ETV Bharat / state

ಜುಲೈ 1ರಿಂದ 7ರವರೆಗೆ ವನಮಹೋತ್ಸವ; 5 ಕೋಟಿ ಸಸಿ ನೆಡಲು ಯೋಜನೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ - ಈಟಿವಿ ಭಾರತ್​ ಕನ್ನಡ ನ್ಯೂಸ್

ವಿಕಾಸಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ನಡೆಸುವುದಕ್ಕೂ ಮುನ್ನ ಸಚಿವ ಈಶ್ವರ ಖಂಡ್ರೆ ವನಮಹೋತ್ಸವ ಬಗ್ಗೆ ಮಾಹಿತಿ ನೀಡಿದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ
ಅರಣ್ಯ ಸಚಿವ ಈಶ್ವರ್ ಖಂಡ್ರೆ
author img

By

Published : Jun 23, 2023, 4:30 PM IST

ಜುಲೈ 1ರಿಂದ 7 ದಿನಗಳ ಕಾಲ ವನಮಹೋತ್ಸವ

ಬೆಂಗಳೂರು : ಪ್ರಸಕ್ತ ವರ್ಷ 5 ಕೋಟಿ ಸಸಿಗಳನ್ನು ರಾಜ್ಯಾದ್ಯಂತ ನೆಟ್ಟು, ಅವು ಮರವಾಗಿ ಬೆಳೆಯುವಂತೆ ಕಾಳಜಿ ವಹಿಸುವುದರ ಜೊತೆಗೆ ಎಷ್ಟು ಸಸಿಗಳು ಉಳಿದಿವೆ ಎಂಬ ಬಗ್ಗೆ ಜಿಯೋಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸುವುದಕ್ಕೂ ಮುನ್ನ ಸುದ್ದಿಗೋಷ್ಠಿಯಲ್ಲಿ ಈಶ್ವರ ಖಂಡ್ರೆ ಮಾಹಿತಿ ನೀಡಿದರು. ಅರಣ್ಯ ವ್ಯಾಪ್ತಿ, ಹಸಿರು ವ್ಯಾಪ್ತಿ ಹೆಚ್ಚಿಸುವುದು ಸರ್ಕಾರದ ಗುರಿ. ಒಟ್ಟಾರೆ ಭೌಗೋಳಿಕ ಪ್ರದೇಶದ ಪೈಕಿ ಅರಣ್ಯ ಹಾಗೂ ಹಸಿರು ವ್ಯಾಪ್ತಿ ಕನಿಷ್ಠ ಶೇ.33ಕ್ಕೆ ಇರಬೇಕು ಎಂಬುದು ಮಾನದಂಡ. ಆದರೆ ಪ್ರಸ್ತುತ ರಾಜ್ಯದಲ್ಲಿ ಈ ವ್ಯಾಪ್ತಿ ಸುಮಾರು 20.19ರಷ್ಟು ಮಾತ್ರವೇ ಇದ್ದು, ಸರ್ಕಾರ ವ್ಯಾಪ್ತಿ ಹೆಚ್ಚಳವನ್ನು ಆದ್ಯ ಕರ್ತವ್ಯ ಎಂದು ಪರಿಗಣಿಸಿದೆ ಎಂದರು.

ನಾವು ಪ್ರಕೃತಿ ಪರಿಸರ ರಕ್ಷಿಸಿದರೆ ಪ್ರಕೃತಿ ನಮ್ಮನ್ನು ರಕ್ಷಿಸುತ್ತದೆ. ಅರಣ್ಯ ಇಲಾಖೆ ಮುಖ್ಯವಾಗಿ ಅರಣ್ಯ ಸಂರಕ್ಷಿಸಬೇಕು. ಆ ಕಾರ್ಯವನ್ನು ಇಲಾಖೆ ಮಾಡುತ್ತದೆ. ಮಕ್ಕಳಲ್ಲಿ ಪರಿಸರ ಕಾಳಜಿ ಮೂಡಿಸಲು ಯೋಜನೆ ರೂಪಿಸಿದ್ದು, ಶಿಕ್ಷಣ ಇಲಾಖೆಯೂ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಸಹಯೋಗದಲ್ಲಿ ಪ್ರಸಕ್ತ ವರ್ಷ 5 ಕೋಟಿ ಸಸಿ ನೆಟ್ಟು, ಪೋಷಿಸುವ ಮೂಲಕ ಯೋಜನೆಯನ್ನು ಯಶಸ್ವಿಗೊಳಿಸಲಾಗುವುದು ಎಂದು ಖಂಡ್ರೆ ಹೇಳಿದರು.

ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಎಷ್ಟು ಮಹತ್ವದ್ದು ಎಂಬುದು ಇಡೀ ಮಾನವ ಕುಲಕ್ಕೆ ಅರಿವಾಯಿತು. ಹೀಗಾಗಿ ನಮಗೆ ಪ್ರಾಣವಾಯು ನೀಡುವ ವೃಕ್ಷಗಳನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಮಾಧ್ಯಮಗಳು ಈ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸಬೇಕು. ಮುಂಬರುವ ಜುಲೈ 1ರಿಂದ 7 ದಿನಗಳ ಕಾಲ ಆಚರಿಸಲಾಗುತ್ತಿರುವ ವನಮಹೋತ್ಸವಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳೂ ಇದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿ ಆಗಿರುತ್ತಾರೆ.

ಜಿಲ್ಲೆಯ ಇತರ ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ರೂಪಿಸಲಾಗಿದೆ. ಹಸಿರು ವ್ಯಾಪ್ತಿ ಹೆಚ್ಚಳ ಕೇವಲ ಅರಣ್ಯ ಇಲಾಖೆ ಒಂದರಿಂದ ಆಗುವ ಕಾರ್ಯವಲ್ಲ. ಇದರಲ್ಲಿ ಇಡೀ ಸಮಾಜ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರೂ ಸಸಿ ನೆಟ್ಟು ಬೆಳೆಸುವುದು ತಮ್ಮ ಕರ್ತವ್ಯ ಎಂದು ತಿಳಿಯಬೇಕು. ಆಬಾಲವೃದ್ಧರಾದಿಯಾಗಿ ಎಲ್ಲರೂ ಕೈಜೋಡಿಸಿದರೆ ಇದು ಜನಾಂದೋಲನವಾಗುತ್ತದೆ ಎಂದು ಎಂದು ಮಾಹಿತಿ ಕೊಟ್ಟರು.

ಇಂದು ಹಸಿರು ವ್ಯಾಪ್ತಿ ಕ್ಷೀಣಿಸುತ್ತಿರುವುದರ ಪರಿಣಾಮವಾಗಿ ಮತ್ತು ಕೈಗಾರಿಕೆಗಳು, ವಾಹನಗಳು ಮತ್ತು ಮನೆಗಳಲ್ಲಿ ಎಲೆಕ್ಟ್ರಿಕ್ ಉಪಕರಣಗಳಿಂದ ಹೊರಹೊಮ್ಮುವ ಶಾಖ, ತ್ಯಾಜ್ಯ, ಹೊಗೆಯಿಂದ ಹಸಿರು ಮನೆ ಅನಿಲ ಪ್ರಮಾಣ ಹೆಚ್ಚಾಗಿ ಓಜೋನ್ ಪದರಕ್ಕೂ ಹಾನಿಯಾಗಿ ಹವಾಮಾನ ವೈಪರೀತ್ಯ ಆಗುತ್ತಿರುವುದು ನಮಗೆಲ್ಲಾ ತಿಳಿದ ವಿಷಯವಾಗಿದೆ. ಕುಡಿಯುವ ನೀರು, ಸೇವಿಸುವ ಗಾಳಿ ಮಲಿನವಾಗುತ್ತಿದೆ. ಈ ಬಗ್ಗೆ ಎಲ್ಲರಲ್ಲೂ ಜಾಗೃತಿ ಮೂಡಬೇಕು. ನಾವೆಲ್ಲರೂ ಸೇರಿ ಪ್ರಕೃತಿ ಪರಿಸರ ಉಳಿಸಬೇಕು. ಹೀಗಾಗಿ ನಮ್ಮ ಅರಣ್ಯ ಇಲಾಖೆ 5 ಕೋಟಿ ಸಸಿ ನೆಡಲೆಂದೇ ತನ್ನ ನರ್ಸರಿಗಳಲ್ಲಿ ವ್ಯಾಪಕ ಶ್ರೇಣಿಯ ಸಸಿ ಬೆಳೆಸಿದೆ. 2.5 ಕೋಟಿಯಷ್ಟು ಸಸಿಗಳನ್ನು ಅರಣ್ಯ ವ್ಯಾಪ್ತಿಯಲ್ಲಿ ಇಲಾಖೆಯ ವತಿಯಿಂದ ನೆಡಲಾಗುತ್ತಿದೆ ಎಂದು ಈಶ್ವರ ಖಂಡ್ರೆ ಜಾಗೃತಿ ಮೂಡಿಸಿದರು.

ತಾವು ಅಧಿಕಾರ ವಹಿಸಿಕೊಳ್ಳುವ ಮೊದಲೇ ರೈತರಿಗೆ ಪೂರೈಕೆ ಮಾಡುತ್ತಿದ್ದ ಸಸಿಗಳ ದರವನ್ನು ಹೆಚ್ಚಳ ಮಾಡಲಾಗಿತ್ತು. ಈ ಬಗ್ಗೆ ಪುನರ್ ಪರಿಶೀಲನೆ ಮಾಡಿ, 5x8 ಗಿಡಗಳಿಗೆ 2 ರೂ., 6 x8 ಗಿಡಗಳಿಗೆ 3 ರೂ. ಮತ್ತು 8 x12 ಗಿಡಗಳಿಗೆ 6 ರೂ. ನಿಗದಿ ಮಾಡಲಾಗಿದೆ. ಮಹಾತ್ಮಾ ಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲೂಗ್ರಾಮೀಣ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಅದೇ ರೀತಿ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸ್ಥಳೀಯ ನಗರ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಈಶ್ವರ್​ ಖಂಡ್ರೆ ವಿವರಿಸಿದರು.

'ಒಣ ಮಹೋತ್ಸವ ಆಗಲು ಬಿಡುವುದಿಲ್ಲ': ಯಾವುದೇ ಕಾರಣಕ್ಕೂ ವನಮಹೋತ್ಸವವನ್ನು ಒಣ ಮಹೋತ್ಸವ ಆಗಲು ಬಿಡುವುದಿಲ್ಲ. ನೆಟ್ಟ ಸಸಿಗಳು ಜೀವಂತ ಉಳಿಯಬೇಕು, ಬೆಳೆಯಬೇಕು. ಇದಕ್ಕಾಗಿ ಜಿಯೋ ಟ್ಯಾಗ್ ಮೂಲಕ ಆಡಿಟ್ ಮಾಡಿಸಲಾಗುವುದು. ಅಗತ್ಯ ಬಿದ್ದರೆ ಮೂರನೆ ವ್ಯಕ್ತಿ ಆಡಿಟ್ ಕೂಡ ಮಾಡಿಸಲಾಗುವುದು. ಈ ಬಾರಿ ನೆಟ್ಟ ಗಿಡಗಳ ಪೈಕಿ ಕನಿಷ್ಠ ಶೇ.80ರಷ್ಟು ಜೀವಂತ ಉಳಿಸಿ ಬೆಳೆಸುವುದು ನಮ್ಮ ಉದ್ದೇಶವಾಗಿದೆ. ಅಕೇಶಿಯಾ ಮತ್ತು ನೀಲಗಿರಿ ಗಿಡಗಳಿಂದಾಗುವ ದುಷ್ಪರಿಣಾಮದ ಬಗ್ಗೆಯೂ ಕ್ರಮ ವಹಿಸುವ ಭರವಸೆ ನೀಡಿದರು.

ಇದನ್ನೂ ಓದಿ : ಶುದ್ದ ಕುಡಿಯುವ ನೀರು ಪೂರೈಕೆಗೆ ಮೊದಲ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.