ETV Bharat / state

ನಿಮ್ಮ ಕುಟುಂಬದ ಹಿತರಕ್ಷಣೆಗೆ ಸರ್ಕಾರ ಬದ್ಧ.. ಅನಿವಾಸಿ ಭಾರತೀಯರಿಗೆ ಡಿಸಿಎಂ ಕಾರಜೋಳ ಅಭಯ.. - Video conversation by DC M Govinda M. Karajola

ಇಂಗ್ಲೆಂಡ್‌ನ ಗೋಪಾಲ್ ಕುಲಕರ್ಣಿ, ಇಟಲಿಯ ಹೇಮೇಗೌಡ, ಮಧು, ಯುಕೆಯ ಬಸವ ಪಾಟೀಲ್, ಯುಎಇಯ ಚಂದ್ರು ಅಂಗದಲ್ಲಿ, ಸೌದಿ ಅರೇಬಿಯದ ರವಿ ಮಹಾದೇವ ಅವರು ಈ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದರು.

Video conversation by DC M Govinda M. Karajola
ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ವಿಡಿಯೋ ಸಂವಾದ
author img

By

Published : Jun 20, 2020, 9:55 PM IST

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿರುವ ನಿಮ್ಮ ಪೋಷಕರು, ಬಂಧು-ಬಾಂಧವರ ಆರೋಗ್ಯ ಹಾಗೂ ಹಿತರಕ್ಷಣೆಯನ್ನು ರಾಜ್ಯ ಸರ್ಕಾರ ಕಾಪಾಡುತ್ತಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಹೊರದೇಶದ ಕನ್ನಡಿಗರಿಗೆ ಅಭಯ ನೀಡಿದ್ದಾರೆ.

ಹೊರದೇಶದ ಕನ್ನಡಿಗರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು, ವಿವಿಧ ದೇಶಗಳಲ್ಲಿರುವ ಉತ್ತರಕರ್ನಾಟಕದ ಅನೇಕ ಸಾಗರೋತ್ತರ ಕನ್ನಡಿಗರೊಂದಿಗೆ ಈ ಸಂವಾದದಲ್ಲಿ ಮಾತನಾಡಿ ಸಂತಸವಾಯಿತು. ಸಾಗರೋತ್ತರ ಕನ್ನಡಿಗರು ಕನ್ನಡಿಗರ ಏಳಿಗೆಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ. ಅನೇಕ ಸಲಹೆಗಳನ್ನು ನೀಡಿದ್ದಾರೆ. ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರವು ತಮ್ಮೊಂದಿಗೆ ಇದೆ. ಆತ್ಮಸ್ಥೈರ್ಯದಿಂದ ಇರಬೇಕು ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿಡಿಯೋ ಸಂವಾದ..

ರಾಜ್ಯ ಹಾಗೂ ಕೇಂದ್ರ ಸರ್ಕಾರವು ಕೊರೊನಾ ನಿಯಂತ್ರಣಕ್ಕಾಗಿ ಶಕ್ತಿ ಮೀರಿ ವ್ಯವಸ್ಥಿತ ಹಾಗೂ ವೈಜ್ಞಾನಿಕವಾಗಿ ಶ್ರಮಿಸುತ್ತಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನೇತೃತ್ವದ ರಾಜ್ಯ ಸರ್ಕಾರ ಕೈಗೊಂಡ ಕಟ್ಟುನಿಟ್ಟಿನ ಕ್ರಮಗಳ ಬಗ್ಗೆ, ಕೇಂದ್ರ ಆರೋಗ್ಯ ಇಲಾಖೆಯೇ ಮೆಚ್ಚುಗೆ ವ್ಯಕ್ತಪಡಿಸಿದೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಹಲವಾರು ಪ್ಯಾಕೇಜ್‍ಗಳನ್ನು ಜಾರಿಗೊಳಿಸುವ ಮೂಲಕ ಸಂಕಷ್ಟದಲ್ಲಿರುವ ಕುಲಕಸುಬು ಮಾಡುವವರಿಗೆ, ಕಾರ್ಮಿಕರಿಗೆ ಪರಿಹಾರ ವಿತರಿಸಿದೆ ಎಂದರು.

ಕೇಂದ್ರ ಸರ್ಕಾರದ ನಿರ್ದೇಶನಗಳೊಂದಿಗೆ ರಾಜ್ಯ ಸರ್ಕಾರವು ಕೆಲವು ನಿಬಂಧನೆಗಳನ್ನು ಜಾರಿಗೊಳಿಸುವ ಮೂಲಕ ಸಾರ್ವಜನಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು ನಿರ್ದೇಶನಗಳನ್ನು ಪಾಲಿಸುವಂತೆ ನಿರಂತರ ಮನವಿ ಮಾಡಲಾಗುತ್ತಿದೆ. ಸರ್ಕಾರೇತರ ಸಂಘ- ಸಂಸ್ಥೆಗಳು, ವಿದ್ಯಾವಂತರು, ಯುವಕರು ಜಾಗೃತಿ ಮೂಡಿಸಬೇಕು. ಪ್ರಯಾಣದ ವಿವರವನ್ನು ನೀಡದಿರುವ ಹಿನ್ನೆಲೆಯಲ್ಲಿ ಪ್ರಕರಣ ಹೆಚ್ಚಾಗುತ್ತಿವೆ. ಶಂಕಿತರು ಹಾಗೂ ಸೋಂಕಿತರು ತಮ್ಮ ಪ್ರಯಾಣದ ವಿವರವನ್ನು ಸಂಬಂಧಿಸಿದ ವೈದ್ಯಾಧಿಕಾರಿಗಳಿಗೆ ನೀಡಬೇಕು ಎಂದು ಅವರು ಮನವಿ ಮಾಡಿದರು.

ಶಿಕ್ಷಣ ಇಲಾಖೆಯು ಪಿಯುಸಿ ಪರೀಕ್ಷೆಗಳನ್ನು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ನಡೆಸಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ಶಿಕ್ಷಣ ತಜ್ಞರೊಂದಿಗೆ ಸುದೀರ್ಘವಾಗಿ ಚರ್ಚಿಸಿ, ಗ್ರಾಮೀಣ ಹಾಗೂ ನಗರ ಪ್ರದೇಶದ ವಿದ್ಯಾರ್ಥಿಗಳಿಗೂ ಅನುಕೂಲವಾಗುವಂತಹ ಉತ್ತಮ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.

ದೇವಸ್ಥಾನಗಳಲ್ಲೂ ಮುಂಜಾಗ್ರತಾ ಕ್ರಮವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗುತ್ತಿದೆ. ಬೆಂಗಳೂರು ನಗರ ಸೇರಿ ರಾಜ್ಯದ ಎಲ್ಲಾ ಪ್ರದೇಶಗಳಲ್ಲಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗುವುದು. ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ ಸ್ವಾವಲಂಬಿಯಾಗುತ್ತಿದೆ. ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದರು.

ಇಂಗ್ಲೆಂಡ್‌ನ ಗೋಪಾಲ್ ಕುಲಕರ್ಣಿ, ಇಟಲಿಯ ಹೇಮೇಗೌಡ, ಮಧು, ಯುಕೆಯ ಬಸವ ಪಾಟೀಲ್, ಯುಎಇಯ ಚಂದ್ರು ಅಂಗದಲ್ಲಿ, ಸೌದಿ ಅರೇಬಿಯದ ರವಿ ಮಹಾದೇವ ಅವರು ಈ ವಿಡಿಯೋ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಎಲ್ಲಾ ದೇಶಗಳ ಪ್ರತಿನಿಧಿಗಳಾಗಿ ಹಲವಾರು ಸಾಗರೋತ್ತರ ಕನ್ನಡಿಗರು ಸಂವಾದದಲ್ಲಿ ಪಾಲ್ಗೊಂಡು, ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.