ಬೆಂಗಳೂರು : ಜ.28ರಿಂದ ಫೆ.5ರವರೆಗೆ ವಿಧಾನಮಂಡಲ ಅಧಿವೇಶನ ನಡೆಯುವ ಹಿನ್ನೆಲೆ ಜನವರಿ 28ರಿಂದ ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಓದಿ: ಇಂದಲ್ಲ ನಾಳೆ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ: ಮಹಾ ಸಿಎಂ
ಪ್ರತಿದಿನ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಅಧಿವೇಶನದ ವೇಳೆ ಪ್ರತಿಭಟನೆಗಳು, ಸತ್ಯಾಗ್ರಹಗಳು ಅಥವಾ ಅಹಿತಕರ ಘಟನೆಗಳು ಸಂಭವಿಸುವ ಹಿನ್ನೆಲೆ ಮತ್ತು ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ನಿಷೇಧಾಜ್ಞೆ ಹೊರಡಿಸಲಾಗಿದೆ. ನಿಷೇಧಾಜ್ಞೆ ಜಾರಿಗೊಳಿಸುವಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.