ರಂಗಯ್ಯ ಅವರನ್ನು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಪ್ರತಿಷ್ಠಿತ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿಧಾನಸೌಧದಲ್ಲಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾದ ಗಣ್ಯರ ಹೆಸರುಗಳನ್ನು ಪ್ರಕಟಿಸಿದರು.

ವಿಶ್ರಾಂತ ಕುಲಪತಿಗಳು ಹಾಗೂ ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ನಿರಂಜನ್ ಎಸ್. ಆರ್ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಈ ಮೂವರು ಗಣ್ಯರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿ ವರದಿ ನೀಡಿದ್ದು, ಸರ್ಕಾರ ವರದಿ ಅಂಗೀಕರಿಸಿದೆ. ರಾಜ್ಯ ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿಯು ತಲಾ 20 ಗ್ರಾಂ ಚಿನ್ನದ ಪದಕ ಹಾಗು 5 ಲಕ್ಷ ರೂ ನಗದು ಒಳಗೊಂಡಿರುತ್ತದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಮಾಹಿತಿ ನೀಡಿದರು

ಪ್ರಶಸ್ತಿ ವಿಜೇತರ ಹಿನ್ನಲೆ:

ಡಾ. ಕಮಲಾ ಹಂಪನ:

ಕರ್ನಾಟಕದ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದಾರೆ. ನಿರಂತರ ಪರಿಶ್ರಮ, ನಾಡು ನುಡಿಯ ಬಗೆಗಿನ ಅನುಪಮ ಪ್ರೀತಿ ಮತ್ತು ಸಾಹಿತ್ಯಿಕ ಸಾಧನೆಯಿಂದ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಇವರನ್ನು ಅರಸಿ ಬಂದಿದೆ.

ಓಬಳಪ್ಪ:

ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿಯಾಗಿ ಹಾಗು ಹರಿಹರದ ವಾಲ್ಮೀಕಿ ಹಾಸ್ಟೆಲ್ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾಜದ ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ. ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.

ಡಾ. ಜಿ. ರಂಗಯ್ಯ:

ನರರೋಗ ತಜ್ಞರಾಗಿದ್ದು, ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಅಮೆರಿಕಾದ ಇಂಡಿಯನ್ ನ್ಯೂರಾಲಜಿಸ್ಟ್ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಯಾರ್ಕ್‍ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರವಾಗಿ ಸೇವೆ ಸಲ್ಲಿಸಿದ್ದಾರೆ.

Intro: ಕಮಲಾ ಹಂಪನಾ, ಓಬಳಪ್ಪ, ಡಾ.ಜಿ ರಂಗಪ್ಪಗೆ ವಾಲ್ಮೀಕಿ ಪ್ರಶಸ್ತಿ ಪ್ರಕಟ

ಬೆಂಗಳೂರು.

ಪರಿಶಿಷ್ಟ ಜನಾಂಗದ ಶ್ರೋಯೋಭಿವೃದಿಗಾಗಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ ಕಮಲಾ ಹಂಪನಾ, ಓಬಳಪ್ಪ ಹಾಗು ಡಾ ಜಿ.ರಂಗಯ್ಯ ಅವರಿಗೆ ರಾಜ್ಯಸರಕಾರದ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಪ್ರತಿಷ್ಠಿತ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.

ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿಧಾನಸೌಧದಲ್ಲಿಂದು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾದ ಗಣ್ಯರ ಹೆಸರನ್ನು ಪ್ರಕಟಿಸಿದರು.

ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಕಮಲಾ ಹಂಪನಾ, ಸಾಮಾಜಿಕ ಕ್ಷೇತ್ರದಲ್ಲಿ ಗುರುತರವಾಗಿ ಸೇವೆಸಲ್ಲಿಸುತ್ತಿರುವ ಓಬಳಪ್ಪ ಹಾಗು ಶೈಕ್ಷಣಿಕ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಡಾ. ಜಿ. ರಂಗಯ್ಯ ಅವರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ವಿಶ್ರಾಂತ ಕುಲಪತಿಗಳು ಹಾಗು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ನಿರಂಜನ್ ಎಸ್. ಆರ್. ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಈ ಮೂವರು ಗಣ್ಯರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಿ ವರದಿ ನೀಡಿದ್ದು, ಸರ್ಕಾರವು ಈ ವರದಿಯನ್ನು ಅಂಗೀಕರಿಸಿದೆ. ರಾಜ್ಯ ಮಟ್ಟದ ವಾಲ್ಮೀಕಿ ಜಯಂತಿ ಕಾರ್ಯಕ್ರಮವು ಅಕ್ಟೋಬರ್ 13 ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯಲಿದ್ದು, ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ ಎಂದು ಗೋವಿಂದ ಕಾರಜೋಳ ತಿಳಿಸಿದರು.

Body:ಪ್ರತಿ ಪ್ರಶಸ್ತಿಯು ತಲಾ 20 ಗ್ರಾಂ ಚಿನ್ನದ ಪದಕ ಹಾಗು 5 ಲಕ್ಷ ರೂ ನಗದು ಒಳಗೊಂಡಿರುತ್ತದೆ.ಡಾ. ಕಮಲಾ ಹಂಪನ ಅವರು ಕರ್ನಾಟಕದ ಅಗ್ರಗಣ್ಯ ಮಹಿಳಾ ಸಾಹಿತಿಯಾಗಿದ್ದಾರೆ. ನಿರಂತರ ಪರಿಶ್ರಮ, ನಾಡುನುಡಿಯ ಬಗೆಗಿನ ಅನುಪಮ ಪ್ರೀತಿ, ಅವರ ಸಾಹಿತ್ಯಿಕ ಸಾಧನೆಯಿಂದಲೇ ಕನ್ನಡ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಚಾಪು ಮೂಡಿಸಿದ್ದಾರೆ. ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯವರೆಗೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಓಬಳಪ್ಪ ಅವರು ನಿವೃತ್ತ ಕೃಷಿ ಅಧಿಕಾರಿಯಾಗಿದ್ದು, ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿಯಾಗಿ ಹಾಗು ಹರಿಹರದ ವಾಲ್ಮೀಕಿ ಹಾಸ್ಟಲ್ ಸಮಿತಿಯ ಅಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದಾರೆ. ವಾಲ್ಮೀಕಿ ಸಮಾಜದ ಮಕ್ಕಳಿಗೆ ಶಿಕ್ಷಣದ ಮೌಲ್ಯಗಳ ಬಗ್ಗೆ ಅರಿವು ಮೂಡಿಸಿ, ಉಚಿತ ಶಿಕ್ಷಣ ದೊರಕಿಸಿಕೊಡಲು ಅವಿರತವಾಗಿ ಶ್ರಮಿಸುತ್ತಿದ್ದಾರೆ.ಪರಿಶಿಷ್ಟ ವರ್ಗಗಳ ಜನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿದ್ದಾರೆ.

ಡಾ. ಜಿ. ರಂಗಯ್ಯ ಅವರು ನರರೋಗ ತಜ್ಞರಾಗಿದ್ದಾರೆ. ಅವರು ವಿದೇಶದಲ್ಲಿ ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಅಮೇರಿಕ ದೇಶದಲ್ಲಿರುವ ಇಂಡಿಯನ್ ನ್ಯೂರಾಲಜಿಸ್ಟ್ ಸಂಸ್ಥೆಯ ಕಾರ್ಯದರ್ಶಿಯಾಗಿ, ಇಂಡಿಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ, ನ್ಯೂಯಾರ್ಕ್‍ನ ಪ್ರತಿಷ್ಠಿತ ಸ್ಥಳಗಳಲ್ಲಿ ಸ್ಥಾಪಿಸಿರುವ ಮಹಾತ್ಮ ಗಾಂಧಿ ಪ್ರತಿಮೆಯ ಸ್ಥಾಪಕ ಸಮಿತಿ ಸದಸ್ಯರಾಗಿದ್ದಾರೆ. ರಾಷ್ಟದಲ್ಲಿ ಶೈಕ್ಷಣಿಕ ಕ್ಷೇತ್ರಕ್ಕೆ ಅಪಾರವಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಗೋವಿಂದ ಕಾರಜೋಳ ಅವರು ಪ್ರಶಸ್ತಿಗೆ ಆಯ್ಕೆ ಮಾಡಲಾದ ಗಣ್ಯರ ಬಗ್ಗೆ ಮಾಹಿತಿ ನೀಡಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.