ETV Bharat / state

ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಸಿಗಬೇಕು: ಸಚಿವ ನಿರಾಣಿ

ಸಮಸ್ತ ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಸಿಗಬೇಕು ಎಂದು ಸಚಿವ ನಿರಾಣಿ ಹೇಳಿದರು.

Veerashaiva Lingayats should get 2A reservation, Veerashaiva Lingayats should get 2A reservation news, Minister Murgesh Nirani, Minister Murgesh Nirani nsews, ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಸಿಗಬೇಕು, ವೀರಶೈವ ಲಿಂಗಾಯತರಿಗೆ 2ಎ ಮೀಸಲಾತಿ ಸಿಗಬೇಕು ಸುದ್ದಿ, ಸಚಿವ ಮುರುಗೇಶ್​ ನಿರಾಣಿ, ಸಚಿವ ಮುರುಗೇಶ್​ ನಿರಾಣಿ ಸುದ್ದಿ,
ಸಚಿವ ನಿರಾಣಿ
author img

By

Published : Feb 28, 2021, 4:08 AM IST

ಬೆಂಗಳೂರು: ವೀರಶೈವ ಲಿಂಗಾಯಿತ ಸಮುದಾಯದಲ್ಲಿ ಅನೇಕ ಉಪಸಮುದಾಯಗಳಿದ್ದು, ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದರೆ ಸಮಸ್ತ ವೀರಶೈವ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಸಚಿವ ಮುರುಗೇಶ್ ನಿರಾಣಿ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವೀರಶೈವ ಲಿಂಗಾಯತರಲ್ಲಿ ಕುಂಬಾರರು, ಹಡಪದರು ಸೇರಿ ಇನ್ನೂ ಅನೇಕ ಸಮುದಾಯಗಳು ಇವೆ. ಇಡೀ ವೀರಶೈವ ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕು‌. ನಮ್ಮ ಮುಖ್ಯಮಂತ್ರಿಗಳು ನಮ್ಮ ಸಮುದಾಯದ ಬಗ್ಗೆ ಅಪಾರವಾದ ಕಾಳಜಿ ಇಟ್ಟುಕೊಂಡಿದ್ದಾರೆ. ಖಂಡಿತವಾಗಿಯೂ ಅವರಿಂದ ನ್ಯಾಯ ಸಿಕ್ಕೇಸಿಗುತ್ತದೆ ಎಂದು ವಿಶ್ವಾಸ ‌ವ್ಯಕ್ತಪಡಿಸಿದ್ದಾರೆ.

ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಆಯೋಗವು ಸ್ವಾಯತ್ತ ಸಂಸ್ಥೆಯಾಗಿದ್ದು, ಸಾಕಷ್ಟು ಅಧ್ಯಯನ ನಡೆಸಿ ವರದಿ ನೀಡುತ್ತದೆ. ನಂತರವೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.