ಬೆಂಗಳೂರು: ಕನ್ನಡ ಭಾಷೆ, ನೆಲ,ಜಲದ ಹಕ್ಕುಗಳಿಗಾಗಿ ವಿಭಿನ್ನ ಹೋರಾಟಗಳನ್ನು ಮಾಡುವ ವಾಟಾಳ್ ನಾಗರಾಜ್ ಇಂದು ಸಹ ಕುಡಿಯುವ ನೀರಿಗಾಗಿ ಆಗ್ರಹಿಸಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟಿಸಿದರು.
ಪ್ರತಿಭಟನೆ ವೇಳೆ ಮಾತನಾಡಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಹೀಗಿದ್ದರೂ ಮಹಾರಾಷ್ಟ್ರ ಸರ್ಕಾರ ಕುಡಿಯುವ ನೀರು ಬಿಡದೆ ಮಲತಾಯಿ ಧೋರಣೆ ಮಾಡುತ್ತಿದೆ. ಪರಿಣಾಮ ಕರ್ನಾಟಕದಲ್ಲಿ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಹಾಗಾಗಿ ಕೂಡಲೇ ನೀರು ಬಿಡಬೇಕೆಂದು ಆಗ್ರಹಿಸಿದರು.
ರಾಜಭವನದ ಮುಂಭಾಗದ ರಸ್ತೆಯಲ್ಲಿ ನಿಂತು ಪ್ರತಿಭಟನೆ ಮಾಡುವ ಮೂಲಕ ರಾಜ್ಯಪಾಲರಿಗೆ ಮನವಿ ಮಾಡಿಕೊಂಡರು.
ಪ್ರತಿಭಟನೆ ವೇಳೆ ಮುನ್ನೆಚ್ಚರಿಕಾ ಕ್ರಮಾವಾಗಿ ವಾಟಾಳ್ ನಾಗರಾಜ್ ಅವರನ್ನು ವಶಕ್ಕೆ ಪಡೆದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.