ಬೆಂಗಳೂರು: ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ವಾಹನ ತೆರಿಗೆ ಪಾವತಿ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಣೆ ಮಾಡಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಎಲ್ಲಾ ಸರಕು ಸಾಗಾಣಿಕೆ ಮತ್ತು ಸಾರಿಗೆ ಪ್ರಯಾಣಿಕರ ವಾಹನ ಮಾಲೀಕರ ಅನುಕೂಲಕ್ಕಾಗಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ಕಲಂ 4 (1) ನಿಯಮಗಳನ್ನು ಸಡಿಲಗೊಳಿಸಿ ಕರ್ನಾಟಕ ರಾಜ್ಯದ ಎಲ್ಲಾ ನೋಂದಾಯಿತ ಸಾರಿಗೆ ವಾಹನಗಳಿಗೆ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಜೂನ್ 15 ರೊಳಗಾಗಿ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯನ್ನು ದಂಡರಹಿತವಾಗಿ ಪಾವತಿಸಲು ಜೂನ್ 30 ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.
ಇದನ್ನೂ ಓದಿ:ಕೊರೊನಾ ದುಃಖ ಸಾಗರದಲ್ಲಿ ಜಾಗತಿಕ ಆರ್ಥಿಕತೆ: ಆಗಸದ ಎತ್ತರಕ್ಕೆ ಜಿಗಿದ ಚೀನಾ GDP... ಭಾರತದ್ದು?
ಸರ್ಕಾರ ಕೈಗೊಂಡಿರುವ ಈ ಕ್ರಮದ ಪ್ರಯೋಜನವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ಅವರು ಮನವಿ ಮಾಡಿದ್ದಾರೆ.
ಇದನ್ನೂ ಓದಿ:ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲು ನಿರ್ಧಾರ: ಹೇಗೆ ನಡೆಯಲಿದೆ ಆನ್ಲೈನ್ ಎಕ್ಸಾಮ್?