ETV Bharat / state

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ರಿಂದ ಮತದಾರರ ಪಟ್ಟಿ ಪರಿಶೀಲನೆ.. ಬಿಎಲ್​ಒ ಗಳಿಗೆ ಎಚ್ಚರಿಕೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಮತದಾರ ಪಟ್ಟಿಗೆ ಸಂಬಂಧಿಸಿದಂತೆ ಸೇರ್ಪಡೆ ರದ್ದತಿ ಮತ್ತು ಮಾರ್ಪಾಡು ಮಾಡಲಾದ ಮತದಾರರ ಪಟ್ಟಿಯ ಮನೆ ಮನೆ ಪರಿಶೀಲನಾ ಕಾರ್ಯ ನಡೆಯಿತು.

verification-of-voter-list-by-bbmp-chief-commissioner-tushar-girinath-dot-dot-dot-warning-to-blos
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ರಿಂದ ಮತದಾರರ ಪಟ್ಟಿ ಪರಿಶೀಲನೆ...ಬಿ.ಎಲ್​.ಒ ಗಳಿಗೆ ಎಚ್ಚರಿಕೆ
author img

By

Published : Dec 19, 2022, 10:36 PM IST

ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತದಾರ ಪಟ್ಟಿ ಸೇರ್ಪಡೆ ರದ್ದತಿ ಸಂಬಂಧಿಸಿದಂತೆ ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಂಬಂಧಪಟ್ಟ ಅಧಿಕಾರಿಗಳ ಜೊತೆ ರಾಜಾಜಿನಗರ ಹಾಗೂ ಯಶವಂತಪುರ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ನೀಡಿ ನಮೂನೆಗಳ ಪರಿಶೀಲನೆ ನಡೆಸಿದರು.

ರಾಜಾಜಿನಗರ ವ್ಯಾಪ್ತಿಯಲ್ಲಿ 7 ಮನೆಗಳಿಗೆ ಭೇಟಿ ನೀಡಿ ಸೇರ್ಪಡೆ, ರದ್ದತಿ ಹಾಗೂ ಮಾರ್ಪಾಡು ಮಾಡಿರುವ ನಮೂನೆಗಳನ್ನು ಪರಿಶೀಲಿಸಿ ಬಿ.ಎಲ್.ಒ ಗಳು ಎಲ್ಲಾ ಸರಿಯಾದ ಕ್ರಮದಲ್ಲಿ ಮಾಡಿರುವುದನ್ನು ಗಮನಿಸಿ ನಮೂನೆಯಲ್ಲಿ ದೃಢೀಕರಿಸಿ ನಮೂನೆ ಸಲ್ಲಿಸಿರುವವರಿಂದ ಸಹಿ ಪಡೆದುಕೊಳ್ಳಲಾಯಿತು.

ಮೊದಲಿಗೆ ರಾಜಾಜಿನಗರ ವಾರಿಯರ್ ಬೇಕರಿ ಬಳಿಯ ಮನೆಗೆ ಭೇಟಿ ನೀಡಿ ನಮೂನೆಯನ್ನು ಪರಿಶೀಲಿಸಿ, ನಮೂನೆಯ ಪ್ರತಿಯಲ್ಲಿ ಎಲ್ಲವೂ ಸರಿಯಾಗಿರುವುದನ್ನು ಗಮನಿಸಿ ಮುಖ್ಯ ಆಯುಕ್ತರು ನಮೂನೆಯನ್ನು ದೃಢೀಕರಿಸಿ ಸಹಿ ಪಡೆದುಕೊಳ್ಳಲಾಯಿತು.

ಉಳಿದಂತೆ ರಾಜಾಜಿನಗರ ಹಾಗೂ ಶಿವನಹಳ್ಳಿ ವ್ಯಾಪ್ತಿಯಲ್ಲಿ 5 ಮನೆಗಳಿಗೆ ಭೇಟಿ ನೀಡಿ ನಮೂನೆಗಳನ್ನು ಪರಿಶೀಲಿಸಿ, ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸರಿಯಾದ ರೀತಿಯಲ್ಲಿ ಮಾಡಬೇಕು ಹಾಗೂ ಸೇರ್ಪಡೆ, ರದ್ದತಿ ಹಾಗೂ ಮಾರ್ಪಾಡುಗಳಲ್ಲಿ ಯಾವುದೇ ಲೋಪಗಳಿಲ್ಲದಂತೆ ಪರಿಶೀಲಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪರಿಶೀಲನೆಯ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಯುತ್ತಿದೆ. ಮತದಾರರಿಗೆ ಮಾಹಿತಿ ನೀಡಲಾಗುತ್ತಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಖುದ್ದಾಗಿ 10 ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸುವ ಹಾಗೂ ಕಛೇರಿಯಲ್ಲಿ 52 ನಮೂನೆಗಳನ್ನು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಪಾದಚಾರಿ ಮಾರ್ಗ ಒತ್ತುವರಿ ತೆರವುಗೊಳಿಸಲು ಸೂಚನೆ: ರಾಜಾಜಿನಗರ ವಾರಿಯರ್ ಬೇಕರಿ ಬಳಿ ಬ್ರಿಡ್ಜ್ ಸ್ಟೋನ್ ಎಂಬ ಟಯರ್ ಮಾರಾಟ ಮಳಿಗೆಯಿಂದ ಪಾದಚಾರಿ ಮಾರ್ಗ ಒತ್ತುವರಿಯಾಗಿರುವುದನ್ನು ಗಮನಿಸಿ ಕೂಡಲೆ ಅದನ್ನು ತೆರವುಗೊಳಿಸಲು ಮಾಲೀಕರಿಗೆ ಸೂಚನೆ ನೀಡಿದರು. ಶಿವನಗರ ರಸ್ತೆ ಬದಿಯ ಪಾದಚಾರಿ ಮಾರ್ಗ ಒತ್ತುವರಿಯನ್ನು ಗಮಿಸಿ ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.

53ನೇ ಬಿ ಅಡ್ಡರಸ್ತೆ, 3ನೇ ಬ್ಲಾಕ್ ರಸ್ತೆಯಲ್ಲಿ ಕಟ್ಟಡ ನಿರ್ಮಾಣದ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಪಾದಚಾರಿ ಮಾರ್ಗದಲ್ಲಿ ಹಾಕಿದ್ದು, ಅದನ್ನು ಕೂಡಲೆ ತೆರವುಗೊಳಿಸಿ ಸಂಬಂಧಪಟ್ಟ ಕಟ್ಟಡ ಮಾಲೀಕರಿಗೆ ದಂಡ ವಿಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಗಡಿ ಮುಖ್ಯ ರಸ್ತೆ ಬಳಿ ಪಾದಚಾರಿ ಮಾರ್ಗದಲ್ಲಿ ಒತ್ತುವರಿಯಾಗಿರುವುದನ್ನು ಕಂಡು ಅದನ್ನು ಕೂಡಲೇ ತೆರವುಗೊಳಿಸಲು ಹೇಳಿದರು. ಮಾಗಡಿ ಮುಖ್ಯ ರಸ್ತೆ ಹೇರೋಹಳ್ಳಿಯ ಬಳಿ ರಸ್ತೆ ದುರಸ್ತಿಯಲ್ಲಿದ್ದು, ಅದನ್ನು ಸರಿಪಡಿಸಲು ತಿಳಿಸಿದರು.

ಈ ವೇಳೆ ಪಶ್ಚಿಮ ವಲಯ ಜಂಟಿ ಆಯುಕ್ತ ಯೋಗೇಶ್, ರಾಜರಾಜೇಶ್ವರಿ ನಗರ ವಲಯ ಜಂಟಿ ಆಯುಕ್ತರಾದ ನಾಗರಾಜ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ಉಮೇಶ್ ಹಾಗೂ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.‘

ಇದನ್ನೂ ಓದಿ: ರೈತರ ಸಮಸ್ಯೆ ಬಗ್ಗೆ ಮುಖಂಡರ ಜೊತೆ ಸಿಎಂ ಚರ್ಚೆ : ಸಚಿವ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.