ಬೆಂಗಳೂರು: ಸರಿಯಾದ ಸಮಯಕ್ಕೆ ಚುನಾವಣೆ ನಡೆಸದೆ, ಬಿಬಿಎಂಪಿಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿರುವುದನ್ನು ವಿರೋಧಿಸಿ, ಕನ್ನಡ ಚಳುವಳಿ ಹೋರಾಟಗಾರ ವಾಟಾಳ್ ನಾಗರಾಜ್ ಮತ್ತು ಅವರ ಬೆಂಬಲಿಗರು ಬಿಬಿಎಂಪಿ ಕೇಂದ್ರ ಕಚೇರಿ ಮುಂದೆ ಮಲಗಿ ಪ್ರತಿಭಟನೆ ನಡೆಸಿದರು.
ಆಡಳಿತಾಧಿಕಾರಿ ನೇಮಕ ಪ್ರಜಾಪ್ರಭುತ್ವ ವಿರೋಧಿ ನಡೆ. ಯಾವುದೇ ಕಾರಣಕ್ಕೂ ಆಡಳಿತಾಧಿಕಾರಿ ನೇಮಕ ಮಾಡಬಾರದು. ಇದರಿಂದ ಪಾಲಿಕೆಯಲ್ಲಿ ದುರಾಡಳಿತ ಆರಂಭವಾಗುತ್ತದೆ ಎಂದು ಆರೋಪಿಸಿದರು.
ಪಾಲಿಕೆ ಚುನಾವಣೆ ಬಗ್ಗೆ ಇನ್ನೂ ಸ್ಪಷ್ಟನೆ ಕೊಟ್ಟಿಲ್ಲ. ಆಡಳಿತಾಧಿಕಾರಿಯ ನೇಮಕವಾದರೆ, ಬಿಬಿಎಂಪಿ ಸರ್ಕಾರದ ಕೈಗೊಂಬೆಯಾಗಲಿದೆ ಎಂದು ಅವರು ದೂರಿದರು.