ETV Bharat / state

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ - IAS officer Vandita Sharma History

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

Vandita Sharma's Takes Charge As 39th Secretary Of Karnataka
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ
author img

By

Published : May 31, 2022, 6:59 PM IST

ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಂದು ಸಂಜೆ ವಿಧಾನಸೌಧದಲ್ಲಿ ಅಧಿಕಾರ ಸ್ವೀಕರಿಸಿದರು. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ. ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.

Vandita Sharma's Takes Charge As 39th Secretary Of Karnataka
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.

ಮಹಿಳೆಯರ ದರ್ಬಾರ್: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017ನೇ ಇಸವಿಯಲ್ಲಿ ಕೆ. ರತ್ನಪ್ರಭ ಅವರೂ ಅಲಂಕರಿಸಿದ್ದರು. ಕೆ. ರತ್ನಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು. ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.

Vandita Sharma's Takes Charge As 39th Secretary Of Karnataka
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ.ಆರ್. ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

ಇದನ್ನೂ ಓದಿ: ಶನೇಶ್ವರ ಸ್ವಾಮಿ ದೇವಸ್ಥಾನಕ್ಕೆ ಜಮೀರ್ ಅಹ್ಮದ್ ಖಾನ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ

ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನ ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ 2022, ನವೆಂಬರ್ 30 ರವರೆಗೆ ಇದೆ. ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೇ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಅಧಿಕ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.