ETV Bharat / state

ತುರ್ತು ಚಿಕಿತ್ಸೆಗಾಗಿ ರೈತರ ಮನೆ ಬಾಗಿಲಿಗೆ ಪಶು ಆಸ್ಪತ್ರೆ: ಸಚಿವ ಪ್ರಭು ಚವ್ಹಾಣ್ - Veterinary Hospital at Farmers Home

ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಚಿಕಿತ್ಸಾ ವಾಹನ ಸೇವೆಯನ್ನು ಜಾರಿಗೆ ತರಲಾಗುತ್ತಿದ್ದು, ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಪಶು ಚಿಕಿತ್ಸಾ ವಾಹನ ಸೇವೆ
ಪಶು ಚಿಕಿತ್ಸಾ ವಾಹನ ಸೇವೆ
author img

By

Published : Jun 18, 2020, 11:30 PM IST

ಬೆಂಗಳೂರು: ಪಶು ತುರ್ತು ಚಿಕಿತ್ಸೆಯನ್ನು ರೈತರ, ಪಶುಪಾಲಕರ ಮನೆ ಬಾಗಿಲಿಗೆ ಕೊಂಡೊಯ್ಯುವ ಯೋಜನೆಯನ್ನು ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೆ ತರಲು ಪಶುಸಂಗೋಪನಾ ಇಲಾಖೆ ಮುಂದಾಗಿದೆ. ಸದ್ಯದ್ರಲ್ಲೇ ಸಿಎಂ ಯಡಿಯೂರಪ್ಪ ಸುಸಜ್ಜಿತ ಪಶು ಚಿಕಿತ್ಸಾ ವಾಹನ ಸೇವೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಈ ಸಂಬಂಧ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಜಾನುವಾರುಗಳು ರೈತನ ಬೆನ್ನೆಲುಬು. ಅವುಗಳ ಆರೈಕೆ ಹಾಗೂ ಆರೋಗ್ಯ ಕಾಪಾಡುವುದು ರೈತನ ಮುಂದಿರುವ ಬಹುದೊಡ್ಡ ಸವಾಲಾಗಿದೆ. ಇದನ್ನು ನೀಗಿಸಲು ಹಾಗೂ ರೈತರ ಶ್ರಮಕ್ಕೆ ಮತ್ತಷ್ಟು ಬಲ ತುಂಬಲು ಸುಸಜ್ಜಿತವಾದ ಪಶು ಚಿಕಿತ್ಸಾ ವಾಹನ (ಆ್ಯಂಬುಲೆನ್ಸ್) ಲೋಕಾರ್ಪಣೆ ಮಾಡಲು ಪಶುಸಂಗೋಪನಾ ಇಲಾಖೆ ಸಜ್ಜಾಗಿದೆ. ರಾಜ್ಯದಲ್ಲಿ ಪಶುವೈದ್ಯರ ಕೊರತೆಯಿದ್ದು, ಅದೆಷ್ಟೋ ಬಾರಿ ಸಕಾಲದಲ್ಲಿ ವೈದ್ಯರು ನಿಗದಿತ ಸ್ಥಳಗಳಿಗೆ ತೆರಳಿ ಚಿಕಿತ್ಸೆ ನೀಡಲು ಹೆಚ್ಚಿನ ಶ್ರಮ ಹಾಗೂ ವೆಚ್ಚ ಭರಿಸಬೇಕಾಗುತ್ತದೆ. ಈ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಈ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು.

ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಇದನ್ನು ಜಾರಿಗೆ ತರಲಾಗುತ್ತಿದ್ದು, ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಹೆಲ್ಪ್​ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 X 7 ಜಾನುವಾರುಗಳ ರಕ್ಷಣೆಗೆ ಉದ್ದೇಶಿಸಲಾಗಿರುತ್ತದೆ.

ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸಬೇಕಾದ ಅನಿವಾರ್ಯತೆ ಇರುತ್ತದೆ. ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದು, ಅಪಘಾತ, ಮೂಳೆಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗಗಳು ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಗಳಿಗೆ ಜಾನುವರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯುವ ಸಮಸ್ಯೆಗಳಿಗೆ ಇದರಿಂದ ಪರಿಹಾರ ದೊರಕಲಿದೆ.

ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರ ಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆಯನ್ನು ನೀಡಲಿದ್ದಾರೆ. ಸುಮಾರು 15 ಸುಸಜ್ಜಿತ ಸಂಚಾರಿ ಪಶು ಚಿಕಿತ್ಸಾ ವಾಹನ (ಆ್ಯಂಬುಲೆನ್ಸ್​​) ಗಳನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುತ್ತದೆ.

ಪಶು ಆ್ಯಂಬುಲೆನ್ಸ್​​ನ ವಿಶೇಷತೆಗಳು:

  • ಅತ್ಯಾಧ್ಯುನಿಕ, ಸುಸಜ್ಜಿತವಾದ ಈ ವಾಹನದಲ್ಲಿ ವಿಶೇಷವಾದ ಪಶು ಸೇವಾ ಸೌಲಭ್ಯಗಳಿವೆ
  • ಶತ್ತ್ರ ಚಿಕಿತ್ಸಾ ಘಟಕ, ಪ್ರಯೋಗ ಶಾಲೆ, ಸ್ಕ್ಯಾನಿಂಗ್ ಇರಲಿದೆ
  • ತುರ್ತು ಚಿಕಿತ್ಸಾ ಘಟಕ
  • ಔಷಧಿ ಹಾಗೂ ಚಿಕಿತ್ಸಾ ಸಲಕರಣೆಗಳು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.