ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಕರೆ ನೀಡಿರುವ ಕರ್ನಾಟಕ ಬಂದ್ಗೆ ಬೆಂಬಲ ನೀಡಿರುವ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು.
ಕೆಂಪೇಗೌಡ ಬಸ್ ನಿಲ್ದಾಣಕ್ಕೆ ತಲೆಗೆ ಪೇಟಾ ಹಾಕಿ ಮಹಾರಾಜನ ವೇಷಧಾರಿಯಾಗಿ ಎಂಟ್ರಿ ಕೊಟ್ಟ ವಾಟಾಳ್, ಕತ್ತೆಯ ಮೇಲೆ ಸವಾರಿ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಜೊತೆಗೆ ವಾದ್ಯಗೋಷ್ಟಿಯೊಂದಿಗೆ ಮೆಜೆಸ್ಟಿಕ್ ಸುತ್ತ ಮೆರವಣಿಗೆ ಮಾಡಿದರು.
ಈ ಹೋರಾಟದಲ್ಲಿ ಕನ್ನಡ ಒಕ್ಕೂಟದ ಮುಖಂಡರುಗಳಾದ ಸಾ ರಾ ಗೋವಿಂದು, ಕೆ ಆರ್ ಕುಮಾರ್, ಗಿರೀಶ್ ಗೌಡ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.