ETV Bharat / state

ಪಾಟೀಲ ಪುಟ್ಟಪ್ಪ ನಿಧನಕ್ಕೆ ವಿಧಾನ ಪರಿಷತ್​ನಲ್ಲಿ ಸಂತಾಪ

author img

By

Published : Mar 17, 2020, 3:20 PM IST

ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ರಾಜ್ಯ ಸಭೆಯ ಮಾಜಿ ಸದಸ್ಯರಾಗಿದ್ದ ಪಾಟೀಲ ಪುಟ್ಟಪ್ಪ ನಿಧನಕ್ಕೆ ವಿಧಾನ ಪರಿಷತ್ ನಲ್ಲಿ ಸಂತಾಪ‌ ಸೂಚಿಸಲಾಯಿತು. ಮೃತರ ಗೌರವಾರ್ಥ ಸದನವನ್ನು 30 ನಿಮಿಷ ಮುಂದೂಡಿಕೆ ಮಾಡಲಾಯಿತು.

vidhana-parishadh-
ವಿಧಾನ ಪರಿಷತ್

ಬೆಂಗಳೂರು : ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ರಾಜ್ಯ ಸಭೆಯ ಮಾಜಿ ಸದಸ್ಯರಾಗಿದ್ದ ಪಾಟೀಲ ಪುಟ್ಟಪ್ಪ ನಿಧನಕ್ಕೆ ವಿಧಾನ ಪರಿಷತ್ ನಲ್ಲಿ ಸಂತಾಪ‌ ಸೂಚಿಸಲಾಯಿತು. ಮೃತರ ಗೌರವಾರ್ಥವಾಗಿ ಸದನವನ್ನು 30 ನಿಮಿಷ ಮುಂದೂಡಿಕೆ ಮಾಡಲಾಯಿತು.

ವಿಧಾನ ಪರಿಷತ್ ಕಲಾಪ ಆರಂಭಗೊಳ್ಳುತ್ತಿದ್ದಂತೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಸಂತಾಪ‌ ಸೂಚನೆ ಮಂಡಿಸಿ ಪ್ರಾಸ್ತಾವಿಕ ನುಡಿ ಮಾತನಾಡಿದ ಅವರು, ಕರ್ನಾಟಕದ ಗಡಿ ಭಾಗದ ಜಿಲ್ಲೆಗಳಲ್ಲಿ ಕನ್ನಡದ ಅಸ್ಮಿತೆಯ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು, ಹಲವಾರು ಕನ್ನಡಪರ ಹೋರಾಟಗಳ ನೇತೃತ್ವ ವಹಿಸಿದ್ದ ಶ್ರೀಯುತರು, ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಕಾರ್ಯನಿರ್ವಹಿಸಿ ಕೇಂದ್ರದಲ್ಲಿಯೂ ಸಹ ಕನ್ನಡ ಪರ ಧ್ವನಿಯಾಗಿದ್ದರು. ಧಾರವಾಡ ಹಾಗೂ ಕಲಬುರಗಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಯಲ್ಲಿ ಪಾಪು ಅವರ ಪಾತ್ರ ಮಹತ್ತರವಾದುದು ಎಂದು ತಿಳಿಸಿದರು.

ನಮ್ಮ ದೇಶ, ನಮ್ಮ ಜನ, ನನ್ನದು ಈ ಕನ್ನಡ ನಾಡು, ಕರ್ನಾಟಕ ಕಥೆ, ಪಾಪು ಪ್ರಪಂಚ, ಶಿಲಾಬಾಲಿಕೆ‌ ನುಡಿದಳು, ಗವಾಕ್ಷಿ ತೆರೆಯಿತು, ಸಾವಿನ ಮೇಜವಾನಿ ಮುಂತಾದ 46 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದ ಇವರು ಸಾಹಿತ್ಯ ಕ್ಷೇತ್ರದಲ್ಲಿ ಪಾಪು ಎಂದೇ ಖ್ಯಾತರಾಗಿದ್ದರು ಹಾಗೂ ಕನ್ನಡ ಕಾವಲು ಸಮಿತಿಯ ಪ್ರಥಮ ಅಧ್ಯಕ್ಷರಾಗಿ, 70ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಡೆದಾಡುವ ವಿಶ್ವಕೋಶ ಎಂದೇ ಖ್ಯಾತರಾಗಿದ್ದ ’ಪಾಪು’ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ನಾಡೋಜ ಪ್ರಶಸ್ತಿ, ಗೌರವ ಡಾಕ್ಟರೇಟ್ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ಪ್ರಶಸ್ತಿಗಳಲ್ಲದೇ ಇನ್ನಿತರ ಹತ್ತು ಹಲವಾರು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು. ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕವು ಹಿರಿಯ ದಿಗ್ಗಜರೊಬ್ಬರನ್ನು ಕಳೆದುಕೊಂಡಿದೆ‌ ಎಂದರು.

ಸಂತಾಪ ಸೂಚನೆ ಮೇಲೆ ಮಾತನಾಡಿದ ಸಭಾನಾಯಕರು ಹಾಗೂ ವಿರೋಧ ಪಕ್ಷದ ನಾಯಕರು ಸಭಾಪತಿಗಳ ಪ್ರಸ್ತಾಪಿಸಿ ಸಂತಾಪ ಸೂಚನೆಗೆ ಸಹಮತ ವ್ಯಕ್ತಪಡಿಸಿದರು. ನಂತರ ಮೃತರ ಗೌರವಾರ್ಥ ಒಂದು ನಿಮಿಷ ಮೌನ ಆಚರಿಸಿ ಕಲಾಪವನ್ನು‌ 30 ನಿಮಿಷ ಮುಂದೂಡಿಕೆ ಮಾಡಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.